ಬ್ರೇಕಿಂಗ್ ನ್ಯೂಸ್
06-04-23 02:14 pm Mangaluru Correspondent ಕರಾವಳಿ
ಮಂಗಳೂರು, ಎ.6: ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಮಹಿಳೆಯೊಬ್ಬರ ಜೊತೆಗಿರುವ ಖಾಸಗಿ ಕ್ಷಣಗಳ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಚುನಾವಣೆ ಕಾಲದಲ್ಲಿ ಬಿಜೆಪಿಗೆ ಮುಜುಗರ ಸೃಷ್ಟಿಸಿದೆ.
ಎ.5ರಂದು ಫೋಟೋ ವೈರಲ್ ಆಗುತ್ತಿದ್ದಂತೆ ಉಪ್ಪಿನಂಗಡಿ ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ನೀಡಿದ್ದು, ತನ್ನ ಫೋಟೋವನ್ನು ಯಾರೋ ಎಡಿಟ್ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆಂದು ದೂರಿದ್ದಾರೆ. ಈ ಬಗ್ಗೆ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ.
ಶಾಸಕ ಸಂಜೀವ ಮಠಂದೂರು ಅವರಿಗೆ ಈ ಬಾರಿ ಟಿಕೆಟ್ ಇಲ್ಲವೆಂದು ಚರ್ಚೆ ಒಂದೆಡೆ ಇದ್ದರೆ, ಇದರ ನಡುವಲ್ಲೇ ಗೌಡ ಸಮುದಾಯದ ಮುಖಂಡರು ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿಯಾಗಿ ಮಠಂದೂರು ಅವರಿಗೆ ಮತ್ತೆ ಟಿಕೆಟ್ ನೀಡಬೇಕೆಂದು ಒತ್ತಾಯ ಮಾಡಿದ್ದರು. ಇದರ ಬೆನ್ನಲ್ಲೇ ಫೋಟೋ ಮತ್ತು ವಿಡಿಯೋ ಹರಿಯಬಿಡಲಾಗಿದೆ. ಈ ವಿಡಿಯೋ ಯಾವಾಗಿನದ್ದು, ಎಲ್ಲಿಂದ ಸೃಷ್ಟಿಯಾಗಿದೆ ಎನ್ನುವುದು ಗೊತ್ತಿಲ್ಲ. ಶಾಸಕರ ಫೋಟೊ ಜಾಲತಾಣದಲ್ಲಿ ಫಾರ್ವರ್ಡ್ ಮಾಡುತ್ತಿರುವ ಬಗ್ಗೆ ಪೊಲೀಸರು ಐಟಿ ಏಕ್ಟ್ ಅಡಿ ಪ್ರಕರಣ ದಾಖಲಿಸಿದ್ದಾರೆ.
ಚುನಾವಣೆ ಸಮಯದಲ್ಲಿಯೇ ಬಿಜೆಪಿ ಶಾಸಕನ ಅಶ್ಲೀಲ ಫೋಟೊ ಬಿಡುಗಡೆ ಆಗಿರುವುದು ಸಂಚಲನ ಮೂಡಿಸಿದ್ದು, ಕಾಂಗ್ರೆಸ್ ಪಾಲಿಗೆ ಅಸ್ತ್ರ ನೀಡಿದಂತಾಗಿದೆ. ವರ್ಷದ ಹಿಂದೆಯೇ ಪುತ್ತೂರಿನಲ್ಲಿ ಶಾಸಕರ ವಿಡಿಯೋ ಇದೆಯೆಂದು ವದಂತಿ ಹಬ್ಬಿತ್ತು. ಆದರೆ ಅದು ಬಿಡುಗಡೆ ಆಗಿರಲಿಲ್ಲ. ಇದೀಗ ಉದ್ದೇಶಪೂರ್ವಕವಾಗಿ ವಿಡಿಯೋ ಮತ್ತು ಫೋಟೊಗಳನ್ನು ಹರಿಯಬಿಡಲಾಗಿದೆ ಎನ್ನುವುದು ಕಂಡುಬರುತ್ತದೆ.
A purported photograph of a Puttur BJP MLA Sanjeeva Matandoor with an unknown woman has gone viral on social media. The woman in the photograph has filed a police complaint at the Uppinangady Police Station alleging that the viral picture was doctored.
23-09-26 05:14 pm
HK News Staffer
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
ಅರಣ್ಯ ಇಲಾಖೆ ಎಂದರೆ ಜನರಿಗೆ ಕಷ್ಟ ಕೊಡುವ ಇಲಾಖೆ ; ನ...
22-09-26 08:30 pm
23-09-26 04:21 pm
HK News Staffer
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
23-09-26 09:55 am
HK News Staffer
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್...
22-09-26 08:32 pm
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
23-09-26 05:12 pm
HK News Staffer
ರೌಡಿಶೀಟರ್ ಜೊತೆಗೆ ಹುಟ್ಟುಹಬ್ಬ ಪಾರ್ಟಿಯಲ್ಲಿ ಕುಡಿದ...
23-09-26 05:10 pm
ಸೈಬರ್ ಕ್ರೈಮ್ ಪೊಲೀಸರೆಂದು ಹೇಳಿ ವೈದ್ಯರಿಂದಲೇ 1.19...
23-09-26 09:32 am
Inspector Balakrishna Arrest, Police: ಮೇಲಧಿಕಾ...
22-09-26 09:00 pm
ಅತಿ ವೇಗದ ಚಾಲನೆ ; ಮರೋಳಿಯಲ್ಲಿ ಹೈಟೆನ್ಶನ್ ವಿದ್ಯುತ...
22-09-26 07:05 pm