ಬ್ರೇಕಿಂಗ್ ನ್ಯೂಸ್
14-06-23 10:24 pm Mangalore Correspondent ಕರಾವಳಿ
ಪುತ್ತೂರು, ಜೂನ್ 14: ಕೃಷಿ ನೀರಾವರಿ ಪಂಪ್ ಸೆಟ್ ಗೆ ಸಲ್ಲಿಸಿದ ಅರ್ಜಿ ತಿರಸ್ಕರಿಸಿದ ವಿಚಾರದಲ್ಲಿ ವಿದ್ಯುತ್ ಗುತ್ತಿಗೆದಾರನೊಬ್ಬ ಬನ್ನೂರು ಮೆಸ್ಕಾಂ ಉಪವಿಭಾಗ ಕಚೇರಿಗೆ ನುಗ್ಗಿ, ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್ ಅವರನ್ನು ಅವಾಚ್ಯವಾಗಿ ನಿಂದಿಸಿ ಕೊಲೆ ಬೆದರಿಕೆ ಹಾಕಿದ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ಸಸಾ ಇಲೆಕ್ಟ್ರಿಕಲ್ಸ್ ಮಾಲೀಕ, ವಿದ್ಯುತ್ ಗುತ್ತಿಗೆದಾರ ಮಹಮ್ಮದ್ ನಿಸಾರ್ ಪ್ರಕರಣದ ಆರೋಪಿಯಾಗಿದ್ದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ (ಎಇಇ) ರಾಮಚಂದ್ರ ದೂರು ನೀಡಿದ್ದಾರೆ.
ಜೂ.14ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಹಮ್ಮದ್ ನಿಸಾರ್ ಮೆಸ್ಕಾಂ ಕಚೇರಿಗೆ ನುಗ್ಗಿದ್ದು ಮುಂಡೂರು ಗ್ರಾಮದ ರಮೇಶ್ ಎಂಬವರ ಕೃಷಿ ನೀರಾವರಿ ಪಂಪ್ ಸೆಟ್ ಗೆ ನೀಡಿದ ಅರ್ಜಿಯನ್ನು ತಿರಸ್ಕಾರ ಮಾಡಿದ್ದೇಕೆ ಎಂದು ಅವಾಚ್ಯವಾಗಿ ನಿಂದಿಸಿದ್ದಾರೆ. ಅಲ್ಲದೆ, ಅರ್ಜಿಯನ್ನು ಮಂಜೂರು ಮಾಡದೇ ಹೋದಲ್ಲಿ ನಿನ್ನನ್ನು ನೋಡಿಕೊಳ್ಳುತ್ತೇನೆ ಎಂದು ಕೊಲೆ ಬೆದರಿಕೆ ಹಾಕಿದ್ದಾರೆ.
ಇಲಾಖೆಯ ನಿಯಮದ ತೊಡಕಿನಿಂದಾಗಿ ಅರ್ಜಿಯನ್ನು ತಿರಸ್ಕಾರ ಮಾಡಿದ್ದೆ ವಿನಾ ದುರುದ್ದೇಶ ಹೊಂದಿಲ್ಲ. ಆದರೆ ಗುತ್ತಿಗೆದಾರ ತನ್ನ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಜೀವ ಬೆದರಿಕೆ ಹಾಕಿದ್ದಾರೆಂದು ದೂರಿನಲ್ಲಿ ರಾಮಚಂದ್ರ ತಿಳಿಸಿದ್ದಾರೆ.
Mangalore Life threat to AEE at Puttur Mescom, case filed against Electric Contractor Mohammad Nisar in Puttur.
01-05-25 01:48 pm
Bangalore Correspondent
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 03:52 am
Mangaluru Staff
Suhas Shetty murder, Mangalore Bandh: ಸುಹಾಸ್...
02-05-25 03:29 am
Mangalore, Kudupu Murder case, MLA Bharath Sh...
01-05-25 09:29 pm
Mangalore Kudupu Murder Case, Update, Police:...
01-05-25 05:38 pm
Ramanath Rai, Kudupu Murder case, SIT: ಧರ್ಮಾಧ...
01-05-25 04:01 pm
01-05-25 10:06 pm
Mangalore Correspondent
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am