ಬ್ರೇಕಿಂಗ್ ನ್ಯೂಸ್
10-04-23 08:50 pm Mangalore Correspondent ಕರಾವಳಿ
ಬೆಳ್ತಂಗಡಿ, ಎ.10 : ಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರು ನೂರು ಅಡಿ ಆಳ ಇರುವ ಪ್ರಪಾತಕ್ಕೆ ಉರುಳಿ ಬಿದ್ದಿದ್ದು ತೀವ್ರ ಗಾಯಗೊಂಡಿದ್ದ ವೃದ್ಧ ಮಹಿಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಉಜಿರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಶೃಂಗೇರಿಯ ಕೊಪ್ಪ ಎಂಬಲ್ಲಿ ಸಂಬಂಧಿಕರ ಅಂತ್ಯಕ್ರಿಯೆಗೆ ಹೋಗಿ ಭಾನುವಾರ ಮರಳುತ್ತಿದ್ದ ವೇಳೆ ಅವಘಡ ನಡೆದಿತ್ತು. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಸರೋಜಿನಿ ಶೆಟ್ಟಿ(64) ಎಂಬ ಮಹಿಳೆ ಚಿಕಿತ್ಸೆ ಫಲಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪುಷ್ಪಾವತಿ ಆರ್.ಶೆಟ್ಟಿ(64), ಪುತ್ರಿ ಪೂರ್ಣಿಮಾ ಶೆಟ್ಟಿ(42), ಮೊಮ್ಮಕ್ಕಳಾದ ಸಮೃದ್ಧ್(10) ಸಾಕ್ಷಿ(14), ಸಂಬಂಧಿಕ ಮಹಿಳೆ ಸರೋಜಿನಿ ಶೆಟ್ಟಿ(64) ಹಾಗೂ ಕಾರು ಚಾಲಕರಾಗಿದ್ದ ಅರುಣಾಕರ ಗೌಡ ಗಾಯಗೊಂಡಿದ್ದರು.
ಗಾಯಾಳುಗಳನ್ನು ತಕ್ಷಣವೇ ಕಕ್ಕಿಂಜೆಯ ಶ್ರೀಕೃಷ್ಣ ಆಸ್ಪತ್ರೆ, ಉಜಿರೆಯ ಎಸ್ಡಿಎಂ ಆಸ್ಪತ್ರೆ ಮತ್ತು ಬೆನಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿತ್ತು. ಈ ಪೈಕಿ ಸರೋಜಿನಿ ಶೆಟ್ಟಿ ಮತ್ತು ಪೂರ್ಣಿಮಾ ಶೆಟ್ಟಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸರೋಜಿನಿ ಶೆಟ್ಟಿ (64) ನಿನ್ನೆ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪುಷ್ಪಾವತಿ ಶೆಟ್ಟಿ ಕಾರಿನ ಚಾಲಕ ಅರುಣಾಕರ ಗೌಡ ವಿರುದ್ಧ ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ನಡೆದಿದೆ ಎಂದು ದೂರು ನೀಡಿದ್ದಾರೆ.
In a tragic incident, a car traveling from Kottigehara towards Ujire lost control near the second turn of Charmadi Ghat road and rolled off 100 meters into a gorge on Sunday night. A woman was killed and several others have been injured in the road mishap.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 04:45 pm
HK News Staffer
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm