ಬ್ರೇಕಿಂಗ್ ನ್ಯೂಸ್
03-05-23 11:12 pm Mangalore Correspondent ಕರಾವಳಿ
ಮಂಗಳೂರು, ಮೇ 3 : ಧರ್ಮನಿಷ್ಠೆ, ಸೇವೆ ಮತ್ತು ತ್ಯಾಗದ ಪ್ರತೀಕವಾಗಿರುವ ಹನುಮಂತನನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವಮಾನಿಸಿದ್ದಾರೆ. ಆಮೂಲಕ ಹನುಮಾನ್ ಭಕ್ತರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಎಐಸಿಸಿ ವಕ್ತಾರ ಪ್ರೊ. ಗೌರವ್ ವಲ್ಲಭ್ ಆರೋಪಿಸಿದ್ದು ಮೋದಿ ಈ ಬಗ್ಗೆ ಬೇಷರತ್ ಆಗಿ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಭಗವಾನ್ ಹನುಮಾನ್ ಮೇಲಿನ ದೇಶದ ಕೋಟ್ಯಂತರ ಜನರ ನಂಬಿಕೆಯನ್ನು ಅವಮಾನಿಸುತ್ತಿದ್ದಾರೆ. ಭಜರಂಗ ಬಲಿಯನ್ನು ಅವಮಾನಿಸುವ ಹಕ್ಕನ್ನು ಯಾರೂ ಪ್ರಧಾನಿಗೆ ನೀಡಿಲ್ಲ. ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯೊಂದಿಗೆ ಹನುಮಂತನನ್ನು ಸಮೀಕರಿಸಿದ್ದಕ್ಕಾಗಿ ಪ್ರಧಾನ ಮಂತ್ರಿ ರಾಜ್ಯದ 6.5 ಕೋಟಿ ಕನ್ನಡಿಗರಲ್ಲಿ ಕ್ಷಮೆ ಯಾಚಿಸಬೇಕು. ಇಲ್ಲವಾದರೆ ಲಕ್ಷಾಂತರ ಹನುಮನ ಭಕ್ತರು ಇದರ ವಿರುದ್ಧ ಹೋರಾಟ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.
ಬಜರಂಗದಳ ನಿಷೇಧ ಕುರಿತ ಪ್ರಶ್ನೆಗೆ, ಮೋದಿ ಅವರು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಓದದೆ ಹೇಳಿಕೆ ನೀಡಿರುವುದು ಸ್ಪಷ್ಟವಾಗಿದೆ. ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷವನ್ನು ಬಿತ್ತಿ ವಿಭಜನೆಗೆ ಕಾರಣವಾಗುವ, ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು, ಯಾವುದೇ ವ್ಯಕ್ತಿಳು ಬಜರಂಗದಳ ಮತ್ತು ಪಿಎಫ್ಐ ಸೇರಿದಂತೆ ಯಾವುದೇ ಸಂಘಟನೆ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಕಠಿಣ ಕ್ರಮ ತೆಗೆದು ಕೊಳ್ಳಲಾಗುವುದು ಎಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿದೆ. ಪ್ರಧಾನ ಮಂತ್ರಿ ಇದನ್ನು ಅರ್ಥ ಮಾಡಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸಿಗೆ ಸ್ಪಷ್ಟ ಬಹುಮತ ; ಚೆನ್ನಿತ್ತಲ
ಕರ್ನಾಟಕದಲ್ಲಿ ಕಳೆದ ಮೂರೂವರೆ ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿ ಸರಕಾರವು ಭ್ರಷ್ಟಾಚಾರದಲ್ಲಿ ಮುಳುಗಿದೆ. ಜನರು ಬದಲಾವಣೆ ಬಯಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಲಿದೆ ಎಂದು ಕೇರಳ ವಿಧಾನ ಸಭೆಯ ಮಾಜಿ ವಿಪಕ್ಷ ನಾಯಕ ರಮೇಶ್ ಚೆನ್ನಿತಲ ತಿಳಿಸಿದ್ದಾರೆ. ಬಿಜೆಪಿಯ ಡಿಎನ್ಎ ಭ್ರಷ್ಟಾಚಾರ ಆಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತಾ ಶಾ ಕರ್ನಾಟಕದಲ್ಲಿ ಭ್ರಷ್ಟಾಚಾರಕ್ಕೆ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದರು.
ಎಐಸಿಸಿ ವೀಕ್ಷಕ ಚರಣ್ ಸಿಂಗ್ ಸಪ್ರಾ, ಕಾಸರಗೋಡು ಸಂಸದ ರಾಜಮೋಹನ್ ಉನ್ನಿತಾನ್, ವಿಧಾನ ಪರಿಷತ್ ಸದಸ್ಯರಾದ ಡಾ. ಮಂಜುನಾಥ್ ಭಂಡಾರಿ, ಹರೀಶ್ ಕುಮಾರ್ , ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ ಎಚ್, ಮಾಜಿ ವಿಪ ಸದಸ್ಯ ಐವಾನ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.
AICC spokesperson Prof Gourav Vallabh demanded an unconditional apology from Prime Minister Narendra Modi to the 6.5 crore people of Karnataka for insulting Lord Hanuman by equating the Hindu God with the Bajrang Dal organisation and a group of people. The prime minister has hurt the religious sentiments of devotees who worship Lord Hanuman.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm