ಬ್ರೇಕಿಂಗ್ ನ್ಯೂಸ್
14-04-23 09:04 pm Mangalore Correspondent ಕರಾವಳಿ
ಮಂಗಳೂರು, ಎ.14 : ಮಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸುವ ತುಂಬೆ ವೆಂಟೆಡ್ ಡ್ಯಾಂನಲ್ಲಿ ದಿನದಿಂದ ದಿನಕ್ಕೆ ನೀರಿನ ಮಟ್ಟ ಕುಸಿಯುತ್ತಿದ್ದು ಈ ಬಾರಿ ಎಪ್ರಿಲ್ ಕೊನೆಯ ವೇಳೆಗೆ ಮಳೆಯಾಗದಿದ್ದಲ್ಲಿ ಮಂಗಳೂರಿಗೆ ನೀರಿನ ಸಮಸ್ಯೆ ಎದುರಾಗಲಿದೆ. ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ಇನ್ನೊಂದು ತಿಂಗಳಿಗೆ ಬೇಕಾಗುವಷ್ಟು ಮಾತ್ರ ನೀರಿದೆ ಎನ್ನುವ ಮಾಹಿತಿ ಅಧಿಕಾರಿಗಳಿಂದ ಸಿಕ್ಕಿದೆ.
ತುಂಬೆ ವೆಂಟೆಡ್ ಡ್ಯಾಂನಲ್ಲಿ ಏ.4ಕ್ಕೆ ನೀರಿನ ಮಟ್ಟ 4.06ಕ್ಕೆ ಇಳಿಕೆಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸೂಚನೆಯಂತೆ ಬಂಟ್ವಾಳದ ಶಂಭೂರಿನ ಎಎಂಆರ್ ಅಣೆಕಟ್ಟಿನಿಂದ ನೀರು ಹರಿಸಲಾಗಿತ್ತು. ಇದರಿಂದ ಏ.6ರಂದು ನೀರಿನ ಪ್ರಮಾಣ ತುಂಬೆ ವೆಂಟೆಡ್ ಡ್ಯಾಂನಲ್ಲಿ 5.98 ಮೀ.ಗೆ ಏರಿಕೆಯಾಗಿತ್ತು. ಆದರೆ ಏ.11ಕ್ಕೆ ನೀರಿನ ಮಟ್ಟ 5.80ಕ್ಕೆ ಕುಸಿದು ನಿಂತಿದೆ. ಶಂಭೂರಿನ ಎಎಂಆರ್ ಅಣೆಕಟ್ಟಿನಲ್ಲೂ ನೀರಿನ ಪ್ರಮಾಣ ಇಳಿಕೆಯಾಗಿದ್ದು ಅಲ್ಲಿನ ನದಿ ದಡದ ಆಸುಪಾಸಿನ ನಿವಾಸಿಗಳು ದಿಢೀರ್ ನೀರಿನ ಅಭಾವಕ್ಕೆ ಒಳಗಾಗಿದ್ದಾರೆ. ಮಳೆ ಬಾರದೇ ಇದ್ದರೆ ಅಲ್ಲಿಂದ ನೀರು ಹರಿಸುವುದು ಅಸಾಧ್ಯ.
ತುಂಬೆ ವೆಂಟೆಡ್ ಡ್ಯಾಂನಿಂದ ಪ್ರತಿನಿತ್ಯ 155 ಎಂಎಲ್‌ಡಿ ನೀರು ಮಂಗಳೂರು ನಗರಕ್ಕೆ ಪೂರೈಕೆಯಾಗುತ್ತಿದ್ದು, ಈಗ ಶೇಖರಗೊಂಡಿರುವ ನೀರು ಮುಂದಿನ 40 ದಿನಗಳಿಗೆ ಸಾಕಾಗಬಹುದು ಎಂದು ನಗರ ಪಾಲಿಕೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಿಸಿಲ ಝಳಕ್ಕೆ ಜಲಾಶಯದ ನೀರು ಆವಿಯಾಗುತ್ತಿದ್ದು, ಶೇಖರಗೊಂಡ ನೀರು ಆಸುಪಾಸಿನ ತೋಟಗಳಿಗೂ ಅಕ್ರಮ ಬಳಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ತುಂಬೆಯಲ್ಲಿರುವ 5.80 ಮೀ. ನೀರು ಮುಂದಿನ 30 ದಿನಗಳ ವರೆಗೂ ಬರಬಹುದೆಂಬ ಖಚಿತತೆಯಿಲ್ಲ.
ತುಂಬೆ ಡ್ಯಾಂನಲ್ಲಿ ನೀರಿನ ಪ್ರಮಾಣ ಗಣನೀಯ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರನ್ನು ಮಿತವಾಗಿ ಬಳಸಲು ಪಾಲಿಕೆ ಸೂಚಿಸಿದೆ. ಅಲ್ಲದೆ, 20 ದಿನಗಳ ನಂತರ ನೀರು ಪೂರೈಕೆಯಲ್ಲಿ ಕಡಿತ ಮಾಡಲು ನಿರ್ಧರಿಸಿದೆ. ನೀರು ತಲುಪಲು ಸಾಧ್ಯವಾಗದ ಪ್ರದೇಶಗಳಿಗೆ ನಗರದ 3 ವಾಟರ್ ಗೇಟ್‌ನಿಂದ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಯೋಜನೆ ರೂಪಿಸಲಾಗಿದೆ. ಈಗಿನಿಂದಲೇ ನಗರದ ಬಹುತೇಕ ಹೋಟೆಲ್, ಉದ್ಯಮ, ಎತ್ತರ ಪ್ರದೇಶ, ಕೆಲವು ವಸತಿ ಸಮುಚ್ಚಯಗಳಿಗೆ ಖಾಸಗಿ ಹಾಗೂ ಪಾಲಿಕೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಮಹಾನಗರ ಪಾಲಿಕೆಯಿಂದ ಪ್ರತಿ ವಾರ್ಡ್‌ಗೆ ಒಂದು ಟ್ಯಾಂಕರ್ ನಿಯೋಜಿಸಲಾಗಿದೆ. ಮಂಗಳೂರು ತಾಲೂಕಿನ ಕೆಲವು ಗ್ರಾಪಂ ವ್ಯಾಪ್ತಿಯಲ್ಲೂ ನೀರಿನ ಸಮಸ್ಯೆಯಿದ್ದು, 2-3 ದಿನಕ್ಕೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ.
The inflow of water at Thumbe vented dam, which supplies water to the city, has reduced considerably. If it does not rain by the end of April, there will be an acute shortage of water in the city. The current stock of water in the dam is enough to cater to about 50.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 12:06 pm
HK News Desk
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
15-11-25 02:47 pm
Mangalore Correspondent
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
Kumapal Dog Attack, Ullal, Mangalore: ಕುಂಪಲ ಬ...
14-11-25 11:01 pm
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm