ಬ್ರೇಕಿಂಗ್ ನ್ಯೂಸ್
12-04-23 09:11 pm Mangalore Correspondent ಕರಾವಳಿ
ಪುತ್ತೂರು, ಎ.12: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಊರಲ್ಲೇ ಬಿಜೆಪಿ ಕಾರ್ಯಕರ್ತರ ಆಕ್ರೋಶ ಕಟ್ಟೆಯೊಡೆದಿದೆ. ಟಿಕೆಟ್ ಘೋಷಣೆಯಲ್ಲಿ ತಾರತಮ್ಯ ಮಾಡಿದ್ದಾರೆ, ಪುತ್ತೂರಿನಲ್ಲಿ ಹಿಂದು ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲರಿಗೆ ಟಿಕೆಟ್ ನೀಡದೇ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಸಾವಿರಾರು ಕಾರ್ಯಕರ್ತರು ಸೇರಿ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಪುತ್ತೂರಿನಲ್ಲಿ ಹಿಂದು ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಬೇಕೆಂದು ಕಳೆದ ಎರಡು ತಿಂಗಳಿನಿಂದ ಭಾರೀ ಅಭಿಯಾನ ನಡೆದಿತ್ತು. ಈ ನಡುವೆ, ಶಾಸಕ ಸಂಜೀವ ಮಠಂದೂರು ಮಳೆಗಾಲದಲ್ಲಿ ಅಣಬೆಗಳು ಬಂದಂತೆ ಎಂದು ಪರೋಕ್ಷವಾಗಿ ಅರುಣ್ ಪುತ್ತಿಲರನ್ನು ಟೀಕಿಸಿದ್ದು ಕಾರ್ಯಕರ್ತರ ಸಿಟ್ಟಿಗೆ ಕಾರಣವಾಗಿತ್ತು. ಶಾಸಕರನ್ನು ಬಳಿಕ ರಸ್ತೆಯಲ್ಲಿ ಅಡ್ಡ ಹಾಕಿ ಕಾರ್ಯಕರ್ತರೇ ತರಾಟೆಗೆ ತೆಗೆದುಕೊಂಡಿದ್ದರು. ಇದೀಗ ಅರುಣ್ ಪುತ್ತಿಲ ಹೆಸರನ್ನು ಪರಿಗಣಿಸದೆ ರೇಸಲ್ಲೇ ಇಲ್ಲದ ಆಶಾ ತಿಮ್ಮಪ್ಪ ಗೌಡರಿಗೆ ಪುತ್ತೂರು ಬಿಜೆಪಿ ಟಿಕೆಟ್ ಘೋಷಣೆಯಾಗಿದೆ. ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಭೆ ಸೇರಿ ಆಕ್ರೋಶ ಹೊರಹಾಕಿದ್ದಾರೆ.
ಪುತ್ತೂರಿನ ಸಾಲ್ಮರದಲ್ಲಿ ಖಾಸಗಿ ಸಭಾಂಗಣದಲ್ಲಿ ಸಾವಿರಾರು ಕಾರ್ಯಕರ್ತರು ಸಭೆ ಸೇರಿದ್ದು ಅರುಣ್ ಪುತ್ತಿಲ ಪರವಾಗಿ ಘೋಷಣೆ ಕೂಗಿದ್ದಾರೆ. ಅಲ್ಲದೆ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅಭಿಮಾನಿಗಳು ಒತ್ತಾಯ ಮಾಡಿದ್ದಾರೆ. ಸಭೆಯಲ್ಲಿ ಮಾತನಾಡಿದ ಅರುಣ್ ಪುತ್ತಿಲ, ಈ ಬಗ್ಗೆ ಹಿರಿಯರೊಂದಿಗೆ ಚರ್ಚಿಸಿ ನನ್ನ ನಿಲುವು ಪ್ರಕಟಿಸುತ್ತೇನೆ ಎಂದು ತಿಳಿಸಿದ್ದಾರೆ. ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಸೇರಿದಂತೆ ಪಕ್ಷದ ನಾಯಕರ ವಿರುದ್ಧ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಸಕ ಸಂಜೀವ ಮಠಂದೂರು ಖಾಸಗಿ ಫೋಟೊ ಲೀಕ್ ಆದಬಳಿಕ ಅವರು ಸ್ಥಾನ ಕಳಕೊಳ್ಳುವುದು ಖಾತ್ರಿಯಾಗಿತ್ತು. ನಳಿನ್ ಆಪ್ತ ಹರೀಶ್ ಕಂಜಿಪಿಲಿ, ಹಿಂದು ಮುಖಂಡ ಅರುಣ್ ಪುತ್ತಿಲ ಹೆಸರು ಮುಂಚೂಣಿಯಲ್ಲಿ ಕೇಳಿಬಂದಿತ್ತು. ಆದರೆ ಸುಳ್ಯ ಮೂಲದ ಗೌಡ ಸಮುದಾಯದ ಆಶಾ ತಿಮ್ಮಪ್ಪ ಗೌಡರನ್ನು ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಿದೆ. ಇದರಿಂದ ಅರುಣ್ ಪುತ್ತಿಲ ಬೆಂಬಲುಗರು ಸಿಟ್ಟುಗೊಂಡಿದ್ದು ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧವೇ ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಆಶಾ ತಿಮ್ಮಪ್ಪ ಈ ಹಿಂದೆ ಜಿಪಂ ಅಧ್ಯಕ್ಷೆ ಆಗಿದ್ದರೂ, ಪುತ್ತೂರಿನಲ್ಲಿ ಕಾರ್ಯಕರ್ತರ ಸಂಪರ್ಕ ಹೊಂದಿಲ್ಲ. ಜೊತೆಗೆ, ಪಕ್ಷ ಮತ್ತು ಸಂಘ ಪರಿವಾರದಲ್ಲಿ ಸಕ್ರಿಯವಾಗಿಲ್ಲ. ಈ ಕಾರಣಕ್ಕೆ ಪುತ್ತೂರಿನ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ತೀವ್ರ ಆಕ್ರೋಶಗೊಂಡಿದ್ದಾರೆ. ಪಕ್ಷದ ಅಭ್ಯರ್ಥಿ ವಿರುದ್ಧವೇ ಬಂಡಾಯ ಸ್ಪರ್ಧೆಗಿಳಿಸಲು ಮುಂದಾಗಿದ್ದಾರೆ.
Puttur Arun Kumar Puthila followers gather in thousands after he loses BJP ticket. His followers gathered in large number demanding High command to give him ticket for puttur constituency.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 02:51 pm
HK News Desk
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm