ಬ್ರೇಕಿಂಗ್ ನ್ಯೂಸ್
26-05-23 01:11 pm Mangalore Correspondent ಕರಾವಳಿ
ಮಂಗಳೂರು, ಮೇ 26 : ಭಜರಂಗದಳ, ಆರ್.ಎಸ್.ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಉಳಿಯಲ್ಲ, ಇಲ್ಲಿಗೇ ಸಿದ್ದರಾಮಯ್ಯ ರಾಜಕೀಯ ಮುಗಿಯುತ್ತದೆ. ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆಗೆ ಅಷ್ಟು ತಾಕತ್ ಇದ್ರೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರನ್ನ ಬಂಧಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಸವಾಲು ಹಾಕಿದ್ದಾರೆ.
ಆರ್.ಎಸ್.ಎಸ್ ನಿಷೇಧ ಮಾಡ್ತೀವಿ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿದ ನಳಿನ್, ಆರ್.ಎಸ್.ಎಸ್ ಈ ದೇಶದಲ್ಲಿ ರಾಷ್ಟ್ರ ಭಕ್ತಿ ಕಲಿಸಿದೆ. ಈ ದೇಶ ನಡೆಸುವ ಪ್ರಧಾನ ಮಂತ್ರಿ ಆರ್.ಎಸ್.ಎಸ್ ಸ್ವಯಂಸೇವಕ. ಕೇಂದ್ರದ ಮಂತ್ರಿಗಳು, ನಾವೆಲ್ಲರೂ ಆರ್.ಎಸ್.ಎಸ್ ಸ್ವಯಂಸೇವಕರು. ನೆಹರು, ಇಂದಿರಾ ಗಾಂಧಿ ಎಲ್ಲರೂ ನಿಷೇಧಕ್ಕೆ ಕೈ ಹಾಕಿ ಕೈ ಸುಟ್ಟುಕೊಂಡಿದಾರೆ. ನರಸಿಂಹ ರಾವ್ ಸರ್ಕಾರ, ಯಾವಾಗೆಲ್ಲಾ ಕಾಂಗ್ರೆಸ್ ಸರ್ಕಾರ ಇತ್ತೋ ಆಗೆಲ್ಲಾ ಇಂಥ ಪ್ರಯತ್ನ ಆಗಿದೆ. ನಿಷೇಧದ ಕೆಲಸ ಮಾಡಿದಾಗಲೆಲ್ಲಾ ದೇಶದಲ್ಲಿ ಕಾಂಗ್ರೆಸ್ ಸರ್ಕಾರವೇ ಬಂದಿಲ್ಲ.


ಭಜರಂಗದಳ, ಆರ್.ಎಸ್.ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ, ಸಿದ್ದರಾಮಯ್ಯ ರಾಜಕೀಯ ಮುಗಿದು ಹೋಗಲಿದೆ. ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆಗೆ ತಾಕತ್ ಇದ್ರೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರನ್ನ ಬಂಧಿಸಿ. ನಿಮ್ಮ ಮೆರವಣಿಗೆ, ವಿಜಯೋತ್ಸವ, ಸಭೆಗಳಲ್ಲೇ ಪಾಕಿಸ್ತಾನ ಪರ ಘೋಷಣೆ ಬಂದಿದೆ. ಅದು ಬಿಟ್ಟು ರಾಜ್ಯವನ್ನ ವಿಭಜನಾವಾದದ ಮೂಲಕ ಕಟ್ಟೋದು ಬೇಡ ಎಂದರು ನಳಿನ್.
ಪ್ರಿಯಾಂಕ್ ಖರ್ಗೆ ಬಾಯಿಗೆ ಹಿಡಿತ ಇಟ್ಟುಕೊಂಡು, ನಾಲಿಗೆ ಹಿಡಿತದಲ್ಲಿಟ್ಟು ಮಾತನಾಡಲಿ. ಭಜರಂಗದಳ, ಆರ್.ಎಸ್.ಎಸ್ ನಿಷೇಧ ಮಾಡಲು ನಿಮಗೆ ಹಕ್ಕಿಲ್ಲ. ಪಿಎಫ್ಐ ಅನ್ನ ನಾವು ನಿಷೇಧ ಮಾಡಿದ್ದೇವೆ, ಇವರೇನು ನಿಷೇಧ ಮಾಡೋದು? ಆರ್ ಎಸ್ಎಸ್ ರಾಷ್ಟ್ರಭಕ್ತಿ ಸಂಕೇತ ಅಂತ ಕಾಂಗ್ರೆಸ್ ನಾಯಕರೇ ಹೇಳಿದ್ದಾರೆ. ವಿಧಾನಸೌಧದಲ್ಲಿ ಡಿಕೆಶಿಯವರೇ ಆರೆಸ್ಸೆಸ್ ಪ್ರಾರ್ಥನೆ ಹೇಳಿದ್ದಾರೆ, ಅದರಲ್ಲೇ ಇದೆ. ಆ ಪ್ರಾರ್ಥನೆಯಲ್ಲಿ ಏನಿದೆ ಅಂತ ಖರ್ಗೆಯವರು ಡಿಕೆಶಿ ಬಳಿ ಕೇಳಿ ತಿಳಿದುಕೊಳ್ಳಲಿ. ರಾಜ್ಯವನ್ನು ದ್ವೇಷ, ವಿಭಜನೆ ಮೂಲಕ ಕಾಂಗ್ರೆಸ್ ಆಡಳಿತ ಮಾಡ್ತಿದೆ. ಇವರ ಮಂತ್ರಿ ಮಂಡಲದ ಗಲಾಟೆಯಲ್ಲೇ ಕಾಂಗ್ರೆಸ್ ವಿಭಜನೆ ಆಗುತ್ತದೆ. ಇದರ ಭಯದಲ್ಲಿ ಆರ್.ಎಸ್ಎಸ್ ಹೆಸರಲ್ಲಿ ಕಾಂಗ್ರೆಸ್ ಗಟ್ಟಿ ಮಾಡ್ತಾ ಇದಾರೆ. ಇವರ ಜಗಳ ಹೊರ ಬಾರದಂತೆ ಮಾಡಲು ಇದೊಂದು ಷಡ್ಯಂತ್ರ ಅಷ್ಟೇ ಎಂದು ನಳಿನ್ ಕುಮಾರ್ ಹೇಳಿದ್ದಾರೆ.
Banning RSS or Bajarang dal in Karnataka Congress will be burnt slams Naleen Kateel in Mangalore. He slammed Priyank Kharge for his remarks on RSS.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 11:47 am
Mangalore Correspondent
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm