ಬ್ರೇಕಿಂಗ್ ನ್ಯೂಸ್
02-04-23 04:41 pm Mangalore Correspondent ಕರಾವಳಿ
ಮಂಗಳೂರು, ಎ.2 : ನಗರದ ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹಕ್ಕೆ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ನೇತೃತ್ವದಲ್ಲಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.
ನಗರ ಕಮಿಷನರೇಟ್ ವ್ಯಾಪ್ತಿಯ ಡಿ.ಸಿ.ಪಿ, ಎ.ಸಿ.ಪಿ, ಇನ್ಸ್ ಪೆಕ್ಟರ್, ಪಿ.ಎಸ್.ಐ ಸೇರಿದಂತೆ 180 ಕ್ಕೂ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಜೈಲಿನಲ್ಲಿ ಅಕ್ರಮ ಚಟುವಟಿಕೆ ನಡೀತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ.





ಜೈಲಿನಲ್ಲಿ ಒಂದೂವರೆ ಗಂಟೆ ಕಾಲ ತಪಾಸಣೆ ನಡೆಸಿದ್ದು ಕೈದಿಗಳ ಸೆಲ್ ಒಳಗಡೆಯೂ ತಪಾಸಣೆ ನಡೆಸಿದ್ದಾರೆ. ಪರಿಶೀಲನೆ ಬಳಿಕ ಹೊರಬಂದ ಕಮಿಷನರ್ ಕುಲದೀಪ್ ಜೈನ್, ಈ ರೀತಿ ತಪಾಸಣೆ ಪ್ರತಿ ಬಾರಿ ನಡೆಸಲಾಗುವುದು. ಕೈದಿಗಳ ಬಳಿ ಬೀಡಿ, ಸಿಗರೇಟ್, ಗುಟ್ಕಾ, ಪಾನ್ ಮಸಾಲಾ ಪತ್ತೆಯಾಗಿದೆ. ಯಾವುದೇ ನಿಷೇಧಿತ ವಸ್ತುಗಳು ಪತ್ತೆಯಾಗಿಲ್ಲ. ಜೈಲಿನ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದು ಈ ರೀತಿಯ ಮಾದಕ ವಸ್ತುಗಳು ಹೇಗೆ ಕೈದಿಗಳಿಗೆ ಸಿಗುತ್ತದೆ ಎಂಬ ಬಗ್ಗೆ ಪರಿಶೀಲನೆ ನಡೆಸಲು ಸೂಚಿಸಿದ್ದೇನೆ ಎಂದರು.
ಪೊಲೀಸರು ದಾಳಿ ನಡೆಸುವ ಮಾಹಿತಿ ಕೈದಿಗಳಿಗೆ ಮೊದಲೇ ತಲುಪಿರುವ ಶಂಕೆಯಿದೆ. ಹೀಗಾಗಿ ಗಾಂಜಾ ರೀತಿಯ ಮಾದಕ ವಸ್ತುಗಳು ಪರಿಶೀಲನೆ ವೇಳೆ ಸಿಕ್ಕಿಲ್ಲ. ಚುನಾವಣೆ ಸಂದರ್ಭದಲ್ಲಿ ಫೋನ್ ಮೂಲಕ ಜೈಲಿನಿಂದ ಬೆದರಿಕೆ ಹಾಕುವುದು, ಹಣಕ್ಕಾಗಿ ಹಫ್ತಾ ಕೇಳುವ ಮುನ್ಸೂಚನೆ ಇರುವುದರಿಂದ ಪೊಲೀಸರು ದಿಢೀರ್ ದಾಳಿ ನಡೆಸಿದ್ದರು.
Police Commissioner Kuldeep Kumar Jain conducts a surprise raid and inspection in Mangalore prison. Commissioner of police said that it was a routine inspection carried out in the prison. “The police could not find any banned items inside the prison except for beedi and cigarettes. The inspection was completed within an hour and a half,” he said.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 07:09 pm
HK News Desk
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
15-11-25 07:42 pm
Mangalore Correspondent
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
Kumapal Dog Attack, Ullal, Mangalore: ಕುಂಪಲ ಬ...
14-11-25 11:01 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm