ಬ್ರೇಕಿಂಗ್ ನ್ಯೂಸ್
02-05-23 11:14 pm Mangalore Correspondent ಕರಾವಳಿ
ಬಂಟ್ವಾಳ, ಮೇ 2: ಸುಳ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಚಾರದಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಎದ್ದಿತ್ತು. ಅಭ್ಯರ್ಥಿಯಾಗಿ ಕೃಷ್ಣಪ್ಪ ಹೆಸರು ಘೋಷಿಸಿದ್ದು ಅಸಮಾಧಾನಕ್ಕೆ ಕಾರಣವಾಗಿ, ಸುಳ್ಯ ಮತ್ತು ಕಡಬ ಬ್ಲಾಕ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟನಾ ಸಭೆ ನಡೆಸಿದ್ದರು. ಈ ಬಗ್ಗೆ ಅಭ್ಯರ್ಥಿ ಕೃಷ್ಣಪ್ಪ ಮತ್ತು ಆಕಾಂಕ್ಷಿಯಾಗಿದ್ದ ನಂದಕುಮಾರ್ ಅವರನ್ನು ಕರೆಸಿ ಬಂಟ್ವಾಳದಲ್ಲಿ ಮಾಜಿ ಸಚಿವ ರಮಾನಾಥ ರೈ ಸಮಾಧಾನ ಪಡಿಸಿದ್ದಾರೆ.
ಬಂಟ್ವಾಳದ ಕಳ್ಳಿಗೆಯ ರಮಾನಾಥ ರೈಯವರ ನಿವಾಸದಲ್ಲಿ ಎರಡೂ ಬ್ಲಾಕ್ ಕಾಂಗ್ರೆಸ್ ಪ್ರಮುಖರನ್ನು ಕರೆಸಿ ಮಾತುಕತೆ ನಡೆಸಿದ್ದಾರೆ. ಅಸಮಾಧಾನ ಮರೆತು ಪಕ್ಷದ ಹಿತಕ್ಕಾಗಿ ಕೈಜೋಡಿಸಬೇಕೆಂದು ಸೂಚನೆ ನೀಡಿದ್ದಾರೆ. ಇದರಂತೆ, ಇಲ್ಲಿ ವರೆಗೂ ಪ್ರತ್ಯೇಕವಾಗಿದ್ದ ಎರಡು ಬಣಗಳು ಈಗ ಒಟ್ಟಾಗಿದ್ದು, ಜೊತೆಯಾಗಿ ಕಾರ್ಯ ವೆಸಗುವುದಾಗಿ ಮಾತು ಕೊಟ್ಟಿದ್ದಾರೆ.
ಮಹಾರಾಷ್ಟ್ರದ ಕಾಂಗ್ರೆಸ್ ಮುಖಂಡ ಕೇದಾರ್ ಮತ್ತು ರಮಾನಾಥ ರೈ ಸುಳ್ಯದ ಕಾಂಗ್ರೆಸ್ ನಾಯಕರಿಗೆ ಈ ಬಗ್ಗೆ ಸೂಚನೆ ನೀಡಿದ್ದು, ಎರಡೂ ಕಡೆಯ ಮುಖಂಡರನ್ನು ಕೈ ಕೈ ಹಿಡಿದು ಜೊತೆಗೆ ಸಾಗಲು ಸೂಚನೆ ನೀಡಿದ್ದಾರೆ. ಪಕ್ಷದ ಗೆಲುವು ಮುಖ್ಯ. ಪಕ್ಷ ಗೆಲ್ಲಿಸಲು ನೀವೆಲ್ಲರೂ ಕೈಜೋಡಿಸಬೇಕು ಎಂದಿದ್ದಾರೆ. ನಂದಕುಮಾರ್ ಪರವಾಗಿದ್ದ ಬಾಲಕೃಷ್ಣ ಬಳ್ಳೇರಿ, ಪಿಸಿ ಜಯರಾಮ್, ಸುಧೀರ್ ಶೆಟ್ಟಿ, ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ಸತ್ಯಕುಮಾರ್ ಅಂಡಿಂಜ, ಉಷಾ ಅಂಚನ್, ಭವಾನಿಶಂಕರ ಕಲ್ಮಡ್ಕ, ರವೀಂದ್ರ ರುದ್ರಪಾದ ಸೇರಿದಂತೆ ಸುಳ್ಯ, ಕಡಬ ಭಾಗದ ಬಹುತೇಕ ಮುಖಂಡರು ಉಪಸ್ಥಿತರಿದ್ದರು.
Sullia Congress members dispute with ticket, peace meeting held Under Ramath Rai.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm