ಬ್ರೇಕಿಂಗ್ ನ್ಯೂಸ್
07-06-23 09:34 pm Mangalore Correspondent ಕರಾವಳಿ
ಮಂಗಳೂರು, ಜೂ.7: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನಲೆಯಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು ಜೂ.11ರ ವರೆಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು. ಮೀನುಗಾರರಿಗೆ ಕಡ್ಡಾಯವಾಗಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದ್ದು. ಪ್ರವಾಸಿಗರು, ಸಾರ್ವಜನಿಕರು ನದಿತೀರಕ್ಕೆ, ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸುವುದು. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಟೋಲ್ ಫ್ರೀ ಸಂಖ್ಯೆ 24/7 ಕಂಟ್ರೋಲ್ ರೂಮ್- 1077/0824-2442590 ಸಂಪರ್ಕಿಸುವುದು.
ತುರ್ತು ಸೇವೆಗಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ-1077 (0824- 2442590) 24/7 ಕಾರ್ಯಾಚರಣೆಯಲ್ಲಿರುತ್ತದೆ.
ವಿಪತ್ತು ನಿರ್ವಹಣೆ ಕುರಿತಾಗಿ ನಿರ್ದೇಶನಗಳನ್ನು ನೀಡಲು, ತುರ್ತಾಗಿ ಮಾಹಿತಿಯನ್ನು ಸಂಗ್ರಹಿಸಲು ಹಾಗೂ ಸಂಬಂಧಿಸಿದವರಿಗೆ ವಿನಿಮಯ ಮಾಡಿಕೊಳ್ಳಲು ಪ್ರತ್ಯೇಕವಾಗಿ ಜಿಲ್ಲಾ ಮಟ್ಟದ, ಉಪ ವಿಭಾಗ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳನ್ನು ಒಳಗೊಂಡ ವಾಟ್ಸಪ್ ಗ್ರೂಪ್ ರಚಿಸಲಾಗಿದೆ.
ಜಿಲ್ಲೆಯ ಎಲ್ಲಾ ಉಪ ವಿಭಾಗಾಧಿಕಾರಿಗಳ ಹಾಗೂ ಎಲ್ಲಾ ತಹಶೀಲ್ದಾರರ ಕಾರ್ಯಾಲಯದಲ್ಲಿ ಕಂಟ್ರೋಲ್ ರೂಮ್ ಗಳನ್ನು ತೆರೆದು 24/7 ಕಾಲ ಕಾರ್ಯ ನಿರ್ವಹಿಸುವ ಮೂಲಕ ಪ್ರತಿ ದಿನ ಮಳೆ ಮತ್ತು ಮಳೆಹಾನಿ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ಕಡ್ಡಾಯವಾಗಿ ಸಲ್ಲಿಸುವಂತೆ ನಿರ್ದೇಶನ ನೀಡಲಾಗಿರುತ್ತದೆ.
ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದ ನಿಯಂತ್ರಣ ಕೊಠಡಿ ಸಂಖ್ಯೆಗಳು:
ಮಂಗಳೂರು-0824-2220587/596, ಉಳ್ಳಾಲ-0824-2204424, ಬಂಟ್ವಾಳ- 08255-232120/232500, ಪುತ್ತೂರು- 08251-230349/232799, ಬೆಳ್ತಂಗಡಿ-08256-232047/233123, ಸುಳ್ಯ- 08257-231231/230330/298330, ಮೂಡಬಿದ್ರೆ- 08258-238100/239900, ಕಡಬ-08251-260435, ಮುಲ್ಕಿ- 0824-2294496 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
IMD warns of cyclonic conditions in Arabian Sea, heavy rainfall during next 4 days, fishermen restricted in fishing
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm