ಬ್ರೇಕಿಂಗ್ ನ್ಯೂಸ್
17-06-23 09:22 pm Mangalore Correspondent ಕರಾವಳಿ
ಉಳ್ಳಾಲ, ಜೂ.17: ಮೆಹಂದಿ ಶಾಸ್ತ್ರದಂದೇ ನಾಪತ್ತೆಯಾಗಿದ್ದ ವರ್ಕಾಡಿ ದೇವಂದಪಡ್ಪುವಿನ ಕಿಶನ್ ನನ್ನು ಕೊಣಾಜೆ ಪೊಲೀಸರು ಬೆಂಗಳೂರಿನಲ್ಲಿ ಪತ್ತೆಹಚ್ಚಿ ಠಾಣೆಗೆ ಕರೆದು ತಂದಿದ್ದು ಮನೆಮಂದಿ ವಶಕ್ಕೆ ಒಪ್ಪಿಸಿದ್ದಾರೆ.
ಕೊಣಾಜೆ ಪೊಲೀಸರು ಬೆಂಗಳೂರಿನ ಲಾಡ್ಜ್ ಒಂದರಲ್ಲಿದ್ದ ಕಿಶನ್ ನನ್ನು ಕರೆತಂದು ಪೋಷಕರ ವಶಕ್ಕೆ ಒಪ್ಪಿಸಿದ್ದಾರೆ. ಗಡಿಭಾಗದ ವರ್ಕಾಡಿ ದೇವಂದಪಡ್ಪು ನಿವಾಸಿ, ಉದ್ಯಮಿ ಐತಪ್ಪ ಶೆಟ್ಟಿ ಅವರ ಮಗ ಕಿಶನ್ ಶೆಟ್ಟಿ ಮೇ 31ರಂದು ಮದುವೆಯ ಮೆಹಂದಿ ಶಾಸ್ತ್ರಕ್ಕೆ ಹಣ್ಣು ತರಲು ತೆರಳಿದ್ದವ ನಾಪತ್ತೆಯಾಗಿದ್ದು ಹಲವು ಊಹಾಪೋಹಗಳನ್ನು ಸೃಷ್ಟಿಸಿತ್ತು. ಕಿಶನ್ ಶೆಟ್ಟಿ ಕುಂಜತ್ತೂರು ಬಳಿಯ ಅನ್ಯಜಾತಿಯ ಯುವತಿಯನ್ನು ಕಾಲೇಜು ಸಹಪಾಠಿಯಾಗಿದ್ದಾಗಲೇ ಪ್ರೀತಿಸಲಾರಂಭಿಸಿದ್ದರೂ ಇತ್ತೀಚೆಗಷ್ಟೇ ಬೇರೊಂದು ಯುವತಿಯ ಜತೆಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದ. ಆ ಬಳಿಕ ಪ್ರೀತಿಸಿದ ಯುವತಿಯನ್ನು ತಿರಸ್ಕರಿಸುತ್ತಾ ಬಂದಿದ್ದ ಎನ್ನಲಾಗಿದ್ದು ಅದರಿಂದ ಕೆರಳಿದ ಯುವತಿ ತನ್ನ ಬಿಟ್ಟು ಬೇರೆ ಯಾರನ್ನೇ ಮದುವೆಯಾದರೂ ತಾನು ಆತ್ಮಹತ್ಯೆ ಮಾಡಿಕೊಳ್ಳಲು ಹಿಂಜರಿಯಲಾರೆ ಅಥವಾ ಮದುವೆ ತಡೆಯುವುದಾಗಿ ಬೆದರಿಕೆ ಒಡ್ಡಿದ್ದಳು ಎನ್ನಲಾಗಿದ್ದು ಹೆದರಿದ ಕಿಶನ್ ಮೆಹಂದಿ ಶಾಸ್ತ್ರದಂದೇ ನಾಪತ್ತೆಯಾಗಿದ್ದ.
ಕಿಶನ್ ನಾಪತ್ತೆಯಾದ ಕೆಲ ದಿನಗಳ ಬಳಿಕ ತನ್ನ ತಂಗಿಯ ಮೊಬೈಲ್ ಗೆ ನಾನು ಬಳ್ಳಾರಿಯಲ್ಲಿದ್ದೇನೆ, ಇನ್ನು ಮುಂದೆ ಎಂದಿಗೂ ಮನೆಗೆ ಬರುವುದಿಲ್ಲ ಎಂದು ಸಂದೇಶ ರವಾನಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿದ್ದ. ಅಂದು ಮಗನ ಜೀವಕ್ಕೆ ಅಪಾಯ ಇಲ್ಲವೆಂದು ಪೋಷಕರು ಸಮಾಧಾನದ ನಿಟ್ಟುಸಿರು ಬಿಟ್ಟಿದ್ದರು.
Mangalore Bride groom Kishan who went missing on the day oh his Mehandi returns back home. Due to the fear of his girlfriend dropping his marriage he went missing says Kishan. Kishan was traced by Mangalore Police in Bangalore.
01-05-25 01:48 pm
Bangalore Correspondent
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
01-05-25 09:29 pm
Mangalore Correspondent
Mangalore Kudupu Murder Case, Update, Police:...
01-05-25 05:38 pm
Ramanath Rai, Kudupu Murder case, SIT: ಧರ್ಮಾಧ...
01-05-25 04:01 pm
Mangalore Kudupu Murder Case, Police Suspende...
01-05-25 12:23 pm
Congress Harish Kumar, Kudupu Murder case, Ma...
30-04-25 11:26 pm
01-05-25 10:06 pm
Mangalore Correspondent
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am