ಬ್ರೇಕಿಂಗ್ ನ್ಯೂಸ್
03-04-23 10:21 pm Udupi Correspondent ಕರಾವಳಿ
ಉಡುಪಿ, ಎ.3 : ಕುಂದಾಪುರದ ವಾಜಪೇಯಿ ಎಂದೇ ಫೇಮಸ್ ಆಗಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ ಚುನಾವಣೆ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಐದು ಬಾರಿ ನಿರಂತರ ಶಾಸಕರಾಗಿರುವ ಶ್ರೀನಿವಾಸ ಶೆಟ್ಟಿ ಈ ಬಾರಿ ಚುನಾವಣೆ ಸ್ಪರ್ಧಿಸಲ್ಲ ಎಂದು ಘೋಷಣೆ ಮಾಡಿದ್ದಾರೆ.
ಈ ಬಾರಿಯೂ ಹಾಲಾಡಿ ಶ್ರೀನಿವಾಸ ಶೆಟ್ಟಿ ತನ್ನ ಕೊನೆಯ ಚುನಾವಣೆಯನ್ನು ಎದುರಿಸುತ್ತಾರೆ ಎಂಬ ಮಾತುಗಳಿದ್ದವು. ಆದರೆ ಹಾಲಾಡಿ ಶ್ರೀನಿವಾಸ ಶೆಟ್ಟಿ ದಿಢೀರ್ ಆಗಿ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಈಗಿನ ರಾಜಕೀಯಕ್ಕೆ ನನ್ನ ಮನಸ್ಸು ಒಪ್ಪುವುದಿಲ್ಲ ಎಂಬ ಅಭಿಪ್ರಾಯಗಳನ್ನು ಹಾಲಾಡಿ ತಮ್ಮ ಆಪ್ತರ ಜೊತೆ ಹೇಳಿಕೊಂಡಿದ್ದು ಇದೇ ಹಿನ್ನೆಲೆಯಲ್ಲಿ ರಾಜಕೀಯದಿಂದ ದೂರ ಸರಿದಿದ್ದಾರೆ.
ಭಾನುವಾರ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲೂ ಹಾಲಾಡಿ ಶ್ರೀನಿವಾಸ ಶೆಟ್ಟಿ ಭಾಗವಹಿಸಿದ್ದರು. ರಾಜ್ಯದ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಮುಂದೆ ಪಕ್ಷ ಅವಕಾಶ ಕೊಟ್ಟರೆ ಸ್ಪರ್ಧಿಸುವುದಾಗಿ ಹೇಳಿದ್ದರು. ಆದರೆ ಇದ್ದಕ್ಕಿದ್ದಂತೆ ತಮ್ಮ ಆಪ್ತರ ಜೊತೆ ನಿವೃತ್ತಿಯ ಮಾತುಗಳನ್ನಾಡಿ ಸೋಮವಾರ ಸಂಜೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
ಕುಂದಾಪುರ ಕ್ಷೇತ್ರದ ಜನ ನನ್ನನ್ನು ಐದು ಬಾರಿ ಆಯ್ಕೆ ಮಾಡಿದ್ದಾರೆ. ಗ್ರಾಮೀಣ ಭಾಗ ಹೆಚ್ಚಿರುವ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡುವ ಅವಕಾಶ ಸಿಕ್ಕಿದೆ. ಕುಂದಾಪುರ ಕ್ಷೇತ್ರದ ಶಾಸಕನಾಗಿ ನಿಷ್ಠೆಯಿಂದ, ಪ್ರೀತಿಯಿಂದ ಕೆಲಸ ಮಾಡಿದ್ದೇನೆ. ಈ ಬಾರಿ ಸ್ವಇಚ್ಛೆಯಿಂದ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ಐದು ಬಾರಿ ದಾಖಲೆಯ ಮತಗಳಿಂದ ಗೆಲ್ಲಿಸಿದ್ದಕ್ಕೆ ಮತದಾರರಿಗೆ ಧನ್ಯವಾದ ಹೇಳುತ್ತೇನೆ. ಅಧಿಕಾರಿ ವರ್ಗ, ಕುಂದಾಪುರ ಜನತೆ ಮತ್ತು ಮಾಧ್ಯಮಗಳಿಗೆ ಧನ್ಯವಾದ. ಪಕ್ಷದ ಕಾರ್ಯಕರ್ತರಿಗೆ, ಬಿಜೆಪಿ ನಾಯಕರಿಗೆ ಅಭಿಮಾನಿಗಳಿಗೆ ನಾನು ಚಿರಋಣಿ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಎಲ್ಲ ಮತ ಬಾಂಧವರು ಸಹಕರಿಸಿ ಎಂದು ಮನವಿ ಮಾಡಿದ್ದಾರೆ.
ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಮೂರನೇ ಹಣಕಾಸು ಆಯೋಗದ ಅಧ್ಯಕ್ಷರಾಗಿದ್ದ ಸಹಕಾರಿ ಧುರೀಣ, ಎ.ಜಿ ಕೊಡ್ಗಿ ರಾಜಕೀಯಕ್ಕೆ ಕರೆತಂದಿದ್ದರು. ಆರಂಭದ ಎರಡು ಅವಧಿಗಳಲ್ಲಿ ಹಾಲಾಡಿಯ ಗೆಲುವಿನ ಹಿಂದೆ ಕೊಡ್ಗಿಯವರ ಬೆಂಬಲವೂ ಇತ್ತು. ಗುರುವಿನ ಋಣವನ್ನು ತೀರಿಸಲು ಎ.ಜಿ ಕೊಡ್ಗಿ ಅವರ ಪುತ್ರ ಕಿರಣ್ ಕೊಡ್ಗಿ ಅವರಿಗೆ ಈ ಬಾರಿ ಕುಂದಾಪುರದ ಟಿಕೆಟ್ ಕೊಡಿಸಲು ಹಾಲಾಡಿ ಉತ್ಸುಕರಾಗಿದ್ದಾರೆ ಎನ್ನಲಾಗುತ್ತಿದೆ.
ಹಾಲಾಡಿ ಶ್ರೀನಿವಾಸ ಶೆಟ್ಟಿ ರಾಜಕೀಯ ನಿವೃತ್ತಿಯಾಗಿ ಕುಂದಾಪುರದ ಬಿಜೆಪಿ ಟಿಕೆಟ್ ಬ್ರಾಹ್ಮಣ ಸಮುದಾಯದ ಕೊಡ್ಗಿಗೆ ಸಿಕ್ಕರೆ ಇಡೀ ಜಿಲ್ಲೆಯ ರಾಜಕೀಯ ಚಿತ್ರಣ ಬದಲಾಗುವ ನಿರೀಕ್ಷೆಯಿದೆ. ಹಾಲಾಡಿ ಬಂಟ ಸಮುದಾಯಕ್ಕೆ ಸೇರಿದ್ದು ಆ ಸಮುದಾಯಕ್ಕೆ ಜಿಲ್ಲೆಯಲ್ಲಿ ಬೇರೆ ಕಡೆ ಟಿಕೆಟ್ ಕೊಡಬೇಕಾಗುತ್ತದೆ. ಬ್ರಾಹ್ಮಣ ಸಮುದಾಯದ ಕಿರಣ್ ಕೊಡ್ಗಿ ಟಿಕೆಟ್ ಪಡೆದಲ್ಲಿ ಉಡುಪಿ ಶಾಸಕ ರಘುಪತಿ ಭಟ್ ಟಿಕೆಟ್ ಕೈತಪ್ಪಲಿದೆ. ಹೀಗಾಗಿ ಉಡುಪಿಯಲ್ಲಿ ಜಾತಿ ಕೋಟಾ ಸರಿದೂಗಿಸಲು ಉದಯ ಕುಮಾರ್ ಶೆಟ್ಟಿ ಟಿಕೆಟ್ ಪಡೆಯುತ್ತಾರೆಯೇ ಎಂಬ ಲೆಕ್ಕಾಚಾರ ನಡೆದಿದೆ.
With the state gearing up to vote in the coming weeks, Kundapura MLA Halady Srinivas Shetty has officially announced on Monday, April 3 that he will not be contesting the upcoming Assembly polls and sought the support of the constituency to the candidate the party chooses.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 11:07 pm
Mangalore Correspondent
Jail Attack, Suhas Shetty, Mangalore, Chotte...
19-05-25 10:14 pm
Konaje Suicide, Mangalore, Hair loss: ಕೂದಲು ಉ...
19-05-25 09:41 pm
Mangalore Job Scam, Police, Lawrence Dsouza,...
19-05-25 05:22 pm
Akanksha Suicide, Dharmasthala, Mangalore: ಏರ...
19-05-25 12:31 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm