ಬ್ರೇಕಿಂಗ್ ನ್ಯೂಸ್
26-04-23 08:56 pm Udupi Correspondent ಕರಾವಳಿ
ಉಡುಪಿ, ಎ.26: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಉಡುಪಿ ಜಿಲ್ಲೆಯ ವಿಧಾನಸಭೆ ಕ್ಷೇತ್ರದಲ್ಲಿ ಮೀನುಗಾರರ ಜೊತೆ ಸಂವಾದ ನಡೆಸಲಿದ್ದಾರೆ. ಮಧ್ಯಾಹ್ನ 3.40ಕ್ಕೆ ಉಡುಪಿಗೆ ಹೆಲಿಕಾಪ್ಟರ್ ಮೂಲಕ ರಾಹುಲ್ ಗಾಂಧಿ ಆಗಮಿಸಲಿದ್ದು, ಅಲ್ಲಿಂದ ನೇರವಾಗಿ ಕಾಪು ಮಹಾಲಕ್ಷ್ಮಿ ದೇವಸ್ಥಾನ ಬಳಿಯ ಸಭಾಂಗಣದಲ್ಲಿ ಮೀನುಗಾರರ ಜೊತೆ ಸಂವಾದ ನಡೆಸಲಿದ್ದಾರೆ. ಇದಕ್ಕೂ ಮೊದಲು ಕಟಪಾಡಿ ಮತ್ತು ಮುಳೂರಿನಲ್ಲಿ ರಾಹುಲ್ ಗಾಂಧಿ ರೋಡ್ ಶೋ ನಡೆಸಲಿದ್ದಾರೆ ಎಂದು ಕಾಪು ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಬಿಜೆಪಿ ಸರಕಾರ ಪೂರ್ತಿಯಾಗಿ ಮೀನುಗಾರ ಸಮುದಾಯವನ್ನು ನಿರ್ಲಕ್ಷಿಸಿದೆ. ಕಾಂಗ್ರೆಸ್ ಸರಕಾರ ಇದ್ದಾಗ ಮೀನುಗಾರರಿಗೆ ಸೀಮೆ ಎಣ್ಣೆಯನ್ನು ಸಬ್ಸಿಡಿ ರೂಪದಲ್ಲಿ ನೀಡುತ್ತಿದ್ದರು. ಕಳೆದ ಆರು ತಿಂಗಳಲ್ಲಿ ಮೀನುಗಾರರಿಗೆ ಸಬ್ಸಿಡಿ ಸೀಮೆ ಎಣ್ಣೆ ಸಿಗುತ್ತಿಲ್ಲ. ಬಿಜೆಪಿಯವರು ಮೀನುಗಾರರನ್ನು ಕೇವಲ ವೋಟ್ ಬ್ಯಾಂಕ್ ಆಗಿ ಬಳಸುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಮೀನುಗಾರರ ಅಭಿವೃದ್ಧಿಗೆಂದೇ 2500 ಕೋಟಿ ರೂಪಾಯಿ ಮೊತ್ತವನ್ನು ನೀಡಲಾಗುವುದು ಎಂದು ಸೊರಕೆ ಹೇಳಿದರು.
ಬೈಂದೂರು, ಉಡುಪಿ, ಕಾಪು, ಮಂಗಳೂರು ಭಾಗದ ಸಾವಿರಾರು ಮೀನುಗಾರರು ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಮೀನುಗಾರ ಸಮುದಾಯದ ಸಮಸ್ಯೆಗಳನ್ನು ಆಲಿಸಿ, ಪರಿಹಾರದ ವಿಚಾರದಲ್ಲಿ ಪ್ರತ್ಯೇಕ ಯೋಜನೆಯನ್ನು ತಯಾರಿಸಲಾಗುವುದು. ರಾಜ್ಯದೆಲ್ಲೆಡೆಯಿಂದ ಎರಡು ಸಾವಿರ ಮಂದಿ ಮೀನುಗಾರ ಸಮುದಾಯದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ಮೀನುಗಾರರು ಅಂದರೆ ಕೇವಲ ಮೊಗವೀರರು ಮಾತ್ರ ಅಂದ್ಕೊಂಡಿದ್ದಾರೆ. ಮೀನುಗಾರಿಕೆಯಲ್ಲಿ ಎಸ್ಸಿ, ಎಸ್ಟಿಯಿಂದ ತೊಡಗಿ ಮುಸ್ಲಿಮರು ಇತರೇ ಸಮುದಾಯದವರು ಕೂಡ ತೊಡಗಿಸಿದ್ದಾರೆ ಎಂದು ಹೇಳಿದರು. ಸುದ್ದಿಗೋಷ್ಟಿಯಲ್ಲಿ ಕೇರಳ ಸಂಸದ ಪ್ರತಾಪನ್, ಮೀನುಗಾರ ಘಟಕದ ಅಧ್ಯಕ್ಷ ಮಂಜುನಾಥ ಸೋನೆಗರ್, ಕೆಪಿಸಿಸಿ ಸೆಕ್ರಟರಿ ಎಂ.ಎ. ಗಫೂರ್, ರಾಜಶೇಖರ ಕೋಟ್ಯಾನ್, ಪ್ರಚಾರ ಸಮಿತಿ ಅಧ್ಯಕ್ಷ ಹರೀಶ ಕಿಣಿ ಮತ್ತಿತರರಿದ್ದರು.
Congress leader Rahul Gandhi will arrive in Uchila on Thursday, April 27, to discuss the problems of the fishermen community. After visiting a temple in Uchila, he will discuss with the members of the community, said Manjunath Songar, president of KPCC fishermen cell.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 10:21 pm
HK News Desk
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm