ಬ್ರೇಕಿಂಗ್ ನ್ಯೂಸ್
29-04-23 02:58 pm Mangaluru Correspondent ಕರಾವಳಿ
ಪುತ್ತೂರು, ಎ.29: ಪುತ್ತೂರಿನಲ್ಲಿ ಅಭ್ಯರ್ಥಿ ಆಯ್ಕೆಯನ್ನು ಯಾರೋ ಇಬ್ಬರು ಕುಳಿತು ಮಾಡಿದ್ದಲ್ಲ. ಪಕ್ಷದ ಶಕ್ತಿಕೇಂದ್ರದಿಂದ ಹಿಡಿದು ಚುನಾವಣಾ ಸಮಿತಿ, ಸಂಸದೀಯ ವರೆಗೂ ವಿಶ್ಲೇಷಣೆ ಮಾಡುತ್ತದೆ. ಕೊನೆಯದಾಗಿ ಪ್ರಧಾನಿ ಮೋದಿಯೇ ಅಭ್ಯರ್ಥಿ ಆಯ್ಕೆ ಮಾಡೋದು. ಕಾಂಗ್ರೆಸಿನ ಹಾಗೆ ಒಂದಿಬ್ಬರು ಕುಳಿತು ಮಾಡುವ ಪ್ರಕ್ರಿಯೆ ಅಲ್ಲ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಕಾಂಗ್ರೆಸ್ ಪಕ್ಷ 1960 ರ ಕಾಲದ ಹಳೆ ಟೇಪ್ ರೆಕಾರ್ಡಿಂಗ್ ಇದ್ದಹಾಗೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದಲ್ಲಿ ಈ ಕಾನೂನು ವಾಪಾಸು ಪಡೀತೆನೆ, ಆ ಕಾನೂನು ಮಾಡಲು ಬಿಡೋದಿಲ್ಲ ಎನ್ನುತ್ತಿದೆ. ಇದೇ ಕಾರಣಕ್ಕೆ ಗೃಹಮಂತ್ರಿ ಅಮಿತ್ ಶಾ ಕಾಂಗ್ರೆಸ್ ಪಕ್ಷವನ್ನು ರಿವರ್ಸ್ ಗೇರ್ ಗೆ ಹೋಲಿಸಿದ್ದು, ಕಾಂಗ್ರೆಸ್ ರಿವರ್ಸ್ ಗೇರ್ ಹಾಕಿ ಓಡುತ್ತಿದೆ.
ಆದರೆ ಬಿಜೆಪಿ ಡಬಲ್ ಇಂಜಿನ್ ಮೂಲಕ ಮುಂದಕ್ಕೆ ಓಡುತ್ತಿದೆ. ಇದೇ ಕಾಂಗ್ರೆಸ್ ಮತ್ತು ಬಿಜೆಪಿಗೆ ಇರುವ ವ್ಯತ್ಯಾಸ. ರಾಜ್ಯಕ್ಕೆ ಪ್ರಿಯಾಂಕ ಗಾಂಧಿಯವರನ್ನು ಕರೆಸಿ ದೋಸೆ ಮಾಡಿಸಿದ ಮಾತ್ರಕ್ಕೆ ಇಲ್ಲಿನ ಜನ ಮತ ಹಾಕಲ್ಲ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಪುತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡರ ಗೆಲುವು ನಿಶ್ಚಿತ. ಸಂಘಟನೆಯಲ್ಲಿ ಕೆಲಸ ಮಾಡಿದ ಆಧಾರದಲ್ಲಿ ಆಶಾ ತಿಮ್ಮಪ್ಪ ಗೌಡ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲಾಗಿದೆ. ಬಿಜೆಪಿಯಲ್ಲಿ ಕಾಂಗ್ರೆಸ್ ಪಕ್ಷದಂತೆ ಕೇವಲ ಇಬ್ಬರು ಕುಳಿತು ಅಭ್ಯರ್ಥಿಯನ್ನು ಆಯ್ಕೆ ಮಾಡುವ ವ್ಯವಸ್ಥೆಯಿಲ್ಲ.
ತಳಮಟ್ಟದ ಶಕ್ತಿಕೇಂದ್ರ, ಜಿಲ್ಲಾ ಕೇಂದ್ರ, ರಾಜ್ಯ ಚುನಾವಣಾ ಸಮಿತಿ, ಕೇಂದ್ರ ಚುನಾವಣಾ ಸಮಿತಿ, ಪಾರ್ಲಿಮೆಂಟರಿ ಸಮಿತಿ ಚರ್ಚೆ ನಡೆಸಿದ ಬಳಿಕ ಪ್ರಧಾನಿ ಮೋದಿ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತಗೊಳಿಸುತ್ತಾರೆ ಎಂದರು. ಗೆಲ್ಲುವ ಪಕ್ಷದಲ್ಲಿ ಆಕಾಂಕ್ಷಿಗಳು ಇರೋದು ಸಾಮಾನ್ಯವಾಗಿದ್ದು, ಪುತ್ತೂರಿನಲ್ಲೂ ಈ ಬಾರಿ ಪಕ್ಷೇತರರಾಗಿ ಸ್ಪರ್ಧಿಸುತ್ತಿದ್ದಾರೆ. ಪಕ್ಷ ಎಲ್ಲರಿಗೂ ಸ್ಥಾನಮಾನವನ್ನು ಕೊಡುತ್ತೆ, ಆದರೆ ಸ್ವಲ್ಪ ಸಮಾಧಾನದಲ್ಲಿ ಕಾಯಬೇಕು ಎಂದ ಅವರು ಯುವಜನತೆಗೆ ಬಿಜೆಪಿ ಖಂಡಿತವಾಗಿಯೂ ಅವಕಾಶ ನೀಡುತ್ತದೆ ಎಂದರು
BJP President of Tamil Nadu K Annamalai in Puttur, Candidate Asha Thimmappa Gowda is selected by PM Modi to contest not like congress that selects its candidates by some state leaders he slammed.
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
23-09-26 04:21 pm
HK News Staffer
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
23-09-26 10:47 pm
HK News Desk
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್...
22-09-26 08:32 pm
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
23-09-26 09:28 pm
HK News Staffer
ಕರ್ತವ್ಯ ಲೋಪ, ಲಂಚಬಾಕತನ, ಅನುಚಿತ ವರ್ತನೆ ಬಗ್ಗೆ ದೂ...
23-09-26 09:24 pm
ಶಾರ್ಜಾದಲ್ಲಿ ಆಲ್ವಿನ್ ಪ್ರಕಾಶ್ ಕುಂದರ್ ಬರ್ಬರ ಹತ್ಯ...
23-09-26 09:22 pm
sudarshan jain, murder, manglore: ಮೂಡುಬಿದ್ರೆ...
23-09-26 08:12 pm
ಪತ್ನಿಯ ಮೃತದೇಹ ಕೆರೆಯಲ್ಲಿ ಪತ್ತೆ ಬೆನ್ನಲ್ಲೇ ಪತಿ ನ...
23-09-26 05:12 pm