ಬ್ರೇಕಿಂಗ್ ನ್ಯೂಸ್
21-06-23 04:18 pm Mangalore Correspondent ಕರಾವಳಿ
ಉಳ್ಳಾಲ, ಜೂನ್ 21: ಪಾದಚಾರಿ ಮಹಿಳೆ ಬಸ್ ಅಪಘಾತದಿಂದ ಪವಾಡಸದೃಶ ರೀತಿಯಲ್ಲಿ ಪಾರಾದ ಘಟನೆ ತೌಡುಗೋಳಿ ಸಮೀಪದ ನರಿಂಗಾನದಲ್ಲಿ ಇತ್ತೀಚೆಗೆ ನಡೆದಿದ್ದು, ಇದರ ವೀಡಿಯೋ ವೈರಲ್ ಆಗಿದೆ.
ಮಂಗಳೂರು - ಮುಡಿಪು ನಡುವೆ ಚಲಿಸುವ ಗೋಪಾಲಕೃಷ್ಣ ಹೆಸರಿನ ಖಾಸಗಿ ಬಸ್ ಚಾಲಕನ ತ್ಯಾಗರಾಜ್ ಚಾಣಾಕ್ಷತನದಿಂದ ಮಹಿಳೆ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮಹಿಳೆಯೋರ್ವರು ರಸ್ತೆಯಲ್ಲಿ ಬರುವ ವಾಹನಗಳನ್ನು ಗಮನಿಸದೆ ರಸ್ತೆ ದಾಟಿದ್ದಾರೆ. ಈ ವೇಳೆ ಎದುರಿನಿಂದ ಬಸ್ ಬಂದಿದ್ದು ಮಹಿಳೆ ರಸ್ತೆ ದಾಟುವುದನ್ನು ಗಮನಿಸಿದ ಬಸ್ ಚಾಲಕ ಬಸ್ಸನ್ನು ಹಠಾತ್ತನೆ ಎಡಕ್ಕೆ ಸರಿಸಿ ಕೂದಲೆಳೆ ಅಂತರದಲ್ಲಿ ಮಹಿಳೆಯನ್ನು ರಕ್ಷಿಸಿದ್ದಾರೆ.
ಚಾಲಕನ ಸಮಯಪ್ರಜ್ಞೆಯಿಂದಾಗಿ ಮಹಿಳೆ ಬಸ್ಸಿನಡಿಗೆ ಬೀಳುವುದರಿಂದ ಸ್ವಲ್ಪದರಲ್ಲಿ ಪಾರಾಗಿದ್ದಾರೆ. ಬಳಿಕ ಸ್ಥಳೀಯರು ಮಹಿಳೆಯ ಆರೋಗ್ಯ ವಿಚಾರಿಸಿ ಕಳುಹಿಸಿ ಕೊಟ್ಟಿದ್ದಾರೆ. ಇಬ್ಬರು ಮಹಿಳೆಯರು ರಸ್ತೆ ದಾಟುತ್ತಿದ್ದು ಒಬ್ಬರು ಬಸ್ ಬರುವುದನ್ನು ನೋಡಿ ವೇಗವಾಗಿ ದಾಟಿ ಹೋಗಿದ್ದರು. ಹಿಂದಿನಿಂದ ಇನ್ನೊಬ್ಬ ಮಹಿಳೆ ಬಂದಿದ್ದು ಅಷ್ಟರಲ್ಲಿ ಬಸ್ ಬಂದಿತ್ತು.
ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಾಲಕನ ಸಮಯಪ್ರಜ್ಞೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
Mangalore Private bus driver presence of mind saves woman crossing road carelessly at Ullal Naringana which has averted deadly Accident. Video of this major accident has gone viral and huge appreciation has been showered on Gopalkrishana travles Bus Driver Thyagraj.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 03:35 pm
Mangalore Correspondent
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm