ಬ್ರೇಕಿಂಗ್ ನ್ಯೂಸ್
06-04-23 11:31 pm Udupi Staffer ಕರಾವಳಿ
ಉಡುಪಿ, ಎ.6: ಉಡುಪಿ ಕ್ಷೇತ್ರದ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಅಸಮಾಧಾನ ಸ್ಫೋಟಗೊಂಡಿದ್ದು ಮೀನುಗಾರ ಸಮುದಾಯದ ಉದ್ಯಮಿ ಪ್ರಸಾದ್ ಕಾಂಚನ್ ಗೆ ಟಿಕೆಟ್ ನೀಡಿದ್ದನ್ನು ವಿರೋಧಿಸಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಕೃಷ್ಣಮೂರ್ತಿ ಆಚಾರ್ಯ ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ.
ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಬಯಸಿ ಎಂಟು ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು. ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು, ಬ್ಲಾಕ್ ಅಧ್ಯಕ್ಷ ರಮೇಶ್ ಕಾಂಚನ್, ಅಮೃತ್ ಶೆಣೈ, ಕೃಷ್ಣಮೂರ್ತಿ ಆಚಾರ್ಯ ಸಹಿತ ಎಂಟು ಮಂದಿ ಟಿಕೆಟ್ ಪಡೆಯಲು ಕಸರತ್ತು ನಡೆಸಿದ್ದರು. ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ ಟಿಕೆಟ್ ಯುವ ಉದ್ಯಮಿ ಪ್ರಸಾದ್ ಕಾಂಚನ್ ಪಾಲಾಗಿದೆ.
ಇದರ ಬೆನ್ನಲ್ಲೇ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಲ್ಲಿ ಅಸಮಾಧಾನ ಸ್ಫೋಟವಾಗಿದ್ದು ಪ್ರಬಲ ಆಕಾಂಕ್ಷಿ ಕೃಷ್ಣಮೂರ್ತಿ ಆಚಾರ್ಯ ಗುರುವಾರ ಸಂಜೆ ಬೆಂಬಲಿಗರ ಸಭೆ ನಡೆಸಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅಲ್ಲದೆ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಅಭಿಮಾನಿಗಳ ಸಭೆಯಲ್ಲಿ ಘೋಷಿಸಿದ್ದಾರೆ.
ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚಾರ್ಯ ಪಕ್ಷದ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು ವೈಯಕ್ತಿಕ ಕಾರಣಗಳಿಂದ ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ಉಡುಪಿ ಮಠದ ಬಳಿಯ ಮಥುರಾ ಛತ್ರ ಹೊಟೇಲ್ ನಲ್ಲಿ ನಡೆದ ಅಭಿಮಾನಿಗಳ ಸಭೆಯಲ್ಲಿ ಮೊನ್ನೆ ಬಂದವರಿಗೆ ಟಿಕೆಟ್ ನೀಡಿ ನನಗೆ ಅನ್ಯಾಯ ಮಾಡಲಾಗಿದೆ. ಅಭಿಮಾನಿಗಳ ಸಹಕಾರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಸಭೆಯಲ್ಲಿ ನೂರಾರು ಮಂದಿ ಅಭಿಮಾನಿಗಳು ಸೇರಿದ್ದರು
Krishnamurthy Acharya, a ticket aspirant for the Congress party in the Udupi assembly constituency, has resigned from the party's primary membership. The announcement was made on Thursday, April 06.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 06:45 pm
HK News Staffer
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm