ಬ್ರೇಕಿಂಗ್ ನ್ಯೂಸ್
02-05-23 11:03 pm Mangalore Correspondent ಕರಾವಳಿ
ಮಂಗಳೂರು, ಮೇ 2: ಪ್ರಧಾನಿ ಮೋದಿ ಮೂಲ್ಕಿಯಲ್ಲಿ ಪ್ರಚಾರ ಸಭೆ ನಡೆಸುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹಳೆಯಂಗಡಿಯಿಂದ ಮೂಲ್ಕಿ ವರೆಗೆ ವಾಹನ ಸಂಚಾರ ನಿಷೇಧಿಸಿ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಬೆಳಗ್ಗೆ 7ರಿಂದ ಮಧ್ಯಾಹ್ನ 2 ಗಂಟೆ ವರೆಗೆ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ.
ಉಡುಪಿ ಕಡೆಯಿಂದ ಬರುವ ಎಲ್ಲ ರೀತಿಯ ವಾಹನಗಳು ಮೂಲ್ಕಿ ವಿಜಯಾ ಸನ್ನಿಧಿ ಬಳಿಯಿಂದ ಎಡಕ್ಕೆ ಚಲಿಸಿ ಕಿನ್ನಿಗೋಳಿ, ಕಟೀಲು, ಬಜಪೆ, ಕಾವೂರು ಮೂಲಕ ಮಂಗಳೂರಿಗೆ ಸಂಚರಿಸುವುದು. ಮಂಗಳೂರು ಕಡೆಯಿಂದ ಉಡುಪಿಯತ್ತ ಚಲಿಸುವ ವಾಹನಗಳು ಕೆಪಿಟಿ ಜಂಕ್ಷನ್ ಮೂಲಕ ಬಲಕ್ಕೆ ತಿರುಗಿ ಬೊಂದೇಲ್, ಕಾವೂರು, ಬಜಪೆ, ಕಟೀಲು, ಕಿನ್ನಿಗೋಳಿ ಮೂಲಕ ಮೂಲ್ಕಿಯತ್ತ ಚಲಿಸುವುದು. ಸುರತ್ಕಲ್ ಕಡೆಯಿಂದ ಉಡುಪಿಯತ್ತ ಚಲಿಸುವ ವಾಹನಗಳು ಹಳೆಯಂಗಡಿ ಜಂಕ್ಷನ್ ಬಳಿ ಬಲಕ್ಕೆ ತಿರುಗಿ ಪಕ್ಷಿಕೆರೆ, ಎಸ್ ಕೋಡಿ ಮೂಲಕ ಮೂಲ್ಕಿ ಕಡೆಗೆ ತೆರಳುವುದು.


ಹಳೆಯಂಗಡಿ ಜಂಕ್ಷನ್ನಿಂದ ಮೂಲ್ಕಿ ವಿಜಯಾ ಸನ್ನಿಧಿ ವರೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಕ್ಕೆಲಗಳ ಬದಿಯಲ್ಲಿ ವಾಹನ ಸಂಚಾರ ಮತ್ತು ಪಾರ್ಕ್ ಮಾಡುವುದನ್ನು ನಿಷೇಧ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಬರುವ ವಾಹನಗಳು ಮೂಲ್ಕಿಯ ಜಾಗತಿಕ ಬಂಟರ ಸಂಘದ ಕಚೇರಿ ಬಳಿ, ಪಡುವೈಲು ಪಾರ್ಕಿಂಗ್, ಹೆದ್ದಾರಿ ಬದಿಯಲ್ಲಿ ಮಾಡಿರುವ ಪಾರ್ಕಿಂಗ್ ಪ್ರದೇಶಗಳಲ್ಲಿ ಮಾತ್ರ ವಾಹನ ನಿಲುಗಡೆ ಮಾಡಬೇಕು. ವಿಐಪಿ ವಾಹನಗಳಿಗೆ ಗುಂಡಾಲು ಗುತ್ತು ನಿಲುಗಡೆ ಸ್ಥಳದಲ್ಲಿ ಪಾರ್ಕಿಂಗ್ ಪ್ರದೇಶ ಮಾಡಲಾಗಿದೆ. ಬೆಳಗ್ಗೆ 11 ಗಂಟೆಗೆ ಮೋದಿ ಕಾರ್ಯಕ್ರಮ ನಡೆಯಲಿದ್ದು, 10.30ರಿಂದ ಆಸುಪಾಸಿನಲ್ಲಿ ಪೂರ್ತಿಯಾಗಿ ಸಾರ್ವಜನಿಕ ವಾಹನ, ಜನರ ಓಡಾಟಕ್ಕೆ ನಿಷೇಧ ಹಾಕಲಾಗುವುದು ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲ್ಕಿ ಬಳಿಯ ಕೊಳ್ನಾಡಿನಲ್ಲಿ ಹೆದ್ದಾರಿ ಬದಿಯಲ್ಲೇ ಬೃಹತ್ ವೇದಿಕೆ ರೆಡಿ ಮಾಡಲಾಗಿದ್ದು, ಸುಮಾರು 70 ಸಾವಿರ ಜನರು ನಿಲ್ಲುವುದಕ್ಕೆ ವ್ಯವಸ್ಥೆ ಮಾಡಲಾಗಿದೆ. ಒಂದು ಲಕ್ಷಕ್ಕೂ ಹೆಚ್ಚು ಜನರು ಸೇರಲಿದ್ದಾರೆ ಎನ್ನಲಾಗುತ್ತಿದ್ದು, ಉಡುಪಿ ಮತ್ತು ಮಂಗಳೂರಿನ ಜನರು ಒಂದೇ ಕಡೆ ಬಂದು ಸೇರಲಿದ್ದಾರೆ.
Prime Minister Narendra Modi will hold a public meeting in regard to the assembly elections campaign at Karnad, Mulki on May 3. The public from Dakshina Kannada, Udupi and other surrounding districts will take part in the public meeting. In view of the security of the Prime Minister, alternative arrangements have been made for vehicular movement. On May 3, barricades will be installed at random spots from 7 am to 2 pm, and alternate routes will be created for vehicular traffic.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
30-12-25 10:43 pm
Mangalore Correspondent
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm