ಬ್ರೇಕಿಂಗ್ ನ್ಯೂಸ್
26-04-23 10:40 pm Mangalore Correspondent ಕರಾವಳಿ
ಸುರತ್ಕಲ್, ಎ.26 : ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರು ಬುಧವಾರ ಬೆಳಗ್ಗೆ ಕಾಟಿಪಳ್ಳ, ಇಡ್ಯಾ, ಹೊಸಬೆಟ್ಟು, ಕುಳಾಯಿ, ಬೈಕಂಪಾಡಿ, ಪಣಂಬೂರು ಪರಿಸರದಲ್ಲಿ ಬಿಡುವಿಲ್ಲದೆ ಚುನಾವಣಾ ಪ್ರಚಾರ ನಡೆಸಿದರು.
ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಅವರು, "ಮಂಗಳೂರು ಉತ್ತರ ಕ್ಷೇತ್ರವನ್ನು ಭವಿಷ್ಯದಲ್ಲಿ ಮಾದರಿ ಕ್ಷೇತ್ರವನ್ನಾಗಿ ಮಾಡುವ ಗುರಿಯನ್ನು ಹೊಂದಿದ್ದೇನೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ನೇರ ಸ್ಪರ್ಧೆ ಇದೆ. ಹೀಗಾಗಿ ಪ್ರತೀ ಮನೆಗಳನ್ನು ಕಾಂಗ್ರೆಸ್ ಗ್ಯಾರಂಟಿ ಅಭಿಯಾನದ ಮೂಲಕ ಜೋಡಿಸಲು ನಮ್ಮ ಕಾರ್ಯಕರ್ತರು ದುಡಿಯುತ್ತಿದ್ದಾರೆ. ಜನರು ಬಿಜೆಪಿ ಸರಕಾರದ ಬೆಲೆ ಏರಿಕೆ, ನಿರುದ್ಯೋಗ ಮತ್ತಿತರ ಹೊರೆಗಳಿಂದ ಕಂಗಾಲಾಗಿದ್ದಾರೆ. ಮತ್ತೊಮ್ಮೆ ಅದೇ ಸರಕಾರ ಅಧಿಕಾರಕ್ಕೆ ಬಂದರೆ ಪರಿಸ್ಥಿತಿ ಏನಾಗಬಹುದು ಎಂಬ ಸ್ಪಷ್ಟ ಅಂದಾಜು ಜನರಲ್ಲಿದೆ. ಹೀಗಾಗಿ ಜನವಿರೋಧಿ ಬಿಜೆಪಿ ಸರಕಾರಕ್ಕೆ ಜನರೇ ವಿರುದ್ಧವಾಗಿದ್ದಾರೆ ಎಂದರು.
ಕಾಟಿಪಳ್ಳ ಜನತಾ ಕಾಲನಿಯ ಸಿರಿಗಳ ಬೀಡು, ಆಶ್ರಯ ಕಾಲನಿಯ ಕೊರಗಜ್ಜ ಕ್ಷೇತ್ರಕ್ಕೆ ಇನಾಯತ್ ಅಲಿ ಭೇಟಿ ಕೊಟ್ಟು ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಕೆಪಿಸಿಸಿ ವಕ್ತಾರೆ ಪ್ರತಿಭಾ ಕುಳಾಯಿ, ಜಲೀಲ್ ಬದ್ರಿಯಾ, ಸುರತ್ಕಲ್ ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮುಹಮ್ಮದ್ ಸಮೀರ್ ಕಾಟಿಪಳ್ಳ, ರಾಘವೇಂದ್ರ ರಾವ್ ಮತ್ತಿತರರು ಉಪಸ್ಥಿತರಿದ್ದರು.
ಬಾವಾ ಮಾತ್ರ ಹೋಗಿದ್ದಾರೆ, ಪಕ್ಷಕ್ಕೆ ಯಾವುದೇ ನಷ್ಟವಿಲ್ಲ!
"ಕಾಂಗ್ರೆಸ್ ಪಕ್ಷದಿಂದ ಮೊಯಿದೀನ್ ಬಾವಾ ಮಾತ್ರ ಹೊರಗಡೆ ಹೋಗಿದ್ದಾರೆ. ಅವರ ಜೊತೆ ವೈಯಕ್ತಿಕವಾಗಿ ಹಿಂದಿನಿಂದಲೂ ಇದ್ದ ಬೆರಳೆಣಿಕೆಯ ನಾಯಕರು ಅವರ ಜೊತೆಗಿದ್ದಾರೆ. ಜೆಡಿಎಸ್ ಪಕ್ಷಕ್ಕೆ ಜನರು ಬೆಂಬಲ ನೀಡುವುದಿಲ್ಲ. ಬಾವಾ 500-1000 ಮತ ಪಡೆಯಬಹುದು. ನಾವು 10ಕ್ಕೂ ಹೆಚ್ಚು ಜನ ಟಿಕೆಟ್ ಆಕಾಂಕ್ಷಿಗಳಿದ್ದೆವು. ಪಕ್ಷ ನನಗೆ ಮಾತ್ರ ಟಿಕೆಟ್ ಕೊಟ್ಟಿದೆ. ಉಳಿದವರು ಇದಕ್ಕಾಗಿ ಪಕ್ಷ ತೊರೆದಿಲ್ಲ, ನನ್ನ ಜೊತೆ ದಿನಾ ಮನೆ ಮನೆ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಬಾವಾ ಪಕ್ಷ ತೊರೆದಿದ್ದರಲ್ಲಿ ಯಾವುದೇ ಸಮಸ್ಯೆಯಿಲ್ಲ ಎಂದು ಇನಾಯತ್ ಅಲಿ ಹೇಳಿದ್ದಾರೆ.
Mangalore North MLA congress candidate Inayat Ali in full swing campaign, No loss if former north MLA Moideen Bava quits party says Inayat Ali speaking to Media persons.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 10:21 pm
HK News Desk
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm