ಬ್ರೇಕಿಂಗ್ ನ್ಯೂಸ್
12-06-23 04:33 pm Mangalore Correspondent ಕರಾವಳಿ
ಉಳ್ಳಾಲ, ಜೂ.12: ಬೈಕ್ ಗೆ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ಕಳೆದ ಜೂ.4 ರ ಆದಿತ್ಯವಾರ ತಡರಾತ್ರಿ ಉಚ್ಚಿಲ, ಸಂಕೋಳಿಗೆ ಎಂಬಲ್ಲಿ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ಕೋಟೆಕಾರು ಪಟ್ಟಣ ವ್ಯಾಪ್ತಿಯ ಮಾಡೂರು ವೈದ್ಯನಾಥ ದೈವಸ್ಥಾನ ರಸ್ತೆ ನಿವಾಸಿ ತೇಜಸ್ ಕುಲಾಲ್ (28) ಮೃತ ಯುವಕ. ಕಳೆದ ಜೂ.4 ರ ಆದಿತ್ಯವಾರ ತಡರಾತ್ರಿ ತೇಜಸ್ ಸಂಕೋಳಿಗೆಯ ಪೆಟ್ರೋಲ್ ಬಂಕಿಗೆ ಪೆಟ್ರೋಲ್ ತುಂಬಿಸಲು ಬೈಕಲ್ಲಿ ತೆರಳುತ್ತಿದ್ದ ವೇಳೆ ಕೇರಳ ನೋಂದಣಿಯ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಹಿಟ್ & ರನ್ ಪ್ರಕರಣ ದಾಖಲಿಸಿದ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ತಲಪಾಡಿ ಟೋಲ್ ಗೇಟ್ನ ಸಿಸಿಟಿವಿ ದೃಶ್ಯಾವಳಿ ಆಧಾರದಲ್ಲಿ ಮರುದಿನವೇ ಘಟನೆಗೆ ಕಾರಣವಾದ ಕಾರನ್ನ ಜಪ್ತಿ ಗೊಳಿಸಿದ್ದರು.

ಗಂಭೀರ ಗಾಯಗೊಂಡಿದ್ದ ತೇಜಸನ್ನು ತಕ್ಷಣಕ್ಕೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದರು. ನಂತರ ಮಂಗಳೂರಿನ ಕೆಎಮ್ ಸಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಿದ್ದು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತ ತೇಜಸ್ ಅವಿವಾಹಿತರಾಗಿದ್ದು ಸುಝಕಿ ಕಂಪನಿಯಲ್ಲಿ ಮೆಕ್ಯಾನಿಕ್ ಆಗಿದ್ದರು. ತೇಜಸ್ ಬಜರಂಗದಳ ಮಾಡೂರು ಶಾಖೆಯ ಸಕ್ರಿಯ ಕಾರ್ಯಕರ್ತರಾಗಿದ್ದರು. ಮೃತರು ತಂದೆ ರಾಮ ಕುಲಾಲ್, ತಾಯಿ ರೇವತಿ ಮತ್ತು ಅಣ್ಣ ರವೀಂದ್ರ ಅವರನ್ನ ಅಗಲಿದ್ದಾರೆ.
Mangalore Hit and Run accident at Uchila, bike rider dies in hospital. The deceased has been identified as Tejas Kulal (28).
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
22-09-26 02:57 pm
HK News Staffer
ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತಕ್ಕೆ ಟ್ರಾಪ್ ಆದ ಬಜ್ಪ...
21-09-26 08:21 pm
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm