ಬ್ರೇಕಿಂಗ್ ನ್ಯೂಸ್
17-04-23 10:34 pm Mangalore Correspondent ಕರಾವಳಿ
ಮಂಗಳೂರು, ಎ.17: ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ ಹಾಲಿ ಶಾಸಕ, ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಭಾರೀ ಜನಸಾಗರದೊಂದಿಗೆ ಮೆರವಣಿಗೆಯಲ್ಲಿ ಸೋಮವಾರ ನಾಮಪತ್ರ ಸಲ್ಲಿಸಿದರು. ಕುದ್ರೋಳಿ ದೇವಸ್ಥಾನದಲ್ಲಿ ಪೂಜೆಗೈದು ಬಳಿಕ ಅದ್ದೂರಿ ಮೆರವಣಿಗೆ ಬಂದು ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು.
ಇದೇ ವೇಳೆ ಮಾತನಾಡಿದ ವೇದವ್ಯಾಸ ಕಾಮತ್, ಕುದ್ರೋಳಿ ದೇವಸ್ಥಾನದಲ್ಲಿ ಪ್ರತಿ ಬಾರಿ ದೇವರಿಗೆ ಪೂಜೆ ಸಲ್ಲಿಸಿ ನಾಮಪತ್ರ ಸಲ್ಲಿಸುವ ಸಂಪ್ರದಾಯ ಪಾಲಿಸಿದ್ದೇನೆ. ಅದೇ ರೀತಿಯಲ್ಲಿ ಕದ್ರಿ ದೇವಸ್ಥಾನ, ಮಂಗಳಾದೇವಿ ದೇವಸ್ಥಾನ, ರಥಬೀದಿ ವೆಂಕಟರಮಣ ದೇವಸ್ಥಾನ, ಬಜಿಲಕೇರಿ ಮುಖ್ಯಪ್ರಾಣ ದೇವಸ್ಥಾನಕ್ಕೂ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದೇನೆ. ನಾಮಪತ್ರ ಸಲ್ಲಿಸುವಾಗ ಸೇರಿದ ಜನಸ್ತೋಮ ನೋಡುವಾಗ ಇದು ಗೆಲುವಿನ ನಂತರದ ವಿಜಯಯಾತ್ರೆಯಂತೆ ಕಾಣುತ್ತಿದೆ ಎಂದು ಹೇಳಿದರು.
ಪುಷ್ಪಗಳಿಂದ ಸಿಂಗರಿಸಿದ ಜೀಪಿನಲ್ಲಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರನ್ನು ಕುದ್ರೋಳಿಯಿಂದ ಲಾಲ್ ಭಾಗ್ ತನಕ ಮೆರವಣಿಗೆ ಒಯ್ಯಲಾಯಿತು. ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಂಗಳೂರು ನಗರ ದಕ್ಷಿಣದಲ್ಲಿ ವೇದವ್ಯಾಸ ಕಾಮತ್ ಮಾಡಿರುವ ಅಭಿವೃದ್ಧಿಯನ್ನು ಜನ ಮೆಚ್ಚಿಕೊಂಡಿದ್ದಾರೆ. ಅವರ ಗೆಲುವು ಇಲ್ಲಿಂದಲೇ ಮುಂದುವರೆಯಲಿದೆ ಎಂದರು.
ಪಾದಯಾತ್ರೆಯಲ್ಲಿ ಚೆಂಡೆ ವಾದನ, ಕಲ್ಲಡ್ಕ ಬೊಂಬೆಗಳು, ಹಾಡುಗಳು ಕಾರ್ಯಕರ್ತರ ಖುಷಿಯನ್ನು ಹೆಚ್ಚಿಸಿದವು. ವೇದವ್ಯಾಸ ಕಾಮತ್ ಅವರನ್ನು ಮೆಚ್ಚಿ ರಚಿಸಲಾದ ವಿಶೇಷ ಹಾಡಿಗೆ ಕಾರ್ಯಕರ್ತರು ಹೆಜ್ಜೆ ಹಾಕುವ ಮೂಲಕ ಸಂಭ್ರಮಿಸಿದರು. ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಸಂಚಾಲಕ ನಿತಿನ್ ಕುಮಾರ್, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಮಂಡಲ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ, ವಕೀಲ ರವೀಂದ್ರ ಕುಮಾರ್, ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಪ್ರಮುಖರಾದ ಉಮಾನಾಥ ಅಮೀನ್, ಸಿಎ ಗೌತಮ್ ಪೈ ಉಪಸ್ಥಿತರಿದ್ದರು.
Sitting Mangaluru South MLA Vedavyas Kamath filed his nomination papers ahead of the state Assembly election here at the Mangaluru City Corporation office on Monday April 17.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm