ಬ್ರೇಕಿಂಗ್ ನ್ಯೂಸ್
09-04-23 05:23 pm Mangaluru Corresondent ಕರಾವಳಿ
ಬಂಟ್ವಾಳ, ಎ.9: ಶಾಲೆಯಿಂದ ನೇರವಾಗಿ ಅಜ್ಜಿ ಮನೆಗೆ ಬಂದು ದಿಢೀರ್ ನಾಪತ್ತೆಯಾಗಿದ್ದ ಬಾಲಕ ಮನೆ ಬಳಿಯಲ್ಲೇ ಇರುವ ಕೆರೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಸಮೀಪದ ಮಿತ್ತಬೈಲಿನ ಕಳ್ಳಿಗೆ ಗ್ರಾಮದಲ್ಲಿ ನಡೆದಿದೆ.
ಬಿ.ಸಿ.ರೋಡಿನ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಅಝೀಂ (13) ಮೃತ ಬಾಲಕ. ಸ್ಥಳೀಯ ನಿವಾಸಿ ಅಬ್ದುಲ್ ರಝಾಕ್ ಎಂಬವರ ಪುತ್ರನಾಗಿದ್ದು ಶನಿವಾರ ಶಾಲೆ ಬಿಟ್ಟು ಅಜ್ಜಿ ಮನೆಗೆ ತೆರಳಿದ್ದ.
ಶನಿವಾರ ಮಧ್ಯಾಹ್ನ ಶಾಲೆ ಮುಗಿದ ಬಳಿಕ ಪಾಣೆಮಂಗಳೂರಿನ ಅಜ್ಜಿ ಮನೆಗೆ ಬಂದಿದ್ದ. ಅಲ್ಲಿ ಬಾಲಕ ತನ್ನ ಸ್ನೇಹಿತರೊಂದಿಗೆ ಇರುವುದನ್ನು ಸ್ಥಳೀಯರು ಗಮನಿಸಿದ್ದರು. ಆದರೆ ಮಧ್ಯಾಹ್ನದ ಬಳಿಕ ಬಾಲಕ ಕಾಣೆಯಾಗಿದ್ದ. ಬಾಲಕನ ಕೈಯಲ್ಲಿದ್ದ ಮೊಬೈಲ್ ಗೆ ಪೋಷಕರು ಕರೆ ಮಾಡಿದಾಗ, ಮೊಬೈಲ್ ರಿಂಗ್ ಆಗುತ್ತಿತ್ತು ವಿನಾ ಬಾಲಕ ಕರೆ ಸ್ವೀಕರಿಸುತ್ತಿರಲಿಲ್ಲ. ಇದರಿಂದ ಆತಂಕಗೊಂಡ ಮನೆ ಮಂದಿ ಬಂಟ್ವಾಳ ನಗರ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.
ಪೊಲೀಸರು ಬಾಲಕನ ಕೈಯಲ್ಲಿದ್ದ ಮೊಬೈಲ್ ಟ್ರೇಸ್ ಮಾಡಿದಾಗ ಪಾಣೆಮಂಗಳೂರಿನ ಕಳ್ಳಿಗೆ ಗ್ರಾಮದ ಕೆರೆಯ ಬಳಿ ತೋರಿಸಿತ್ತು. ಅಲ್ಲಿ ನೋಡಿದರೆ ಕೆರೆಯ ಸಮೀಪ ಬಾಲಕನ ವಸ್ತ್ರ, ಪಾದರಕ್ಷೆ ಹಾಗೂ ಮೊಬೈಲ್ ಪತ್ತೆಯಾಗಿದೆ. ಸಂಶಯದಿಂದ ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಬಾಲಕನ ಮೃತದೇಹ ಪತ್ತೆಯಾಗಿದೆ. ಘಟನೆ ಬಗ್ಗೆ ಬಂಟ್ವಾಳ ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆಕಸ್ಮಿಕವಾಗಿ ಕೆರೆಗೆ ಬಿದ್ದಿದ್ದಾನೆಯೇ, ಈಜಲು ಇಳಿದಿದ್ದನೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The dead body of a schoolboy, who had gone missing on Saturday afternoon, was found in a lake in Kuppila, Kakhile village, on Saturday night. The deceased has been identified as Azim (13), a class 8 student of a private English medium school in Mittabailu near BC Road. He was the son of Abdul Razak, a local resident.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am