ಬ್ರೇಕಿಂಗ್ ನ್ಯೂಸ್
06-05-23 09:14 pm Mangalore Correspondent ಕರಾವಳಿ
ಉಳ್ಳಾಲ, ಮೇ 6 : ದೇಶದಲ್ಲಿ ಮಹಿಳೆಯರಿಗೆ ಸ್ಥಾನ, ಮಾನ ಕೊಟ್ಟದ್ದು ಬಿಜೆಪಿ ಮಾತ್ರ. ಕಾಂಗ್ರೆಸ್ ಇಟಲಿಯ ರಾಣಿಯನ್ನೇ ನಂಬಿಕೊಂಡಿದ್ದು, ಮೇ 8ರಂದು ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷೆ ವಾನತಿ ಶ್ರೀನಿವಾಸನ್ ಅವರು ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಧನಲಕ್ಷ್ಮಿ ಗಟ್ಟಿ ಹೇಳಿದ್ದಾರೆ.
ಕುತ್ತಾರು ಪಂಡಿತ್ ಹೌಸ್ನ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು. ಚುನಾವಣಾ ಬಹಿರಂಗ ಪ್ರಚಾರದ ಕೊನೆಯ ದಿನ ಮೇ 8ರಂದು ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷೆ ಕೊಯಮತ್ತೂರಿನ ಶಾಸಕಿ ವಾನತಿ ಶ್ರೀನಿವಾಸನ್ ಅವರು ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ ಮೂಲಕ ಪಕ್ಷದ ಅಭ್ಯರ್ಥಿ ಸತೀಶ್ ಕುಂಪಲ ಪರ ಮತಯಾಚನೆ ನಡೆಸಲಿದ್ದಾರೆ. ಮೇ 8ರಂದು ಬೆಳಗ್ಗೆ ಜಿಲ್ಲೆಯಾದ್ಯಂತ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ವಕೀಲೆಯಾಗಿರುವ ವಾನತಿ ಶ್ರೀನಿವಾಸನ್ ಅವರು ಮಧ್ಯಾಹ್ನ ಮಂಗಳೂರಿನಲ್ಲಿ ವಕೀಲರೊಂದಿಗೆ ಸಂವಾದ ನಡೆಸಲಿದ್ದಾರೆ. ಮಧ್ಯಾಹ್ನದ ಬಳಿಕ ತೊಕ್ಕೊಟ್ಟು ಓವರ್ ಬ್ರಿಡ್ಜ್ ನ ಗಣೇಶ ಮಂದಿರದಿಂದ ಒಳಪೇಟೆಯ ಅಂಬೇಡ್ಕರ್ ಮೈದಾನದ ವರೆಗೆ ಮಹಿಳೆಯರೊಂದಿಗೆ ಕಾಲ್ನಡಿಗೆ ಜಾಥಾದಲ್ಲಿ ಅವರು ಭಾಗವಹಿಸಲಿದ್ದಾರೆಂದು ಹೇಳಿದರು.

ಬಿಜೆಪಿ ರಾಜ್ಯದಲ್ಲಿ 12 ಮಹಿಳೆಯರಿಗೆ ವಿದಾನಸಭೆ ಚುನಾವಣೆಗೆ ಸ್ಫರ್ಧಿಸಲು ಟಿಕೆಟ್ ಕೊಟ್ಟಿದ್ದು ದ.ಕ ದಲ್ಲೂ ಆಶಾ ತಿಮ್ಮಪ್ಪ ಗೌಡ ಮತ್ತು ಭಾಗೀರಥಿಯವರಿಗೆ ಸ್ಥಾನ ಕಲ್ಪಿಸಿ ಕೊಟ್ಟಿದೆ. ನಾರಿಯರಿಗೆ ಸಮ್ಮಾನ ಅಂತ ವಿರೋಧ ಪಕ್ಷಗಳು ಬಾಯಲ್ಲಿ ಬೊಗಳಿದ್ದು ಬಿಟ್ಟರೆ ಅದನ್ನ ಕಾರ್ಯರೂಪಕ್ಕೆ ತಂದದ್ದು ಬಿಜೆಪಿ ಮಾತ್ರ ಎಂದರು.
ಮೇ 8ರಂದು ತೊಕ್ಕೊಟ್ಟು ಅಂಬೇಡ್ಕರ್ ಮೈದಾನದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಕಾಂಗ್ರೆಸ್ ನಿಂದ ನೊಂದ ಪ್ರಮುಖ ಸಹೋದರಿಯರು ವಾನತಿ ಶ್ರೀನಿವಾಸನ್ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರಲಿದ್ದಾರೆ ಎಂದರು.
ಮಾತಿನಲ್ಲೇ ನಾರಿ ಸಮಾನತೆಯನ್ನ ಹೇಳುವ ಕಾಂಗ್ರೆಸಿನವರು ಪರಕೀಯ ಇಟಲಿ ರಾಣಿಯನ್ನೇ ನಂಬಿ ಬದುಕುತ್ತಿದ್ದಾರೆ. ಬಿಜೆಪಿ ಸರಕಾರ ರಾಷ್ಟ್ರಪತಿ ಹುದ್ದೆಯನ್ನೇ ಆದಿವಾಸಿ ದ್ರೌಪದಿ ಮುರ್ಮುಗೆ ಕೊಡುವುದರ ಮೂಲಕ ನಾರಿ ಶಕ್ತಿಯನ್ನ ಜಾಗತಿಕ ಮಟ್ಟದಲ್ಲಿ ಮೇಳೈಸುವಂತೆ ಮಾಡಿದೆ ಎಂದರು. ಬಿಜೆಪಿ ಕ್ಷೇತ್ರ ಚುನಾವಣಾ ಉಸ್ತುವಾರಿ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಪ್ರಮುಖರಾದ ಹೇಮಂತ್ ಶೆಟ್ಟಿ, ದಿವ್ಯಾ ಶೆಟ್ಟಿ, ಸಪ್ನಾ ಶೆಟ್ಟಿ, ರಮಣಿ ಸೋಮೇಶ್ವರ, ಶಶಿಕಲಾ ಗಟ್ಟಿ ಮೊದಲಾದವರು ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
It was only the BJP that gave women a place and dignity in the country. Bjp Mahila Morcha district president Dhanalakshmi Gatti said the Congress relies on the Queen of Italy and on May 8, BJP Mahila Morcha national president Vanathi Srinivasan will campaign on foot in Ullal.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm