ಬ್ರೇಕಿಂಗ್ ನ್ಯೂಸ್
20-04-23 06:12 pm Mangalore Correspondent ಕರಾವಳಿ
ಉಳ್ಳಾಲ, ಎ.20 : ಉಳ್ಳಾಲದಲ್ಲಿ ಚುನಾವಣಾ ಸೆಖೆ ಜೋರಾಗಿದ್ದು, ಇಂದು ಸಾವಿರಾರು ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸಿ ಶಕ್ತಿ ಪ್ರದರ್ಶನ ಮಾಡಿದ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳಾದ ಯು.ಟಿ.ಖಾದರ್ ಮತ್ತು ಸತೀಶ್ ಕುಂಪಲ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಮಂಗಳೂರು(ಉಳ್ಳಾಲ) ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಅವರು ಇಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಬೆಂಬಲಿಗರೊಂದಿಗೆ ಕ್ಷೇತ್ರದ ಚುನಾವಣಾ ಅಧಿಕಾರಿ ಕೆ.ರಾಜು ಅವರಿಗೆ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ಅವರನ್ನು ಪಂಡಿತ್ ಹೌಸ್ ನಲ್ಲಿ ರುವ ಬಿಜೆಪಿ ಚುನಾವಣಾ ಕಾರ್ಯಾಲಯದಿಂದ ಅಪಾರ ಸಂಖ್ಯೆಯ ಪಕ್ಷದ ಕಾರ್ಯಕರ್ತರ ನೇತೃತ್ವದಲ್ಲಿ ಮೆರವಣಿಗೆ ಮೂಲಕ ತೊಕ್ಕೊಟ್ಟಿಗೆ ಕರೆತರಲಾಯಿತು. ತೊಕ್ಕೊಟ್ಟಿನ ಕೇಂದ್ರ ಬಸ್ ನಿಲ್ದಾಣದ ಮೈದಾನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸತೀಶ್ ಕುಂಪಲ ಅವರು ಉಳ್ಳಾಲ ನೂತನ ತಾಲೂಕು ಪಂಚಾಯಿತಿ ಘೋಷಣೆ ಆದರೆ ಸಾಲದು, ಜನರಿಗೆ ಅದರ ಪ್ರಯೋಜನ ಸಿಗಬೇಕು. ಇಲ್ಲಿಗೆ ನೂರಾರು ಯೋಜನೆ ಬರಬೇಕಿತ್ತು. ಬಿಜೆಪಿ ನೀಡಿದ ಯೋಜನೆಯನ್ನು ಶಾಸಕ ಯು.ಟಿ. ಖಾದರ್ ಸಮರ್ಪಕವಾಗಿ ಬಳಸಿಕೊಂಡಿಲ್ಲ ಎಂದರು. ಹದಿನೈದು ವರ್ಷಗಳ ಹಿಂದೆ ನಿರ್ಮಾಣವಾಗಬೇಕಿದ್ದ ರಸ್ತೆ ಈಗ ನಿರ್ಮಾಣವಾಗ್ತಿದೆ. ಕಡಲ್ಕೊರೆತ ಸಮಸ್ಯೆ ಪರಿಹಾರವಾಗಿಲ್ಲ. ಬೃಹತ್ ಕುಡಿಯುವ ನೀರಿನ ಯೋಜನೆ ಹೆಸರಿಗೆ ಮಾತ್ರ, ತೊಟ್ಟು ಹನಿ ಬರಲಿಲ್ಲ. ಇಲ್ಲಿ ಅಪ್ಪ ಮಕ್ಕಳು ಶಾಸಕರಾಗಿ ಅಭಿವೃದ್ಧಿ ಮಾಡಿದ್ದಾದರೂ ಏನು ಎಂದು ಪ್ರಶ್ನಿಸಿದರು.
ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಮುಖಂಡರಾದ ಸಂತೋಷ್ ಬೋಳಿಯಾರ್, ರವೀಂದ್ರ ಶೆಟ್ಟಿ ಉಳಿದೊಟ್ಟು, ಚಂದ್ರಹಾಸ್ ಉಳ್ಳಾಲ ಮೊದಲಾದವರು ಉಪಸ್ಥಿತರಿದ್ದರು.
ಐಸಿಯುನಲ್ಲಿರುವ ಬಿಜೆಪಿಗೆ ಎಸ್ಡಿಪಿಐ ಆಸರೆ - ಖಾದರ್
ಕಾಂಗ್ರೆಸ್ ಪಕ್ಷದ ಮಂಗಳೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಯು.ಟಿ.ಖಾದರ್ ಅವರೂ ಇಂದು ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ಅವರು ಉಳ್ಳಾಲ ಬೈಲ್ ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿ, ಅಭಿವೃದ್ಧಿ ನನ್ನ ಮೂಲ ಗುರಿ ಆಗಿದ್ದು, ಅದನ್ನು ಖಂಡಿತ ಮಾಡುತ್ತೇನೆ. ಇನ್ನೊಮ್ಮೆ ವಿಧಾನಸಭೆ ಸದಸ್ಯರಾಗಿ ಆಯ್ಕೆ ಆಗಲು ಮತದಾರರು ಅವಕಾಶ ನೀಡುತ್ತಾರೆ ಎಂಬ ವಿಶ್ವಾಸ ನನಗಿದೆ. ಉಳ್ಳಾಲದಲ್ಲಿ ಕುಡಿಯುವ ನೀರು, ಕಡಲ್ಕೊರೆತ ಸಮಸ್ಯೆಗೆ ಪರಿಹಾರ ವ್ಯವಸ್ಥೆ ಮಾಡಲಾಗಿದೆ. 220 ಕೋಟಿ ವೆಚ್ಚದಲ್ಲಿ ಹರೇಕಳ ಸೇತುವೆ ನಿರ್ಮಾಣ ಮಾಡಲಾಗಿದ್ದು, ಶಾಶ್ವತ ಕುಡಿಯುವ ನೀರು, ಮೂಲಭೂತ ಸೌಕರ್ಯ ಮಾಡುವುದು ಸಹಿತ ಬಾಕಿ ಉಳಿದಿರುವ ವಿವಿಧ ಕಾಮಗಾರಿಗಳನ್ನು ಮುಂದಿನ ಹಂತದಲ್ಲಿ ನಿರ್ವಹಿಸಲಾಗುವುದು ಎಂದು ಭರವಸೆ ನೀಡಿದರು.
ಬಿಜೆಪಿ ಸರಕಾರಕ್ಕೆ ಇನ್ನು 22 ದಿವಸ ಮಾತ್ರ ಆಯಸ್ಸು. ಐಸಿಯುನಲ್ಲಿ ಇರುವ ಬಿಜೆಪಿಯನ್ನು ಬದುಕಿಸುವ ಕೆಲಸ ಎಸ್ ಡಿಪಿಐ ಮಾಡುತ್ತಿದೆ. ಎಸ್ ಡಿಪಿಐ ನವರಿಗೆ ನಾನು ಮಸೀದಿಗೂ ಹೋದರೂ ಆಗಲ್ಲ, ದೇವಸ್ಥಾನಗಳಿಗೆ ಹೋದರೂ ಆಗಲ್ಲ. ನಾನು ಏನು ಮಾಡಿದರೂ ಆಗಲ್ಲ. ಅವರ ಆರೋಪಗಳಿಗೆ ಮೇ 13ರಂದೇ ಉತ್ತರ ಸಿಗುವುದೆಂದು ಹೇಳಿದರು. ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು.
Bjp and Congres show power in Ullal, Khader and Satish Kumpala file nomination, huge procession held.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm