ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮುಸ್ಲಿಂ ಯುವ ಜೋಡಿ ಮೃತ್ಯು ! 

12-05-23 10:23 pm       Mangalore Correspondent   ಕರಾವಳಿ

ಗರದ ಪಂಪ್‌ವೆಲ್ ಬಳಿ ಕೆಲ ದಿನಗಳ ಹಿಂದೆ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವ ಜೋಡಿ ಚಿಕಿತ್ಸೆ ಫಲಕಾರಿಯಾಗದೆ ದೇರಳಕಟ್ಟೆಯ ಆಸ್ಪತ್ರೆಯಲ್ಲಿ ಶುಕ್ರವಾರ ಮೃತಪಟ್ಟಿರುವುದಾಗಿ ಕಂಕನಾಡಿ ನಗರ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಮಂಗಳೂರು, ಮೇ 12 : ನಗರದ ಪಂಪ್‌ವೆಲ್ ಬಳಿ ಕೆಲ ದಿನಗಳ ಹಿಂದೆ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವ ಜೋಡಿ ಚಿಕಿತ್ಸೆ ಫಲಕಾರಿಯಾಗದೆ ದೇರಳಕಟ್ಟೆಯ ಆಸ್ಪತ್ರೆಯಲ್ಲಿ ಶುಕ್ರವಾರ ಮೃತಪಟ್ಟಿರುವುದಾಗಿ ಕಂಕನಾಡಿ ನಗರ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಜಪ್ಪು ಬಪ್ಪಾಲ್‌ನ ಸಫ್ರೀನಾ (22) ಮತ್ತು ಬಂಟ್ವಾಳದ ನಿಹಾಲ್ (19) ಮೃತಪಟ್ಟಿರುವ ಜೋಡಿ ಎಂದು ಗುರುತಿಸಲಾಗಿದೆ. ಇವರು ಮೇ 7ರಂದು ಪಂಪ್‌ವೆಲ್ ಬಳಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅಸ್ವಸ್ಥಗೊಂಡಿದ್ದ ಈ ಜೋಡಿಯನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಇಬ್ಬರೂ ಮೃತಪಟ್ಟಿದ್ದಾರೆ. 

ನಿಹಾಲ್ ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದು, ಸಫ್ರೀನಾ ಮನೆಯಲ್ಲೇ ಇದ್ದರು ಎನ್ನಲಾಗಿದೆ. ಇವರಿಬ್ಬರೂ ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದೆ. ಕೃತ್ಯಕ್ಕೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Mangalore Muslim couple lovers commit suicide consuming poision. The both were said to be admitted at the Deralakatte hospital and both have said to be dead.