ಬ್ರೇಕಿಂಗ್ ನ್ಯೂಸ್
07-06-23 11:09 pm Mangalore Correspondent ಕರಾವಳಿ
ಮಂಗಳೂರು, ಜೂ, 07: ಭಾರತೀಯ ರೈಲ್ವೆಯು ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಹೆಚ್ಚುವರಿ ರೈಲುಗಳನ್ನು ಬಿಡುತ್ತಲೇ ಇದೆ. ಹಾಗೆಯೆ ಮತ್ತೊಂದೆ ಹಬ್ಬ, ಹರಿದಿನಗಳ ಸಂದರ್ಭದಲ್ಲೂ ಸಹ ವಿಶೇಷ ರೈಲುಗಳ ವ್ಯವಸ್ಥೆಯನ್ನು ಸಹ ಕಲ್ಪಿಸುತ್ತಲೇ ಬಂದಿದೆ.
ಹಾಗೆಯೆ ಇದೀಗ ಮಂಗಳೂರು-ಅಹಮದಾಬಾದ್ ನಡುವೆ ವಿಶೇಷ ರೈಲು ಬಿಡಲು ನಿರ್ಧರಿಸಿದೆ. ಹಾಗಾದರೆ ಈ ರೈಲು ಪ್ರಾರಂಭ ಆಗುವ ದಿನಾಂಕಗಳು ಮತ್ತು ಮಾರ್ಗಗಳ ವಿವರವನ್ನು ಇಲ್ಲಿ ತಿಳಿಯಿರಿ.
ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಸುವ ಸಲುವಾಗಿ ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಜೂನ್ 9ರಿಂದ ಅಹಮದಾಬಾದ್ ಮತ್ತು ಮಂಗಳೂರು ನಡುವೆ ವಿಶೇಷ ಸಾಪ್ತಾಹಿಕ ರೈಲು ಬಿಡಲು ಭಾರತೀಯ ರೈಲ್ವೆ ನಿರ್ಧಾರ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. 09424 ಮತ್ತು 09423 ಸಂಖ್ಯೆಯ ರೈಲು ಅಹಮದಾಬಾದ್ ಮತ್ತು ಮಂಗಳೂರು ನಡುವೆ ಸಂಚಾರ ಆಂರಂಭಿಸಲಿದೆ. ಅಲ್ಲದೆ ವಿಶೇಷ ರೈಲು ದರ ಪಾವತಿಸಿ ಈ ರೈಲಿನಲ್ಲಿ ಸಂಚಾರ ಮಾಡಬಹುದಾಗಿದೆ ಎನ್ನುವ ಮಾಹಿತಿಯನ್ನು ನೀಡಿದೆ.
ಕೆಲವು ದಿನಗಳ ಹಿಂದೆಯಷ್ಟೇ ಒಡಿಶಾದ ಬಾಲಸೋರ್ನಲ್ಲಿ ನಡೆದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ. ಈ ಹಿನ್ನೆ ರೈಲುಗಳಲ್ಲಿ ಪ್ರಯಾಣಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳು ದೃಷ್ಟಿಯಿಂದ ಪಶ್ಚಿಮ ರೈಲ್ವೆಯ ಸಹಕಾರದೊಂದಿಗೆ ಈ ವಿಶೇಷ ರೈಲು ಸಂಚಾರ ಯೋಜನೆಯನ್ನು ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು 09424 ಸಂಖ್ಯೆಯ ರೈಲು ಶುಕ್ರವಾರ ಸಂಜೆ 4 ಗಂಟೆಗೆ ಅಂದರೆ ಜೂನ್ 9ರಿಂದ ಆರಂಭವಾಗಲಿದೆ. ಅಹಮದಾಬಾದ್ನಿಂದ ಆರಂಭವಾಗುವ ಈ ರೈಲು ಜೂನ್ 9, 16 ಮತ್ತು 23 ಮೂರು ದಿನಗಳ ಕಾಲ ಸಂಚಾರ ಮಾಡಲಿದೆ. ನಂತರ ಶನಿವಾರ ಸಂಜೆ 7:40ಕ್ಕೆ ಮಂಗಳೂರು ತಲುಪಲಿದೆ.
ಹಾಗೆಯೆ 09423 ಸಂಖ್ಯೆಯ ರೈಲು ಜೂನ್ 10, 17 ಮತ್ತು 24 ರಂದು ಶನಿವಾರ ರಾತ್ರಿ 9:10ಕ್ಕೆ ಮಂಗಳೂರಿನ ಜಂಕ್ಷನ್ನಿಂದ ಹೊರಟು, ಸೋಮವಾರದಂದು (ಜೂನ್ 25) ಮುಂಜಾನೆ 1:15ಕ್ಕೆ ಅಹಮದಾಬಾದ್ ಜಂಕ್ಷನ್ಗೆ ತಲುಪುತ್ತದೆ ಎಂದು ತಿಳಿಸಿದೆ.
Mangalore Ahmedabad train to start from June 9th.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm