ಬ್ರೇಕಿಂಗ್ ನ್ಯೂಸ್
11-05-23 10:41 am Mangalore Correspondent ಕರಾವಳಿ
ಉಳ್ಳಾಲ, ಮೇ 11: ಎರಡು ವರುಷಗಳ ಹಿಂದೆ ಕುಂಪಲದ ಆಶ್ರಯ ಕಾಲನಿಯ ಮನೆಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ರೂಪದರ್ಶಿ ಪ್ರೇಕ್ಷ ಸಾವಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.
ಕುತ್ತಾರು, ಮುಂಡೋಳಿ ನಿವಾಸಿ ಯತಿರಾಜ್ ಗಟ್ಟಿ(20) ಆತ್ಮ ಹತ್ಯೆಗೈದ ಯುವಕ. ಯತಿರಾಜ್ ತನ್ನ ಮನೆಯ ಹಿಂದಿನ ಚಿಕ್ಕಮ್ಮನ ಮನೆಯ ಎದುರಿನ ಸಿಟ್ ಔಟ್ನ ಕಬ್ಬಿಣದ ಹುಕ್ಸ್ ಒಂದಕ್ಕೆ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದಾನೆ. ನಿನ್ನೆ ರಾತ್ರಿ 11 ರ ವೇಳೆ ಮನೆಗೆ ಬಂದಿದ್ದ ಯತಿರಾಜ್ ಚಿಕ್ಕಮ್ಮ ಮನೆಯಲ್ಲಿರದ ವೇಳೆ ನೇಣು ಬಿಗಿದಿದ್ದಾನೆ. ಇಂದು ಬೆಳಿಗ್ಗೆ ಯತಿರಾಜ್ ನ ಮಾವ ಹುಡುಕಾಡಿದಾಗ ಆತ್ಮಹತ್ಯೆಗೈದಿರುವುದು ಬೆಳಕಿಗೆ ಬಂದಿದೆ.ಕೂಡಲೆ ಮನೆಮಂದಿ ನೇಣು ಕುಣಿಕೆಯನ್ನ ಕಡಿದರೂ ಅದಾಗಲೇ ಯತಿರಾಜ್ ಮೃತಪಟ್ಟಿದ್ದ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾಣಿಸಿದ್ದಾರೆ.
ರೂಪದರ್ಶಿ ಸಾವಿಗೆ ಪ್ರಚೋದನೆ ಆರೋಪ..
2021 ರ ಮಾರ್ಚ್ 10 ರಂದು ಕುಂಪಲದ ಆಶ್ರಯ ಕಾಲನಿ ನಿವಾಸಿ ರೂಪದರ್ಶಿ ಪ್ರೇಕ್ಷ ತನ್ನ ಮನೆಯ ಕೋಣೆಯೊಳಗೆ ಸಿಲಿಂಗ್ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಯುವತಿಯ ಪೋಷಕರ ದೂರಿನಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪದಡಿ ಉಳ್ಳಾಲ ಪೊಲೀಸರು ಯತಿರಾಜನ್ನ ಬಂಧಿಸಿದ್ದರು. ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ ಯತಿರಾಜ್ ನ್ಯಾಯಾಲಯದಲ್ಲಿ ಈಗಲೂ ಪ್ರಕರಣವನ್ನ ಎದುರಿಸುತ್ತಿದ್ದ. ಯತಿರಾಜ್ ಇದೀಗ ದಿಢೀರನೆ ಆತ್ಮಹತ್ಯೆಗೈದಿದ್ದು ಸಾವಿಗೆ ನಿಖರ ಕಾರಣ ತಿಳಿದಿಲ್ಲ. ನಿರ್ದಿಷ್ಟ ಉದ್ಯೋಗದಲ್ಲಿಲ್ಲದ ಯತಿರಾಜ್ ತನ್ನಲ್ಲಿದ್ದ ಬೈಕನ್ನೂ ಮಾರಿದ್ದು ಖಿನ್ನತೆಗೊಳಗಾಗಿದ್ದನಂತೆ. ಮೃತ ಯತಿರಾಜ್ ತಂದೆ, ತಾಯಿ, ತಮ್ಮನನ್ನ ಅಗಲಿದ್ದಾನೆ.
ವನ್ ಸೈಡ್ ಲವ್ ; ಆಕೆಯ ಮಾಡೆಲಿಂಗ್, ಫೋಟೋ ಶೂಟ್ ಬಗ್ಗೆ ವಿರೋಧ, ಹರೆಯದ ಹುಡುಗಿಯ ದುರಂತ ಅಂತ್ಯ !!
Mangalore Kumpala Model Preksha susicde case, accused Yatin Raj who was facing charges of Abetment to Suicide has now committed suicide at his residence. A modeling girl, who was preparing to travel to Bangalore to participate in a photo shoot, was found dead by hanging-in a room at a Ashraya Colony in Kumpala in March 2021.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 01:43 pm
HK News Desk
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm