ಬ್ರೇಕಿಂಗ್ ನ್ಯೂಸ್
25-05-23 12:47 pm Mangalore Correspondent ಕರಾವಳಿ
ಮಂಗಳೂರು, ಮೇ 25 : ದುಬೈಗೆ ಹೊರಡಲು ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಘಟನೆ ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಇಂದು ಬೆಳಗ್ಗೆ 8.30ರ ವೇಳೆಗೆ ಮಂಗಳೂರಿನಿಂದ ದುಬೈಗೆ ಹೊರಡಲು ಅನುವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿಯಾಗಿದೆ. ಪ್ರಯಾಣಿಕರನ್ನು ಹೊತ್ತುಕೊಂಡು ವಿಮಾನ ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದಾಗಲೇ ಹಕ್ಕಿಯೊಂದು ಹಾರಿ ಬಂದು ವಿಮಾನದ ರೆಕ್ಕೆಗೆ ಬಡಿದಿದೆ. ಏಕಾಏಕಿ ರೆಕ್ಕೆಯ ಭಾಗಕ್ಕೆ ಡಿಕ್ಕಿಯಾಗಿದ್ದರಿಂದ ತಕ್ಷಣ ಅಪಾಯದ ಸೂಚನೆ ಅರಿತ ಪೈಲಟ್, ನಿಲ್ದಾಣದ ಮಾಹಿತಿ ಕೇಂದ್ರಕ್ಕೆ ಸೂಚನೆ ರವಾನಿಸಿದ್ದಾರೆ. ಅಲ್ಲದೆ, ಟೇಕಾಫ್ ಕ್ಯಾನ್ಸಲ್ ಮಾಡಿ ರನ್ ವೇನಿಂದ ವಾಪಸ್ ಬಂದಿದ್ದು ಕೂಡಲೇ ಭದ್ರತಾ ಸಿಬಂದಿ ತಪಾಸಣೆ ನಡೆಸಿದ್ದಾರೆ.
ಆನಂತರ, ಎಲ್ಲ ಪ್ರಯಾಣಿಕರನ್ನ ಇಳಿಸಿ ತಪಾಸಣೆ ಕೈಗೊಂಡಿದ್ದು ಅದೇ ವೇಳೆಗೆ ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ಇಂಡಿಗೋ ವಿಮಾನದಲ್ಲಿ ದುಬೈ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗಿದೆ. ಹಕ್ಕಿ ಡಿಕ್ಕಿಯಿಂದ ಯಾವುದೇ ಅಪಾಯ ಸಂಭವಿಸಿಲ್ಲವಾದರೂ, ಕೆಲ ಕಾಲ ವಿಮಾನ ನಿಲ್ದಾಣದಲ್ಲಿ ಆತಂಕಕ್ಕೆ ಕಾರಣವಾಯಿತು.
Major tragedy was averted at the Mangaluru International Airport in Karnataka's Dakshina Kannada district when a Dubai-bound Indigo flight suffered a bird hit while taking off on Thursday.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 11:47 am
Mangalore Correspondent
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm