ಬ್ರೇಕಿಂಗ್ ನ್ಯೂಸ್
26-04-23 08:45 pm Mangalore Correspondent ಕರಾವಳಿ
ಮಂಗಳೂರು, ಎ.26: ಕರಾವಳಿಯಲ್ಲಿ ಚುನಾವಣೆ ಭರಾಟೆ ಜೋರಾಗಿದ್ದು, ಕಾಂಗ್ರೆಸ್ – ಬಿಜೆಪಿ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಅಭ್ಯರ್ಥಿಗಳು ಮನೆ ಮನೆಗೆ ಪ್ರಚಾರಕ್ಕೆ ಹೆಚ್ಚು ಒತ್ತು ಕೊಟ್ಟಿದ್ದರೆ, ಪಕ್ಷದ ಕೇಂದ್ರ ಮತ್ತು ರಾಜ್ಯ ಮಟ್ಟದ ನಾಯಕರು ರ್ಯಾಲಿ, ರೋಡ್ ಶೋ ಮೂಲಕ ಮತ ಸೆಳೆಯುತ್ತಿದ್ದಾರೆ.
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಎಪ್ರಿಲ್ 27ರಂದು ಮಂಗಳೂರಿಗೆ ಆಗಮಿಸಲಿದ್ದು, ಸಂಜೆ 4.30ಕ್ಕೆ ಅಡ್ಯಾರ್ ನಲ್ಲಿ ಪ್ರಚಾರ ಸಭೆ ನಡೆಸಲಿದ್ದಾರೆ. ಈ ಹಿಂದೆ ರಾಹುಲ್ ಗಾಂಧಿ ಮಂಗಳೂರು ನಗರದ ಬಲ್ಮಠ, ಕಲೆಕ್ಟರ್ ಗೇಟ್ ನಡುವೆ ರೋಡ್ ಶೋ ನಡೆಸಲಿದ್ದಾರೆ ಎನ್ನಲಾಗಿತ್ತು. ಆದರೆ ನಗರ ಮಧ್ಯೆ ರೋಡ್ ಶೋ ನಡೆಸುವುದಕ್ಕೆ ಅವಕಾಶ ಸಿಗದ ಕಾರಣ ಮಂಗಳೂರು ನಗರ ಹೊರವಲಯದ ಅಡ್ಯಾರ್ ನಲ್ಲಿರುವ ಸಹ್ಯಾದ್ರಿ ಕಾಲೇಜಿನ ಮೈದಾನದಲ್ಲಿ ಪ್ರಚಾರ ಸಭೆ ಏರ್ಪಡಿಸಲಾಗಿದೆ. ಪ್ರಚಾರ ಸಭೆ ನಡೆಯೋದಕ್ಕೂ ಮುನ್ನ ಅಡ್ಯಾರ್ ನಲ್ಲಿ ಹೆದ್ದಾರಿ ಉದ್ದಕ್ಕೆ ಒಂದಷ್ಟು ರೋಡ್ ಶೋ ನಡೆಯುವ ಸಾಧ್ಯತೆ ಇದೆ.
ಎಪ್ರಿಲ್ 29ರಂದು ಮಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮಿಸಲಿದ್ದು, ಉರ್ವಾದಿಂದ ನಾರಾಯಣ ಗುರು ವೃತ್ತದ ವರೆಗೆ ರೋಡ್ ಶೋ ನಡೆಸಲಿದ್ದಾರೆ. ತೆರೆದ ವಾಹನದಲ್ಲಿ ಅಮಿತ್ ಷಾ ಮೆರವಣಿಗೆ ತೆರಳಲಿದ್ದು, ಸಾವಿರಾರು ಕಾರ್ಯಕರ್ತರು ಸೇರಲಿದ್ದಾರೆ. ವಾಹನದಲ್ಲಿ ನಿಂತುಕೊಂಡೇ ಕಾರ್ಯಕರ್ತರನ್ನು ಉದ್ದೇಶಿಸಿ ಅಮಿತ್ ಷಾ ಮಾತನಾಡಲಿದ್ದಾರೆ. ಪೆಂಡಾಲ್ ಹಾಕಿ ದೊಡ್ಡ ಮಟ್ಟದ ಪ್ರಚಾರ ಸಭೆ ನಡೆಸಿದಲ್ಲಿ ಅದರ ಖರ್ಚು ಅಭ್ಯರ್ಥಿಯ ಲೆಕ್ಕಕ್ಕೆ ಬರುವುದರಿಂದ ಈ ರೀತಿ ರೋಡ್ ಶೋ ಮೂಲಕ ಸಣ್ಣ ಖರ್ಚಿನಲ್ಲಿ ದೊಡ್ಡ ಸಭೆಯನ್ನುದ್ದೇಶಿಸಿ ಮಾತನಾಡುವಂತೆ ವ್ಯವಸ್ಥೆ ಮಾಡಲಾಗಿದೆ.
Congress Election campaign Rahul Gandhi in Mangalore on April 27th, Amit Shah on April 29th, BJP Road show organized. Rahul will address the Congress Party Workers at a mass poll campaign meeting at 3.30 pm to be held at the Sahyadri College Campus in Adyar, in the outskirts of the City. Home Minister Amith Shah is likely to hold a Roadshow in Mangaluru on 29th.
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
24-09-26 09:42 pm
HK News Staffer
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
24-09-26 10:46 pm
HK News Desk
ಬಂಟ್ವಾಳ ; ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಹ...
24-09-26 06:26 pm
ಬಂಗಾಳ ವಾಯುಭಾರ ಕುಸಿತ ; ಕರಾವಳಿ, ಮಲೆನಾಡು, ದಕ್ಷಿಣ...
24-09-26 05:55 pm
ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಕ್ರಿಕೆಟಿಗ ರವಿ ಶಾಸ...
23-09-26 10:47 pm
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
24-09-26 05:10 pm
HK News Staffer
ಸೈಬರ್ ಖದೀಮರ ಹೊಸ ಹೊಸ ತಂತ್ರ: ಒಂದೇ ದಿನ ಮಂಗಳೂರಿನಲ...
24-09-26 11:10 am
bus fire, Greater Noida: ಚಲಿಸುತ್ತಿದ್ದ ಸ್ಲೀಪರ್...
24-09-26 10:09 am
ಶಿರ್ವದಲ್ಲಿ ಭಾರೀ ಪ್ರಮಾಣದ ಗಾಂಜಾ, ಡ್ರಗ್ಸ್ ವಶಕ್ಕೆ...
23-09-26 09:28 pm
ಕರ್ತವ್ಯ ಲೋಪ, ಲಂಚಬಾಕತನ, ಅನುಚಿತ ವರ್ತನೆ ಬಗ್ಗೆ ದೂ...
23-09-26 09:24 pm