ಬ್ರೇಕಿಂಗ್ ನ್ಯೂಸ್
29-03-23 04:12 pm Mangalore Correspondent ಕರಾವಳಿ
ಮಂಗಳೂರು, ಮಾ.29: ಇತ್ತ ಚುನಾವಣೆ ಘೋಷಣೆಯಾಗಿ ರಾಜಕೀಯ ಚಟುವಟಿಕೆ ಗರಿಗೆದರಿದ್ದರೆ, ಕರಾವಳಿಯ ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರೇ ಬಂಡಾಯ ಸಾರಿದ್ದಾರೆ. ಸುಳ್ಯಕ್ಕೆ ಅಭ್ಯರ್ಥಿಯೆಂದು ಘೋಷಿಸಿರುವ ಜಿಗಣಿ ಕೃಷ್ಣಪ್ಪ ಅವರನ್ನು ಬದಲಿಸಬೇಕೆಂದು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಂದಕುಮಾರ್ ಅವರೇ ನಮ್ಮ ಅಭ್ಯರ್ಥಿ, ಅವರನ್ನು ಬಿಟ್ಟು ಬೇರೆಯವರಿಗೆ ಸೀಟು ಕೊಟ್ಟರೆ ನಾವು ಪಕ್ಷದ ಪರ ಕೆಲಸ ಮಾಡಲ್ಲ ಎಂದು ಘೋಷಣೆ ಕೂಗಿದ್ದಾರೆ.
ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯ ಮುಂದೆ ಸೇರಿದ ನೂರಾರು ಕಾರ್ಯಕರ್ತರು ಘೋಷಿತ ಅಭ್ಯರ್ಥಿ ವಿರುದ್ಧವೇ ಘೋಷಣೆ ಹಾಕಿದ್ದಾರೆ. ತಮಗೆ ಜಿಗಣಿ ಕೃಷ್ಣಪ್ಪ ಅಭ್ಯರ್ಥಿಯಾಗೋದು ಬೇಡ, ನಮ್ಮ ಅಭ್ಯರ್ಥಿ ನಂದಕುಮಾರ್ ಎಂದು ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ನಂದಕುಮಾರ್ ನಾಲ್ಕು ವರ್ಷಗಳಿಂದ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಕಾರ್ಯಕರ್ತರ ಜೊತೆಗೆ ನಿಂತು ಬೇರೆ ಬೇರೆ ಮೂಲಗಳಿಂದ ಅನುದಾನ ಕೊಡಿಸಿದ್ದಾರೆ. ಈ ಬಾರಿ ಅವರನ್ನೇ ಅಭ್ಯರ್ಥಿ ಮಾಡುತ್ತಾರೆಂದು ನಂಬಿದ್ದೆವು. ಆದರೆ ಮೊನ್ನೆ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಅಭ್ಯರ್ಥಿ ಬದಲಾಗಿರುವುದು ತಿಳಿದುಬಂದಿದ್ದು ಎಂದು ಕಾರ್ಯಕರ್ತರು ಹೇಳಿದ್ದಾರೆ.
ನಾವು ಪಕ್ಷದ ವಿರುದ್ಧ ಪ್ರತಿಭಟನೆ ಮಾಡಿಲ್ಲ. ನಮ್ಮ ಕಾರ್ಯಕರ್ತರ ಭಾವನೆಗೆ ಬೆಲೆ ಕೊಡದೆ ನಾಯಕರು ಟಿಕೆಟ್ ಘೋಷಣೆ ಮಾಡಿದ್ದಾರೆ. ನಮ್ಮಲ್ಲಿ ಸರ್ವೆ ನಡೆಸಿದಾಗಲೂ ನಂದಕುಮಾರ್ ಪರವಾಗಿಯೇ ಹೆಚ್ಚು ಮತಗಳು ಬಂದಿದ್ದವು. ಅವರೇ ನಮ್ಮ ನಾಯಕರಾಗಿದ್ದು, ಅವರಿಗೆ ಬಿ ಫಾರ್ಮ್ ಕೊಟ್ಟರೆ ನಾವು 35 ವರ್ಷಗಳ ಬಳಿಕ ಸುಳ್ಯದಲ್ಲಿ ಕಾಂಗ್ರೆಸನ್ನು ಗೆಲ್ಲಿಸುತ್ತೇವೆ ಎಂದು ತಾಪಂ ಸದಸ್ಯೆ ಉಷಾ ಅಂಚನ್ ಹೇಳಿದರು. ಕಾರ್ಯಕರ್ತರು ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದ್ದು ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಬೆಂಗಳೂರಿಗೆ ತೆರಳಿದ್ದರಿಂದ ಉಪಾಧ್ಯಕ್ಷ ಸದಾಶಿವ ಉಳ್ಳಾಲ್ ಮನವಿ ಸ್ವೀಕರಿಸಿ, ಕಾರ್ಯಕರ್ತರ ಭಾವನೆಯನ್ನು ರಾಜ್ಯ ನಾಯಕರಿಗೆ ಕಳಿಸಿಕೊಡುವುದಾಗಿ ತಿಳಿಸಿದ್ದಾರೆ.
ಸುಳ್ಯ ವಿಧಾನಸಭೆ ಕ್ಷೇತ್ರಕ್ಕೆ ಮೊನ್ನೆ ಅಭ್ಯರ್ಥಿ ಘೋಷಣೆಯಾದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದರು. ಸುಳ್ಯ ಮತ್ತು ಕಡಬ ಬ್ಲಾಕ್ ಮಟ್ಟದಲ್ಲಿ ಕಾರ್ಯಕರ್ತರೇ ಭಾರೀ ಸಂಖ್ಯೆಯಲ್ಲಿ ಸಭೆ ಸೇರಿ ವಿರೋಧ ಸೂಚಿಸಿದ್ದರು. ಇದೀಗ ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಹೈಡ್ರಾಮಾ ನಡೆಸಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಟಿಕೆಟ್ ಆಕಾಂಕ್ಷಿಗಳ ಪರವಾಗಿ ಈ ರೀತಿಯ ಬಂಡಾಯ ಏಳುವುದು ಸಹಜವಾಗಿದ್ದರೂ, ಸುಳ್ಯದಲ್ಲಿ ಇದೇ ಮೊದಲ ಬಾರಿಗೆ ಇಂತಹ ಬೆಳವಣಿಗೆ ನಡೆದಿದೆ. ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿಗೆ ಬಂದಿದ್ದು, ಮುಂದೆ ಬೆಂಗಳೂರಿಗೆ ತೆರಳಿ ಕೆಪಿಸಿಸಿ ಅಧ್ಯಕ್ಷರನ್ನು ಭೇಟಿಯಾಗಲು ನಿರ್ಧರಿಸಿದ್ದಾರೆ.
Several party workers of Congress and Nanadakumar Abhimani Balaga thronged Dakshina Kannada district Congress office in the city on Wednesday March 29, demanding a change of candidature in the Sullia constituency. The protestors raised slogans demanding justice and claiming that the party should reconsider and modify the candidature in the Sullia constituency. The party should field H M Nandakumar for the forthcoming assembly elections.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 11:07 pm
Mangalore Correspondent
Jail Attack, Suhas Shetty, Mangalore, Chotte...
19-05-25 10:14 pm
Konaje Suicide, Mangalore, Hair loss: ಕೂದಲು ಉ...
19-05-25 09:41 pm
Mangalore Job Scam, Police, Lawrence Dsouza,...
19-05-25 05:22 pm
Akanksha Suicide, Dharmasthala, Mangalore: ಏರ...
19-05-25 12:31 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm