ಬ್ರೇಕಿಂಗ್ ನ್ಯೂಸ್
17-04-23 10:27 pm Mangalore Correspondent ಕರಾವಳಿ
ಮಂಗಳೂರು, ಎ.17: ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೊ ಅವರ ನೂತನ ಚುನಾವಣಾ ಕಚೇರಿಯನ್ನು ಸೋಮವಾರ ಉದ್ಘಾಟನೆ ಮಾಡಲಾಯಿತು.
ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತರಾದ ಪದ್ಮನಾಭ್ ಅಮೀನ್ ಮತ್ತು ಸದಾಶಿವ ಅಮೀನ್ ಅವರು ದೀಪ ಬೆಳಗಿಸುವ ಮೂಲಕ ಚುನಾವಣಾ ಕಚೇರಿ ವಿಧ್ಯುಕ್ತವಾಗಿ ಉದ್ಘಾಟನೆ ಮಾಡಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಎಸ್. ಮಸೂದ್ ಮಾತನಾಡಿ, ಜೆ.ಆರ್.ಲೋಬೊ ಅವರನ್ನು ಶಾಸಕರನ್ನಾಗಿ ಮಾಡಲು ಪಕ್ಷದ ಎಲ್ಲಾ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು. ಜಾತಿ, ಧರ್ಮದ ಭೇದವಿಲ್ಲದೆ ಎಲ್ಲರೂ ಅವರ ಗೆಲುವಿಗೆ ಅವಿರತವಾಗಿ ಶ್ರಮಿಸಬೇಕು ಎಂದರು.
ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೋ ಮಾತನಾಡಿ, ಸಂವಿಧಾನ ಉಳಿಸಿ ಸಮಾಜದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಲು ಈ ಚುನಾವಣೆ ಅತ್ಯಂತ ಮಹತ್ವದ್ದು. ಕ್ಷೇತ್ರದ ಅಭಿವೃದ್ಧಿಗೆ ಜನರು ಚುನಾವಣೆಯಲ್ಲಿ ಆದ್ಯತೆ ನೀಡಬೇಕು. ನಗರದಲ್ಲಿ ಹಲವು ಶಿಕ್ಷಣ ಸಂಸ್ಥೆಗಳಿದ್ದರೂ ಯುವಕರು ಉದ್ಯೋಗದಿಂದ ವಂಚಿತರಾಗಿದ್ದಾರೆ. ಸಮಾಜದಲ್ಲಿ ಶಾಂತಿ ಸೌಹಾರ್ದ ಕಾಪಾಡಲು ಹಾಗೂ ಅಭಿವೃದ್ಧಿಗೆ ಜನರು ಬದಲಾವಣೆ ತಂದು ರಾಜ್ಯದಲ್ಲಿ ಉತ್ತಮ ಸರಕಾರವನ್ನು ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.
ಧರ್ಮಗುರುಗಳಾದ ರಿಯಾಝ್ ಫೈಝಿ ಮತ್ತು ಫಾದರ್ ರೋನ್ಸನ್ ಪಿಂಟೊ, ಪುರೋಹಿತ ವಿಶ್ವನಾಥ ಭಟ್ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ರಾಜಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ದಕ್ಷಿಣ ಕನ್ನಡ ಕಾಂಗ್ರೆಸ್ ಪಕ್ಷದ ಚುನಾವಣಾ ಸಂಯೋಜಕಿ ಶಿಭಾ ರಾಮಚಂದ್ರನ್, ಲೋಬೊ ಅವರ ಪತ್ನಿ ಫಿಲೋಮಿನಾ ಲೋಬೊ, ಕಾಂಗ್ರೆಸ್ ಹಿರಿಯ ಧುರೀಣ ಸುರೇಶ್ ಬಲ್ಲಾಳ್, ಶಶಿಧರ್ ಹೆಗ್ಡೆ, ವಿಶ್ವಾಸ್ ದಾಸ್, ನವೀನ್ ಡಿಸೋಜ, ಸಬಿತಾ ಮಿಸ್ಕಿತ್, ಪ್ರಕಾಶ್ ಸಾಲಿಯಾನ್, ಟಿ.ಕೆ ಸುಧೀರ್, ಎಂಜಿ ಹೆಗ್ಡೆ ಇದ್ದರು. ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಕುಮಾರ್, ಮೊಹಮ್ಮದ್ ಮಸೂದ್, ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲೀಂ, ಪ್ರಕಾಶ್ ಸಾಲಿಯಾನ್, ಕಳ್ಳಿಗೆ ತಾರಾನಾಥ್ ಶೆಟ್ಟಿ, ಮಾಜಿ ಶಾಸಕ ವಿಜಯಕುಮಾರ್ ಶೆಟ್ಥಿ, ಶಾಂತಲಾ ಗಟ್ಟಿ, ಚಂದ್ರಕಲಾ, ಅಬ್ದುಲ್ ರವೂಫ್ ಸೇರಿದಂತೆ ಪಾಲಿಕೆ ಸದಸ್ಯರು ಇದ್ದರು. ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಪ್ರಾಸ್ತಾವಿಕ ಮಾತನಾಡಿದರು.
The election office of Mangaluru South Congress candidate J R Lobo was inaugurated on Monday, April 17 on Kadri-Nanthoor Road. Party workers Padmanabh Amin and Sadhashiv Amin formally inaugurated by lighting the lamp along with other dignitaries.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm