ಬ್ರೇಕಿಂಗ್ ನ್ಯೂಸ್
29-03-23 11:07 pm Mangalore Correspondent ಕರಾವಳಿ
ಮಂಗಳೂರು, ಮಾ.29 : ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು ತಕ್ಷಣದಿಂದಲೇ ನೀತಿಸಂಹಿತೆ ಜಾರಿಗೊಂಡ ಕಾರಣ ಸರ್ಕಾರದ ಅನುದಾನವನ್ನು ಬಳಸಿಕೊಂಡು ಹಾಕಿರುವ ಜಾಹೀರಾತು ಫ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್ಸ್ ಗಳನ್ನು ಜಿಲ್ಲೆಯಾದ್ಯಂತ ಕೂಡಲೇ ತೆರವುಗೊಳಿಸುವಂತೆ ಜಿಲ್ಲೆಯ ಎಲ್ಲಾ ಚುನಾವಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕುಮಾರ್ ನಿರ್ದೇಶನ ನೀಡಿದರು.
ಮಾ.29ರ ಬುಧವಾರ ಈ ಕುರಿತು ಹಮ್ಮಿಕೊಂಡಿದ್ದ ವಿಡಿಯೋ ಕಾನ್ಪರೆನ್ಸ್ ಸಭೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೊಂಡಿದೆ, ಕಾರಣ ಅಧಿಕೃತ ಹಾಗೂ ಅನಧಿಕೃತವಾಗಿ ಹಾಕಲಾಗಿರುವ ಎಲ್ಲಾ ರೀತಿಯ ಜಾಹೀರಾತುಗಳನ್ನು ತೆರವುಗೊಳಿಸಬೇಕು, ಅಧಿಕಾರಿಗಳು ಕೂಡಲೇ ಕಾರ್ಯ ಪ್ರವೃತ್ತರಾಗಬೇಕು, ಯಾವುದೇ ಸರ್ಕಾರಿ ಕಚೇರಿಯಲ್ಲಿ, ಸರ್ಕಾರದ ಅಧಿಕೃತ ವೆಬ್ಸೈಟ್ಗಳಲ್ಲಿ ಹಾಕಲಾಗಿರುವ ರಾಜಕೀಯ ಪಕ್ಷಗಳ ಮುಖಂಡರ ಭಾವಚಿತ್ರಗಳನ್ನು ಈ ಕೂಡಲೇ ತೆರವುಗೊಳಿಸಬೇಕು ಎಂದ ಅವರು, 24 ಗಂಟೆಯೊಳಗೆ ನಿರ್ವಹಿಸಬೇಕಾದ ಕರ್ತವ್ಯಗಳನ್ನು ವಿವರಿಸಿದರು.
ಒಮ್ಮೆ ತೆರವು ಮಾಡಲಾದ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ ಹಾಗೂ ಕಟೌಟ್ಗಳನ್ನು ಪುನಃ ಅಳವಡಿಸಿದ್ದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ ಹಾಗೂ ಕರ್ನಾಟಕ ತೆರೆದ ಸ್ಥಳಗಳ (ವಿರೂಪಗೊಳಿಸುವಿಕೆ ತಡೆಗಟ್ಟುವ) ಕಾಯ್ದೆ-1981ರಂತೆ ಆರು ತಿಂಗಳ ಜೈಲು ಶಿಕ್ಷೆ, ಎರಡು ಸಾವಿರ ರೂ. ದಂಡ ವಿಧಿಸಬಹುದಾಗಿದೆ, ಅದನ್ನು ಅನುಷ್ಠಾನಗೊಳಿಸುವಂತೆಯೂ ಸಲಹೆ ನೀಡಿದರು.
ಅದೇ ರೀತಿ ಸಂಬಂಧಿಸಿದ ಅಧಿಕಾರಿಗಳು ಕೈಗೊಂಡ ಕ್ರಮಗಳ ಬಗ್ಗೆ ನಿಗದಿತ ಕಾಲಮಿತಿಯಲ್ಲಿ ವರದಿ ನೀಡಬೇಕು, ಅಧಿಕಾರಿಗಳು ಚುನಾವಣಾ ಕರ್ತವ್ಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು, ನಿರ್ಲಕ್ಷ್ಯಕ್ಕೆ ಅವಕಾಶವಿಲ್ಲದಂತೆ ಕಾರ್ಯ ನಿರ್ವಹಿಸುವಂತೆ ಎಚ್ಚರಿಕೆ ನೀಡಿದರು. ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಮಾತನಾಡಿ, ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾ ಅಧಿಕಾರಿಗಳು ಚುನಾವಣಾ ಆಯೋಗಕ್ಕೆ ನೀಡಬೇಕಾದ ವರದಿಗಳನ್ನು ಕೂಡಲೇ ನೀಡುವಂತೆ ತಿಳಿಸಿದರು. ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾ ಅಧಿಕಾರಿಗಳು, ತಹಶೀಲ್ದಾರರು, ಸಂಬಂಧಪಟ್ಟ ತಾಲೂಕು ಪಂಚಾಯತ್ ಕಾರ್ಯ ನಿರ್ವಣಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪುರಸಭೆಗಳ ಮುಖ್ಯಾಧಿಕಾರಿಗಳು ಭಾಗವಹಿಸಿದ್ದರು.
Immidete removal of government banners and political flex to be removed immidetely says officals in Mangalore.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
22-09-26 02:57 pm
HK News Staffer
ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತಕ್ಕೆ ಟ್ರಾಪ್ ಆದ ಬಜ್ಪ...
21-09-26 08:21 pm
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm