ಬ್ರೇಕಿಂಗ್ ನ್ಯೂಸ್
27-03-23 02:03 pm Mangalore Correspondent ಕರಾವಳಿ
ಮಂಗಳೂರು, ಮಾ.27: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು ರೂಪಿಸಿದ್ದ ಸುಳ್ಯದ ಪಿಎಫ್ಐ ಕಚೇರಿಯನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಸುಳ್ಯ ಗಾಂಧಿನಗರ – ಆಲೆಟ್ಟಿ ರಸ್ತೆಯ ತಾಹಿರಾ ಕಾಂಪ್ಲೆಕ್ಸ್ ನಲ್ಲಿದ್ದ ಮೊದಲ ಮಹಡಿಯಲ್ಲಿದ್ದ ಪಿಎಫ್ಐ ಕಚೇರಿಯನ್ನು ಸಂಪೂರ್ಣ ವಶಕ್ಕೆ ಪಡೆಯಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಎನ್ಐಎ ತಂಡದ ಎಸ್ಪಿ ಶಣ್ಮುಗಂ ಈ ಬಗ್ಗೆ ಮಾರ್ಚ್ 25ರಂದು ಆದೇಶ ಮಾಡಿದ್ದಾರೆ.
ಸದ್ರಿ ಕಟ್ಟಡವನ್ನು ಯಾರಿಗೂ ಬಾಡಿಗೆ ಅಥವಾ ಲೀಸ್ ಕೊಡುವಂತಿಲ್ಲ. ಅಥವಾ ಇನ್ಯಾವುದೇ ಕೆಲಸಕ್ಕೆ ಬಳಸಿಕೊಳ್ಳುವಂತಿಲ್ಲ. ಅಲ್ಲಿರುವ ವಸ್ತುಗಳನ್ನಾಗಲೀ, ಇನ್ನಾವುದೇ ಸಾಮಗ್ರಿಗಳನ್ನು ಬೇರೆ ಕಡೆಗೆ ಸಾಗಿಸುವುದು, ನವೀಕರಣಗೊಳಿಸುವುದು ನಿಷಿದ್ಧ ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಪ್ರವೀಣ್ ನೆಟ್ಟಾರು ಕೊಲೆಯ ಮೂಲಕ ಸಮಾಜದಲ್ಲಿ ಭಯ ಮೂಡಿಸುವ ಉದ್ದೇಶ ಇದ್ದಿರುವುದು ತನಿಖೆಯಲ್ಲಿ ಕಂಡುಬಂದಿದ್ದು, ಹೀಗಾಗಿ ಇದೊಂದು ಭಯೋತ್ಪಾದಕ ಕೃತ್ಯ. ಈ ರೀತಿಯ ಭಯೋತ್ಪಾದಕ ಕೃತ್ಯಕ್ಕೆ ಸಂಚು ರೂಪಿಸಲು ಪಿಎಫ್ಐ ಕಚೇರಿಯನ್ನು ಬಳಸಿಕೊಂಡಿದ್ದಾರೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
1967ರ ಯುಎಪಿಎ ಕಾಯ್ದೆಯ ಸೆಕ್ಷನ್ 25ರಡಿ ದೇಶದ್ರೋಹ ಪ್ರಕರಣ ದಾಖಲಿಸಲಾಗಿದೆ. ಇದರಡಿ ಸದ್ರಿ ಕೃತ್ಯಕ್ಕೆ ಬಳಸಲಾದ ಆಯುಧಗಳು, ಕಟ್ಟಡಗಳನ್ನು ದೇಶದ್ರೋಹ ಕಾಯ್ದೆಯಡಿ ಜಪ್ತಿ ಮಾಡಲಾಗುತ್ತಿದೆ. ತನಿಖೆಯ ಸಂದರ್ಭ ಸಿಕ್ಕಿರುವ ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ಸದ್ರಿ ಕಟ್ಟಡ, ಕಚೇರಿಯನ್ನು ಜಪ್ತಿ ಮಾಡಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖ ಮಾಡಿದ್ದಾರೆ. ಇದಲ್ಲದೆ, ಪ್ರವೀಣ್ ನೆಟ್ಟಾರು ಕೊಲೆಯನ್ನು ಸಮಾಜದಲ್ಲಿ ಭೀತಿ ಮೂಡಿಸುವುದು, ಶಾಂತಿ- ಸೌಹಾರ್ದ ಕದಡುವುದು, ದೇಶದಲ್ಲಿ ಸಮಗ್ರತೆಗೆ ಧಕ್ಕೆ ತರುವ ಉದ್ದೇಶದಿಂದ ಮಾಡಲಾಗಿತ್ತು ಎಂದು ಎನ್ಐಎ ಹೇಳಿದೆ.
The National Investigation Agency (NIA) on Saturday seized the office of now banned Popular Front of India (PFI) in Dakshina Kannada district of Karnataka, officials privy to the matter said on Sunday. The PFI office is located on the first floor of a business complex on Alleti Road at Gandhinagara in Sullia of the district. The confiscation proceedings were conducted on Saturday in accordance with Section 25 of the Unlawful Activities Prevention Act, (UAPA) 1967.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 11:07 pm
Mangalore Correspondent
Jail Attack, Suhas Shetty, Mangalore, Chotte...
19-05-25 10:14 pm
Konaje Suicide, Mangalore, Hair loss: ಕೂದಲು ಉ...
19-05-25 09:41 pm
Mangalore Job Scam, Police, Lawrence Dsouza,...
19-05-25 05:22 pm
Akanksha Suicide, Dharmasthala, Mangalore: ಏರ...
19-05-25 12:31 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm