ಬ್ರೇಕಿಂಗ್ ನ್ಯೂಸ್
16-04-23 10:04 pm Udupi Correspondent ಕರಾವಳಿ
ಉಡುಪಿ, ಎ.16 : ಕಾರ್ಕಳ ವಿಧಾನಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಮುನಿಯಾಲು ಉದಯಕುಮಾರ್ ಶೆಟ್ಟಿಗೆ ಘೋಷಣೆ ಬೆನ್ನಲ್ಲೇ ಪಕ್ಷದೊಳಗೆ ಭಿನ್ನಮತ ಸ್ಪೋಟವಾಗಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಮುದ್ರಾಡಿ ಮಂಜುನಾಥ ಪೂಜಾರಿ ಅವರು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಅಲ್ಲದೆ, ಕಾಂಗ್ರೆಸ್ ಅಭ್ಯರ್ಥಿ ಉದಯ ಕುಮಾರ್ ಶೆಟ್ಟಿ ಪರ ಪ್ರಚಾರ ಮಾಡುವುದಿಲ್ಲ ಎಂದಿದ್ದಾರೆ.
ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಬದಲಾವಣೆ ಆಗುತ್ತೆ ಎಂದು ನಿರೀಕ್ಷೆ ಮಾಡಿದ್ದೆವು. ಆದರೆ ಅವರು ಆಡಿದ್ದೇ ಬೇರೆ, ಮಾಡಿದ್ದೇ ಬೇರೆ. ಪಕ್ಷ ಕಟ್ಟಿದವರ ಅವಗಣನೆ ಮಾಡಿದ್ದಾರೆ ಎಂದು ದೂರಿದರು.
ರಾಜ್ಯದಲ್ಲಿ ಒಬ್ಬರೇ ಒಬ್ಬ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಟಿಕೆಟ್ ಮಾರಾಟ ಮಾಡಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅವನತಿಗೆ ಡಿಕೆ ಶಿವಕುಮಾರ್ ಕಾರಣ. ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅವನತಿಗೆ ವಿನಯ್ ಕುಮಾರ್ ಸೊರಕೆ ಕಾರಣ. ಬಿಜೆಪಿ ಹೊಸ ಮುಖಗಳಿಗೆ ಮಣೆ ಹಾಕುತ್ತಿದ್ದರೂ ಸೊರಕೆಯಂತವರಿಗೆ ಮತ್ತೆ ಮತ್ತೆ ಅವಕಾಶ ಯಾಕೆ ಕೊಡುತ್ತಿದ್ದಾರೆ ಎಂದರು.
ಕಾರ್ಕಳದಲ್ಲಿ ಗುತ್ತಿಗೆದಾರ ಉದಯ ಕುಮಾರ್ ಶೆಟ್ಟಿಗೆ ಯಾವ ಆಧಾರದ ಮೇಲೆ ಟಿಕೆಟ್ ನೀಡಲಾಗಿದೆ. ಅವರು ಒಮ್ಮೆ ಸುನಿಲ್ ಕುಮಾರ್ ಜತೆ, ಒಮ್ಮೆ ನಳಿನ್ ಕುಮಾರ್ ಜತೆ, ಮತ್ತೊಮ್ಮೆ ಪ್ರಭಾಕರ ಭಟ್ ಜತೆಗೆ ಗುರುತಿಸಿಕೊಳ್ಳುತ್ತಾರೆ. ಇವರ ಮೂಲಕ ಟೆಂಡರ್ ಪಡೆದು ಕಳಪೆ ಕಾಮಗಾರಿ ನಡೆಸುತ್ತಾರೆ. ಬಿಜೆಪಿ ಜೊತೆಗೆ ಸಖ್ಯ ಇರುವವರಿಗೆ ಟಿಕೆಟ್ ನೀಡುವುದು ಎಷ್ಟು ಸರಿ. ಇದರಿಂದ ಪಕ್ಷದ ಉದ್ಧಾರ ಸಾಧ್ಯವೇ ಎಂದು ಪ್ರಶ್ನಿಸಿದರು.
ಪಕ್ಷದ ಕೆಲಸಕ್ಕಾಗಿ ನಾನು ಈವರೆಗೂ ಕೋಟ್ಯಾಂತರ ರೂ. ವೆಚ್ಚ ಮಾಡಿದ್ದೇನೆ. ಈ ಬಾರಿ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ ಟಿಕೆಟ್ ಹಂಚಿಕೆಯಲ್ಲಿ ತಾರತಮ್ಯ ಮಾಡಿದ್ದಾರೆ. ಜಾತಿ ಆಧಾರ ನೋಡದೆ ಪಕ್ಷ ಸಂಘಟನೆ ಮಾಡಿದವರಿಗೆ ಅವಕಾಶ ಕಲ್ಪಿಸಬೇಕು ಎಂದ ಅವರು, ನನ್ನ ಮತ ಕಾಂಗ್ರೆಸ್ ಗೆ. ಪಕ್ಷ ಬಿಟ್ಟು ಹೋಗಲ್ಲ. ಆದರೆ ಈ ಬಾರಿ ಪ್ರಚಾರಕ್ಕೆ ಹೋಗುವುದಿಲ್ಲ. ತತ್ವ ಸಿದ್ಧಾಂತದ ಮೇಲೆ ಬದುಕುತ್ತಿದ್ದೇನೆ, ಪಕ್ಷದಲ್ಲೇ ಇರುತ್ತೇನೆ ಎಂದು ಸ್ಪಷ್ಟಪಡಿಸಿದರು.
Manjunath Poojary Mudradi resigns from president of Hebri block Congress after ticket given to Udaykumar.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm