ಬ್ರೇಕಿಂಗ್ ನ್ಯೂಸ್
21-06-23 06:58 pm Mangalore Correspondent ಕರಾವಳಿ
ಉಳ್ಳಾಲ, ಜೂ.21: ಯುವಕನೋರ್ವ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ತೊಕ್ಕೊಟ್ಟು ಸಮೀಪದ ಕಾಪಿಕಾಡು, ಸತ್ಯನಾರಾಯಣ ಕಂಪೌಂಡ್ ನಲ್ಲಿ ನಡೆದಿದೆ.
ಕಾಪಿಕಾಡು, ಸತ್ಯನಾರಾಯಣ ಕಂಪೌಂಡ್ ನಿವಾಸಿ ನಿತಿನ್ ಪೂಜಾರಿ(36) ಆತ್ಮಹತ್ಯೆಗೈದ ಯುವಕ. ನಿತಿನ್ ಇಂದು ಮಧ್ಯಾಹ್ನ ಮನೆಯ ಕೋಣೆಯೊಳಗೆ ಸೇರಿದ್ದನೆನ್ನಲಾಗಿದೆ. ನೆರೆಯ ಮನೆಯಲ್ಲಿ ಬೀಡಿ ಕಟ್ಟುತ್ತಿದ್ದ ಆತನ ತಾಯಿ ಬಂದು ಕೋಣೆಯ ಬಾಗಿಲು ಬಡಿದಿದ್ದು ಬಾಗಿಲ ಎಡೆಯಿಂದ ನೋಡಿದಾಗ ಮಗ ಫ್ಯಾನಿಗೆ ನೇಣು ಬಿಗಿದ ವಿಚಾರ ತಿಳಿದಿದೆ.



ಮೃತ ನಿತಿನ್ ಡೆತ್ ನೋಟ್ ಒಂದನ್ನ ಬರೆದಿದ್ದು ಅದರಲ್ಲಿ ನನ್ನ ಸಾವಿಗೆ ಪ್ರವೀಣ್ ಶೆಟ್ಟಿ ಚೆಂಬುಗುಡ್ಡೆ ಎಂಬಾತ ನೇರ ಕಾರಣ. ಇವರಿಂದ ಮಾನಸಿಕವಾಗಿ ಮನನೊಂದು ಆತ್ಮ ಹತ್ಯೆ ಮಾಡಿಕೊಂಡಿರುತ್ತೇನೆ. ಇವರಿಗೆ ಕಠಿಣ ಶಿಕ್ಷೆಯನ್ನ ನೀಡಬೇಕಾಗಿ ವಿನಂತಿ ಎಂದು ಉಲ್ಲೇಖಿಸಿದ್ದಾರೆ.
ಮೃತ ನಿತಿನ್ ಈ ಮೊದಲು ಮಾಂಡೋವಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ಈಗ ಸಿಕ್ಕಿದ ಸಣ್ಣ ಪುಟ್ಟ ಕೆಲಸಕ್ಕೆ ತೆರಳುತ್ತಿದ್ದನಂತೆ. ನಿತಿನ್ ಅಕ್ಕ, ಬಾವ, ಅಮ್ಮನನ್ನ ಅಗಲಿದ್ದಾರೆ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
36 year old commits suicide at Kapikad Thokottu in Mangalore, death note found. The deceased has been identified as Nithin Poojari. A death note alleging Praveen Sheety reason for his death.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 03:35 pm
Mangalore Correspondent
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm