ಬ್ರೇಕಿಂಗ್ ನ್ಯೂಸ್
15-06-23 03:55 pm Mangalore Correspondent ಕರಾವಳಿ
ಉಳ್ಳಾಲ, ಜೂ.15: ಕೆಇಆರ್ ಸಿ ಆದೇಶದಂತೆ ಈ ತಿಂಗಳು ವಿದ್ಯುತ್ ದರ ಏರಿಕೆಯಾಗಿದ್ದು ಉಳ್ಳಾಲ ಬೈಲಿನ ಮನೆಯೊಂದಕ್ಕೆ ಬರೋಬ್ಬರಿ 7 ಲಕ್ಷ ವಿದ್ಯುತ್ ಬಿಲ್ ಬಂದಿದ್ದನ್ನ ಕಂಡು ಮನೆ ಮಾಲೀಕ ಶಾಕ್ ಆಗಿದ್ದಾರೆ. ಉಳ್ಳಾಲ ಬೈಲಿನ ಸದಾಶಿವ ಆಚಾರ್ಯ ಅವರ ಮನೆಗೆ ನಿನ್ನೆ ಬಂದ ಬಿಲ್ ರೀಡರ್ ಬರೋಬರಿ 7,71,072 ರೂ. ಬಿಲ್ಲನ್ನ ನೀಡಿ ತೆರಳಿದ್ದಾನೆ.
ಮನೆ ಮಂದಿ 7 ಲಕ್ಷ ಬಿಲ್ ನೋಡಿ ಹೌಹಾರಿದ್ದು ಬಿಲ್ ರೀಡಿಂಗ್ ಮಾಡಿದ ವ್ಯಕ್ತಿಯಲ್ಲಿ ವಿಚಾರಿಸಿದಾಗ ಅದೆಲ್ಲ ನನಗೆ ಗೊತ್ತಿಲ್ಲ. ಮೆಸ್ಕಾಂ ಕಚೇರಿಗೆ ಹೋಗಿ ವಿಚಾರಿಸಿ ಎಂದು ಉಡಾಫೆಯ ಉತ್ತರ ನೀಡಿ ತೆರಳಿದ್ದಾನಂತೆ. ವಿದ್ಯುತ್ ಬಿಲ್ ರಸೀದಿಯಲ್ಲಿ 99,338 ಯೂನಿಟ್ ಖರ್ಚಾಗಿದ್ದು 7,71,072 ರೂಪಾಯಿ ಬಿಲ್ ನಮೂದಿಸಲಾಗಿದೆ. ತಮಗೆ ಈ ಮೊದಲು 3,000 ದಷ್ಟು ಮಾಸಿಕ ವಿದ್ಯುತ್ ಬಿಲ್ ಬರುತ್ತಿತ್ತು. ನಾವು ಪ್ರತಿ ತಿಂಗಳು ಬಿಲ್ಲನ್ನ ಕಟ್ಟುತ್ತೇವೆ. ಈ ತಿಂಗಳು ಬಂದ ಬಿಲ್ಲನ್ನ ನೋಡಿ ಮನೆ ಮಂದಿಯೆಲ್ಲ ಶಾಕ್ ಆದೆವು ಎಂದು ಮನೆ ಮಾಲೀಕ ಸದಾಶಿವ ಆಚಾರ್ಯ ಹೇಳಿದ್ದಾರೆ.



ಈ ಬಗ್ಗೆ ಹೆಡ್ ಲೈನ್ ಕರ್ನಾಟಕ ಪ್ರತಿನಿಧಿ ಉಳ್ಳಾಲ ಉಪವಿಭಾಗ ಮೆಸ್ಕಾಂ ಕಚೇರಿಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ದಯಾನಂದ ಅವರಲ್ಲಿ ವಿಚಾರಿಸಿದಾಗ, ಏಜೆನ್ಸಿಗಳ ಮುಖಾಂತರ ಬಿಲ್ ಕಲೆಕ್ಷನ್ ಮಾಡಲಾಗುತ್ತದೆ. ಬಿಲ್ ರೀಡರ್ ಎಡವಟ್ಟಿನಿಂದ ತಪ್ಪಾಗಿ ವಿದ್ಯುತ್ ಬಿಲ್ ಮುದ್ರಣ ಆಗಿದೆ. ಬಿಲ್ಲಲ್ಲಿ ಲೋಪ ಕಂಡು ಬಂದರೆ ಅದನ್ನ ಗ್ರಾಹಕರಿಗೆ ಕೊಡುವಂತಿಲ್ಲ. ತಕ್ಷಣವೇ ಸದಾಶಿವ ಆಚಾರ್ಯ ಅವರ ಮನೆ ಬಾಗಿಲಿಗೆ ಪರಿಷ್ಕೃತ ಬಿಲ್ ತಲುಪಿಸುವುದಾಗಿ ಹೇಳಿದ್ದು ಇಂದು ಮದ್ಯಾಹ್ನದ ವೇಳೆ ಪರಿಷ್ಕೃತ 2,833 ರೂಪಾಯಿಗಳ ಬಿಲ್ ಆಚಾರ್ಯ ಅವರ ಮನೆ ತಲುಪಿದೆ.
Mangalore MESCOM Meter reading error, house gets 7 lakhs electric bill in Ullal, tenants in shock. Tenants who were getting Rs 3000 as thier bill were shocked to see a bill amount of 7 lakhs.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am