ಬ್ರೇಕಿಂಗ್ ನ್ಯೂಸ್
24-04-23 06:00 pm Mangalore Correspondent ಕರಾವಳಿ
ಮಂಗಳೂರು, ಎ.24: ಚುನಾವಣೆ ಪ್ರಚಾರಕ್ಕಾಗಿ ಪ್ರಧಾನಿ ಮೋದಿ ಕರಾವಳಿಗೂ ಬರುವುದು ಫಿಕ್ಸ್ ಆಗಿದೆ. ಮೇ 3ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮಧ್ಯದಲ್ಲಾಗುವಂತೆ ಮೂಲ್ಕಿಯಲ್ಲಿ ಮೋದಿ ಪ್ರಚಾರ ಸಭೆ ನಡೆಸಲಿದ್ದಾರೆ. ಮೇ 6ರಂದು ಯೋಗಿ ಆದಿತ್ಯನಾಥ್ ದಕ್ಷಿಣ ಕನ್ನಡ ಜಿಲ್ಲೆಗೆ ಬರಲಿದ್ದು, ಜಾಗ ಫಿಕ್ಸ್ ಆಗಿಲ್ಲ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಕರಾವಳಿ ಜಿಲ್ಲೆಗಳ 19 ಕ್ಷೇತ್ರಗಳಲ್ಲಿ ಎಲ್ಲವನ್ನೂ ಬಿಜೆಪಿ ಗೆಲ್ಲುತ್ತದೆ. ನಾವು ಹಿಂದುತ್ವದ ಆಧಾರದಲ್ಲಿ ಚುನಾವಣೆ ಎದುರಿಸುತ್ತೇವೆ. ಅದರ ಆಧಾರದಲ್ಲಿ ಪುತ್ತೂರು ಸೇರಿದಂತೆ ಎಲ್ಲ ಕ್ಷೇತ್ರಗಳನ್ನು ಗೆಲ್ಲುತ್ತೇವೆ. ಪುತ್ತೂರಿನಲ್ಲೂ ಗೆಲ್ಲುತ್ತೇವೆ ಅಂದರೆ, ಎದುರಾಳಿ ಯಾರಿದ್ದರೂ ಸೋಲುತ್ತಾರೆ ಎಂದೇ ಅರ್ಥ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಎಪ್ರಿಲ್ 25 ಮತ್ತು 26ರಂದು ಕರ್ನಾಟಕ ರಾಜ್ಯದಾದ್ಯಂತ ಮಹಾ ಪ್ರಚಾರ ಅಭಿಯಾನ ನಡೆಸಲಾಗುವುದು. ಏಕಕಾಲದಲ್ಲಿ 224 ಕ್ಷೇತ್ರಗಳಲ್ಲಿ ನಡೆಯುವ ಅಭಿಯಾನದಲ್ಲಿ 98 ಮಂದಿ ಕೇಂದ್ರ ನಾಯಕರು, 150 ರಾಜ್ಯ ನಾಯಕರು ಭಾಗವಹಿಸುತ್ತಾರೆ. ಜೆಪಿ ನಡ್ಡಾ, ಅಮಿತ್ ಷಾ, ರಾಜನಾಥ್ ಸಿಂಗ್, ಅರುಣ್ ಸಿಂಗ್, ಧರ್ಮೇಂದ್ರ ಪ್ರಧಾನ್, ನಿರ್ಮಲಾ ಸೀತರಾಮನ್, ಮನ್ ಸುಖ್ ಮಾಂಡವೀಯ, ಕೆ.ಅಣ್ಣಾಮಲೈ, ಯೋಗಿ ಆದಿತ್ಯನಾಥ್, ದೇವೇಂದ್ರ ಫಡ್ನವಿಸ್, ಸ್ಮೃತಿ ಇರಾನಿ ಮತ್ತಿತರರು ರಾಜ್ಯದಲ್ಲಿ ಪ್ರಚಾರ ನಡೆಸಲಿದ್ದಾರೆ.
ಬಂಡಾಯ ಎದ್ದವರ ಕುರಿತ ಪ್ರಶ್ನೆಗೆ ಉತ್ತರಿಸಿದ ಕೋಟ, ಪಕ್ಷದಲ್ಲಿ ಬಂಡಾಯ ಹೋದವರು ಮರಳಿ ನಮ್ಮ ಜೊತೆ ಸೇರುವ ವಿಶ್ವಾಸ ಇದೆ. ಯಾವುದೇ ಬಂಡಾಯ ಇಲ್ಲ ಎಂದರು. ಕರಾವಳಿಯಲ್ಲಿ ಮೂವರು ಶಾಸಕರು ತಮ್ಮ ವಿರುದ್ಧ ಮಾನಹಾನಿಕರ ಸುದ್ದಿ ಹಾಕಬಾರದೆಂದು ತಡೆಯಾಜ್ಞೆ ತಂದಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಚುನಾವಣೆ ಸಂದರ್ಭದಲ್ಲಿ ರಾಜಕಾರಣಿಗಳನ್ನು ಹಣಿಯಲು ಯಾರು ಏನು ಬೇಕಾದರೂ ಮಾಡುತ್ತಾರೆ. ಅದಕ್ಕಾಗಿ ಕೋರ್ಟಿನಿಂದ ತಡೆಯಾಜ್ಞೆ ತಂದಿರಬಹುದು. ಮತ್ತು ಅದೆಲ್ಲ ಅವರವರ ಖಾಸಗಿ ಬದುಕು, ನಾವೇನೂ ಮಾಡೋಕಾಗಲ್ಲ ಎಂದರು.
PM Modi in Mulki Mangalore on May 3rd for election campaign, UP cm Yogi Adityanath to come to Dakshina Kannada on May 6th. Holding press meet former minister Kota Srinivas Poojari said that BJP will win all 19 constituencies.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm