ಬ್ರೇಕಿಂಗ್ ನ್ಯೂಸ್
31-05-23 04:26 pm Mangalore Correspondent ಕರಾವಳಿ
ಮಂಗಳೂರು, ಮೇ 31: ನಿಷೇಧಿತ ಸಂಘಟನೆ ಪಿಎಫ್ಐ ಮತ್ತು ದೇಶದ್ರೋಹಿ ಕೃತ್ಯಕ್ಕಾಗಿ ಹವಾಲಾ ಹಣದ ನೆಟ್ವರ್ಕ್ ನಡೆಸುತ್ತಿದ್ದ ಮಾಹಿತಿ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎನ್ಐಎ ಅಧಿಕಾರಿಗಳು ಮತ್ತೊಮ್ಮೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಒಂದೇ ಜಿಲ್ಲೆಯಲ್ಲಿ 16ಕ್ಕೂ ಹೆಚ್ಚು ಕಡೆ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು, ನಸುಕಿನಲ್ಲಿ ಬಾಗಿಲು ತಟ್ಟಿದ ಪೊಲೀಸರನ್ನು ಕಂಡು ಸ್ಥಳೀಯ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ.
ಬುಧವಾರ ನಸುಕಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ತಾಲೂಕಿನ 16ಕ್ಕೂ ಹೆಚ್ಚು ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ಅಧಿಕಾರಿಗಳು ದಾಳಿ ನಡೆಸಿದ್ದರು. ಬಂಟ್ವಾಳ ತಾಲೂಕಿನಲ್ಲಿ ಗೋಳ್ತಮಜಲು ಗ್ರಾಮದಲ್ಲಿ ಎರಡು ಕಡೆ, ಮಾಣಿಯಲ್ಲಿ ಎರಡು ಕಡೆ, ನರಿಕೊಂಬು ಗ್ರಾಮದಲ್ಲಿ ಎರಡು ಕಡೆ, ಬೊಳ್ಳಾಯಿ, ಸಜಿಪನಡು, ಕೊಳ್ನಾಡುವಿನಲ್ಲಿ ಶಂಕಿತರ ಮನೆಗಳಿಗೆ ಹೊಕ್ಕ ಅಧಿಕಾರಿಗಳು, ಹಲವರನ್ನು ವಿಚಾರಣೆ ನಡೆಸಿದ್ದಾರೆ. ಶಂಕಿತರ ಮೊಬೈಲ್, ಲ್ಯಾಪ್ಟಾಪ್, ಬ್ಯಾಂಕ್ ವಹಿವಾಟಿನ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಬದ್ರುದ್ದೀನ್ ಎಂಬವರ ಖಾತೆಗಳಿಗೆ ಬೇನಾಮಿ ಖಾತೆಯಿಂದ ಫಂಡಿಂಗ್ ಆಗಿರುವ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ. ಯಾಕಾಗಿ ಹಣ ರವಾನೆಯಾಗಿದೆ, ಯಾರು ಹಣ ಹಾಕಿದವರು ಎನ್ನುವ ಬಗ್ಗೆ ಆತನನ್ನು ಪ್ರಶ್ನೆ ಮಾಡಿದ್ದಾರೆ. ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವರೆಗೂ ತನಿಖೆ ನಡೆದಿದ್ದು, ಶಂಕಿತ ವ್ಯಕ್ತಿಯ ಮೊಬೈಲ್, ಬ್ಯಾಂಕ್ ವಹಿವಾಟಿನ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ಬಿಹಾರದ ಪಾಟ್ನಾದಲ್ಲಿ ಎರಡು ವರ್ಷಗಳ ಹಿಂದೆ ಮೋದಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಸಂಚು ನಡೆಸಿದ್ದ ಪ್ರಕರಣದ ಬೆನ್ನುಹತ್ತಿದ ಅಧಿಕಾರಿಗಳಿಗೆ ಭಯೋತ್ಪಾದಕ ಕೃತ್ಯಕ್ಕಾಗಿ ಬೇನಾಮಿ ಖಾತೆಗಳಿಂದ ಫಂಡಿಂಗ್ ಆಗುತ್ತಿದ್ದ ಬಗ್ಗೆ ಮಾಹಿತಿ ಸಿಕ್ಕಿತ್ತು. ತನಿಖೆಯಲ್ಲಿ ಕರಾವಳಿಯ ಮಂಗಳೂರಿನ ನಂಟು ಸಿಕ್ಕಿದ್ದರಿಂದ ಅಧಿಕಾರಿಗಳು ಕಾರ್ಯಾಚರಣೆಯನ್ನು ಇತ್ತ ವಿಸ್ತರಣೆ ಮಾಡಿದ್ದರು. ಎರಡು ತಿಂಗಳ ಹಿಂದೆ ಬಂಟ್ವಾಳ, ಪುತ್ತೂರು ಮತ್ತು ಕೇರಳದ ಗಡಿಭಾಗ ಮಂಜೇಶ್ವರದಲ್ಲಿ ದಿಢೀರ್ ಕಾರ್ಯಾಚರಣೆ ನಡೆಸಿ, ಬೇನಾಮಿ ಖಾತೆಗಳಿಗೆ ಹಣ ರವಾನಿಸುತ್ತಿದ್ದ ನಾಲ್ವರನ್ನು ಬಂಧಿಸಿದ್ದರು. ವಿದೇಶದಲ್ಲಿ ಉದ್ಯೋಗದಲ್ಲಿರುವ ವ್ಯಕ್ತಿಗಳು ಹಣ ಸಂಗ್ರಹಿಸಿ, ಹವಾಲ ರೂಪದಲ್ಲಿ ಕರಾವಳಿಯ ಯುವಕರ ಮೂಲಕ ಕಳಿಸಿಕೊಡುತ್ತಿದ್ದುದು ತನಿಖೆಯಲ್ಲಿ ಪತ್ತೆಯಾಗಿತ್ತು. ಇದೇ ಪ್ರಕರಣದ ಮುಂದುವರಿದ ಭಾಗವಾಗಿ ಇದೀಗ ಕಾರ್ಯಾಚರಣೆ ನಡೆದಿದೆ ಎನ್ನಲಾಗುತ್ತಿದ್ದು, ಪುತ್ತೂರು, ಬೆಳ್ತಂಗಡಿಯಲ್ಲಿ ಹಲವರನ್ನು ವಶಕ್ಕೆ ಪಡೆದಿದ್ದಾರೆ.
PFI Hawala Network, NIA raid in Mangalore, officers search for Bank transactions, raid in 16 locations of Dakshina Kannada. Sleuths of NIA raided 16 places in Dakshina Kannada (DK) district early in the morning on Wednesday May 31. Home, offices and hospitals were raided simultaneously in the city as well as Puttur, Beltangady, Uppinangady, Venur and Bantwal.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm