ಬ್ರೇಕಿಂಗ್ ನ್ಯೂಸ್
05-08-20 10:46 am Headline Karnataka News Network ಕರಾವಳಿ
ಮಂಗಳೂರು, ಆಗಸ್ಟ್ 5: ದಕ್ಷಿಣ ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಉಗ್ರ ಸಂಘಟನೆಗಳು ಸ್ಕೆಚ್ ರೂಪಿಸಿದ್ದು ಕರ್ನಾಟಕ ಸೇರಿ ಕರಾವಳಿಯಾದ್ಯಂತ ಹೈ ಎಲರ್ಟ್ ಇರುವಂತೆ ಕೇಂದ್ರ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ರವಾನಿಸಿದೆ.
ಸಿರಿಯಾ ಮೂಲದ ಐಎಸ್ಐಎಲ್ ಉಗ್ರ ಸಂಘಟನೆಯ ಭಾರತದ ವಿಭಾಗ ' ಹಿಂದ್ ವಿಲಾಯತ್ ' ಹಾಗೂ ಅಲ್ ಖೈದಾ ಉಗ್ರರು ದಕ್ಷಿಣ ಭಾರತದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದೆ ಎನ್ನಲಾಗುತ್ತಿದೆ. ಭಾರತದಲ್ಲಿ ಕೊರೊನಾ ಸಂಕಷ್ಟದ ಸಂದರ್ಭವನ್ನು ಬಳಸಿಕೊಂಡು ವಿಧ್ವಂಸಕ ಕೃತ್ಯ ಎಸಗಲು ತಮ್ಮ ಸ್ಲೀಪರ್ ಸೆಲ್ ಗಳಿಗೆ ಈ ಉಗ್ರ ಸಂಘಟನೆಗಳು ನಿರ್ದೇಶನ ನೀಡಿವೆ ಎಂದು ಹೇಳಲಾಗಿದೆ.
ಉಗ್ರರ ಸಂಚು ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್ ಇರುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಾಮ ಮಂದಿರ ಭೂಮಿಪೂಜೆಯ ಸಂಭ್ರಮಾಚರಣೆ ವೇಳೆ ಹಾಗು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಉಗ್ರರು ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ಪಡೆ ರಾಜ್ಯಕ್ಕೆ ರವಾನಿಸಿದ ಸಂದೇಶದಲ್ಲಿ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಪ್ರಮುಖವಾಗಿ ಕರಾವಳಿ ಭಾಗದಲ್ಲಿ ಹೈ ಅಲರ್ಟ್ ಇರುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಕಡಲ ತಡಿಯಲ್ಲಿ ನಡೆಯುವ ಯಾವುದೇ ಅಸ್ವಾಭಾವಿಕ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ. ಹೀಗಾಗಿ ಸಮುದ್ರ ಮತ್ತು ಕಡಲ ತೀರದ ಚಟುವಟಿಕೆ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm