ಬ್ರೇಕಿಂಗ್ ನ್ಯೂಸ್
27-05-23 10:07 pm Mangalore Correspondent ಕರಾವಳಿ
ಮಂಗಳೂರು, ಮೇ 27: ರಾಜ್ಯ ಸರಕಾರ ತಾತ್ಕಾಲಿಕ ನೇಮಕಾತಿ ರದ್ದುಪಡಿಸಿದ್ದರಿಂದ ಬಿಜೆಪಿ ಕಾರ್ಯಕರ್ತ ದಿ. ಪ್ರವೀಣ್ ನೆಟ್ಟಾರು ಪತ್ನಿಯ ಉದ್ಯೋಗಕ್ಕೆ ಕತ್ತರಿ ಬಿದ್ದಿರುವ ‘’ಹೆಡ್ ಲೈನ್ ಕರ್ನಾಟಕ’’ದ ಸುದ್ದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ. ಅಲ್ಲದೆ, ಪ್ರವೀಣ್ ಪತ್ನಿಯನ್ನು ಅದೇ ಹುದ್ದೆಗೆ ಮರು ನೇಮಕ ಮಾಡಿಕೊಳ್ಳಲು ಆದೇಶ ಮಾಡಿದ್ದಾರೆ.
ಹೊಸ ಸರಕಾರ ಬಂದ ನಂತರ ಹಿಂದಿನ ಸರಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ, ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ. ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರನ್ನು ಮರು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ ತಿಳಿಸಿದ್ದಾರೆ. ಈ ಹೇಳಿಕೆಯ ಜೊತೆಗೆ ಹೆಡ್ ಲೈನ್ ಕರ್ನಾಟಕ ಪ್ರಕಟಿಸಿದ್ದ ಸುದ್ದಿಯ ತುಣುಕನ್ನು ಟ್ವೀಟ್ ನಲ್ಲಿ ಟ್ಯಾಗ್ ಮಾಡಿದ್ದಾರೆ.
ಹೊಸ ಸರಕಾರ ಬರುತ್ತಿದ್ದಂತೆ ಹಿಂದಿನ ಬಿಜೆಪಿ ಸರಕಾರ ಮಾಡಿದ್ದ ಎಲ್ಲ ರೀತಿಯ ತಾತ್ಕಾಲಿಕ ನೇಮಕಾತಿಯನ್ನು ರದ್ದುಪಡಿಸಲಾಗಿತ್ತು. ಅದರಂತೆ, ಪ್ರವೀಣ್ ನೆಟ್ಟಾರು ಪತ್ನಿಯ ಉದ್ಯೋಗಕ್ಕೂ ಕತ್ತರಿ ಬಿದ್ದಿತ್ತು. ಉದ್ಯೋಗ ನೇಮಕಾತಿ ಸಂದರ್ಭದಲ್ಲಿ ಮುಖ್ಯಮಂತ್ರಿ ಪದಾಧಿಕಾರ ಇರುವ ವರೆಗೆ ಎಂದು ಉಲ್ಲೇಖ ಮಾಡಲಾಗಿತ್ತು. ಅದೇ ಕಾರಣಕ್ಕೆ ಪ್ರವೀಣ್ ಪತ್ನಿ ಉದ್ಯೋಗ ಕಳಕೊಳ್ಳುವಂತಾಗಿತ್ತು. ಬಿಜೆಪಿ ಸರಕಾರದ ಎಡವಟ್ಟಿನ ಬಗ್ಗೆ ಹೆಡ್ ಲೈನ್ ಕರ್ನಾಟಕ ಗಮನ ಸೆಳೆದಿದ್ದಲ್ಲದೆ ಹಿಂದಿನ ಸರಕಾರದ ಆದೇಶದ ಪ್ರತಿಯನ್ನೂ ಸುದ್ದಿಯಲ್ಲಿ ಎತ್ತಿ ತೋರಿಸಿತ್ತು. ಇದರಿಂದ ಸುದ್ದಿಗೆ ಹೆಚ್ಚು ದೃಢತೆ ಬಂದಿದ್ದಲ್ಲದೆ, ಆ ಸುದ್ದಿಯೀಗ ಮುಖ್ಯಮಂತ್ರಿ ಗಮನ ಸೆಳೆಯುವಂತಾಗಿದೆ.
ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ.
— Siddaramaiah (@siddaramaiah) May 27, 2023
ಇದನ್ನು… pic.twitter.com/Y3hz7EVTVi
Impact, CM Siddaramaiah reappoints job to Praveen Netraru wife, tweets Headline Karnataka story on Twitter. CM mentions that The tenure of temporary contract employees appointed by the previous government gets automatically cancelled once the new government is elected. It is not just with Praveen Nettar's wife but also with 150 other contract employees. There is no role of our government in this. We will consider this as a special case and reappoint her.
The temporary State government job of Nutan Kumari, wife of slain BJP Yuva Morcha leader Praveen Nettaru, had been terminated.
02-05-25 10:00 pm
Bangalore Correspondent
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 06:57 pm
Mangalore Correspondent
Mangalore, Suhas Shetty Murder, Anti Communia...
03-05-25 02:58 pm
Mangalore Suhas Shetty Murder, Instagram, Pol...
02-05-25 10:47 pm
Mangalore Suhas Shetty Murder, Shobha Karandl...
02-05-25 09:26 pm
B Y Vijayendra, Suhas Shetty Murder, Mangalor...
02-05-25 06:44 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm