ಬ್ರೇಕಿಂಗ್ ನ್ಯೂಸ್
07-06-23 12:23 pm Mangalore Correspondent ಕರಾವಳಿ
ಮಂಗಳೂರು, ಜೂನ್ 7: ಕರಾವಳಿಯಲ್ಲಿ ಇನ್ನೂ ಮಳೆ ಶುರುವಾಗದ ಕಾರಣ ಕುಡಿಯುವ ನೀರಿಗೆ ತತ್ವಾರ ಉಂಟಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ತೀವ್ರ ಜಲಕ್ಷಾಮದಿಂದಾಗಿ ಭಕ್ತರಿಗೆ ಬಿಸಿ ತಟ್ಟಿದೆ. ಕಟೀಲು ದೇಗುಲದಲ್ಲಿ ದಿನವೂ 15ರಿಂದ 20 ಸಾವಿರ ಭಕ್ತರು ಭೇಟಿ ನೀಡುತ್ತಿದ್ದು, ಎಲ್ಲರಿಗೂ ಊಟದ ವ್ಯವಸ್ಥೆ ಇದೆ. ಆದರೆ ಈಗ ನೀರಿನ ಕೊರತೆಯಿಂದಾಗಿ ಸಮಸ್ಯೆ ಎದುರಾಗಿದೆ.
ಊಟಕ್ಕೆ ಪ್ಲೇಟ್ ಬದಲು ಬಳಸಿ ಎಸೆಯುವ ಹಾಳೆ ತಟ್ಟೆ, ಬಾಳೆ ಎಲೆಯನ್ನು ಬಳಸಲಾಗುತ್ತಿದೆ. ದೇಗುಲ ಪ್ರವೇಶ ದ್ವಾರದಲ್ಲಿ ಭಕ್ತರು ಕೈಕಾಲು ತೊಳೆಯುವ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ದೇಗುಲದ ಸಮಗ್ರ ವ್ಯವಸ್ಥೆಗೆ ದಿನಂಪ್ರತಿ 7 ಲಕ್ಷ ಲೀಟರ್ ನೀರಿನ ಅಗತ್ಯವಿದ್ದು ನೀರು ಸರಬರಾಜು ಮಾಡುತ್ತಿದ್ದ ಬೋರ್ ವೆಲ್ಗಳೂ ಬತ್ತಲಾರಂಭಿಸಿವೆ. ಬೋರ್ ವೆಲ್ನಲ್ಲಿ ಪ್ರತಿ ದಿನ 10ರಿಂದ 15 ನಿಮಿಷ ಮಾತ್ರ ನೀರು ಬರುತ್ತಿದ್ದು, ಖಾಸಗಿ ಟ್ಯಾಂಕರ್ ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಆದರೂ ಶೌಚಾಲಯ, ಅತಿಥಿ ಗೃಹಗಳಿಗೆ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಆಗಿದೆ.
ಕಟೀಲು ದೇವಸ್ಥಾನಕ್ಕೆ ಸಂಬಂಧಪಟ್ಟ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಸಿಬಂದಿ ಸೇರಿ ಸುಮಾರು 3 ಸಾವಿರ ಮಂದಿಯಿದ್ದು ನೀರಿನ ಸಮಸ್ಯೆಯಿಂದಾಗಿ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಅರ್ಧ ದಿನಕ್ಕೆ ತರಗತಿಗಳನ್ನು ನಡೆಸಲಾಗುತ್ತಿದೆ. ಶಾಲೆಯಲ್ಲಿ ಮಧ್ಯಾಹ್ನದ ಊಟ ತಯಾರಿಸಲು ನೀರಿನ ಕೊರತೆ ಎದುರಾಗಿದ್ದರಿಂದ ಅರ್ಧ ದಿನಕ್ಕೆ ಶಾಲೆ ಬಿಡಲಾಗುತ್ತಿದೆ. ಕಟೀಲು ದೇವಸ್ಥಾನದ ಗೋಶಾಲೆಗಳಿಗೂ ನೀರಿನ ಸಮಸ್ಯೆ ಎದುರಾಗಿದ್ದು, ಟ್ಯಾಂಕರ್ ನಲ್ಲಿ ನೀರು ತರಿಸಲಾಗುತ್ತಿದೆ. ದೇವಸ್ಥಾನವನ್ನು ಸುತ್ತುವರಿದು ಹರಿಯುವ ನಂದಿನಿ ನದಿ ಪೂರ್ತಿಯಾಗಿ ಬತ್ತಿ ಹೋಗಿದ್ದು, ನೀರಿನ ಸಂಪನ್ಮೂಲ ಕಂಡುಕೊಳ್ಳಲು ಮತ್ತೆ ಬಾವಿ ಕೊರೆಯಲು ದೇವಸ್ಥಾನದ ಆಡಳಿತ ಮಂಡಳಿ ಚಿಂತನೆ ನಡೆಸಿದೆ. ಮಳೆ ಬಂದು ನೀರು ತುಂಬಿಕೊಳ್ಳುವ ವರೆಗೂ ಕಟೀಲು ದೇಗುಲದಲ್ಲಿ ನೀರಿಗೆ ಸಮಸ್ಯೆ ಎದುರಾಗಲಿದೆ.
Scorching Summer, no water even to wash hands and legs at Kateel Temple in Mangalore
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm