ಬ್ರೇಕಿಂಗ್ ನ್ಯೂಸ್
02-11-20 11:01 am Mangalore Correspondent ಕರಾವಳಿ
ಉಳ್ಳಾಲ, ನವೆಂಬರ್ 02: ನಾವು ಯಾವುದೇ ಭಾಷಾ ವಿರೋಧಿಗಳಲ್ಲ. ಎಲ್ಲ ಭಾಷೆಗಳನ್ನು ಗೌರವಿಸುವವರು. ಆದರೆ ಕನ್ನಡ ಸಂಸ್ಕೃತಿಯನ್ನು ಅಳಿಸುವ ಪ್ರಯತ್ನ ಸಹಿಸಲು ಅಸಾಧ್ಯ ಎಂದು ಮಂಗಳೂರು ಹರಿಕಥಾ ಪರಿಷತ್ ನ ಅಧ್ಯಕ್ಷರಾದ ಕೆ. ಮಹಾಬಲ ಶೆಟ್ಟಿ ಅಭಿಪ್ರಾಯಪಟ್ಟರು. ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ(ರಿ) ವತಿಯಿಂದ ತೊಕ್ಕೊಟ್ಟಿನ ಖಾಸಗಿ ಸಭಾಂಗಣದಲ್ಲಿ ಭಾನುವಾರ ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡ ರಾಜ್ಯೋತ್ಸವದಂತಹ ಉತ್ಸವಗಳನ್ನು ಬಹಳ ಉತ್ಸಾಹದಿಂದ ಆಚರಿಸುವಂತಾಗಬೇಕು. ಕರ್ನಾಟಕದ ಅವಿಭಾಜ್ಯ ಅಂಗ ಕಾಸರಗೋಡು. ಅದು ಪುನಶ್ಚೇತನಗೊಂಡು ನಮ್ಮೊಂದಿಗೆ ಸೇರುವ ಅವಶ್ಯಕತೆ ಇದೆ. ಆಂಗ್ಲ ಭಾಷೆಯನ್ನು ಕನ್ನಡದೊಂದಿಗೆ ಮಿಶ್ರಣಗೊಳಿಸಿ ಸಂಸ್ಕೃತಿ ನಾಶಗೊಳಿಸಲಾಗುತ್ತಿದೆ. ಸಂಬಂಧ ಪಟ್ಟ ಇಲಾಖೆಗಳು ಇದನ್ನು ಸರಿಪಡಿಸಲು ಪ್ರಯತ್ನಿಸಿದರೂ ಆ ಪ್ರಯತ್ನಗಳು ಸಂಪೂರ್ಣಗೊಳ್ಳಲಿಲ್ಲ. ಕನ್ನಡದ ಉದ್ದಾರ, ಸಾಹಿತ್ಯ , ಸಂಸ್ಕೃತಿ ಅನುಷ್ಠಾನಕ್ಕಾಗಿ ದುಡಿಯುವ ಹೊಣೆಗಾರಿಕೆ ಮಂದಿನ ಯುವಪೀಳಿಗೆಯದ್ದು ಎಂದರು.

ನಿವೃತ್ತ ಶಿಕ್ಷಕರಾದ ವಾಸುದೇವರಾವ್ ಕನ್ನಡ ರಾಜ್ಯೋತ್ಸವದ ಸಂದೇಶ ನೀಡಿದರು. ನಿವೃತ್ತ ಮುಖ್ಯ ಶಿಕ್ಷಕರಾದ ರತ್ನಾವತಿ ಜೆ ಬೈಕಾಡಿ, ನಿವೃತ್ತ ಅಂಗನವಾಡಿ ಶಿಕ್ಷಕಿ ಶಶಿಕಲಾ ಗಟ್ಟಿ, ನಿವೃತ್ತ ಪ್ರಾಚಾರ್ಯರಾದ ಲಲಿತಾ ಕೆ ಆಚಾರ್ ಅವರನ್ನು ಸನ್ಮಾನಿಸಲಾಯಿತು.
ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಅಧ್ಯಕ್ಷ ದಿನಕರ್ ಉಳ್ಳಾಲ್, ಉತ್ಸವ ಸಮಿತಿ ಸ್ವಾಗತಾಧ್ಯಕ್ಷ ಮಾಜಿ ಶಾಸಕ ಕೆ ಜಯರಾಮ ಶೆಟ್ಟಿ, ಗೌರವ ಉಪಾಧ್ಯಕ್ಷರಾದ ಸದಾನಂದ ಬಂಗೇರ, ಹೈದರ್ ಪರ್ತಿಪ್ಪಾಡಿ, ಕೋಶಾಧಿಕಾರಿ ಆನಂದ ಕೆ ಅಸೈಗೋಳಿ, ದ.ಕ. ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ, ಕೆ.ಎಂ.ಕೆ ಮಂಜನಾಡಿ, ಅಬ್ದುಲ್ ಅಜೀಜ್ ಹಕ್ ಮೊದಲಾದವರು ಇದ್ದರು.
Need to take efforts to save Kannada culture and language stated Harikata Parishath President Mahabala Shetty on the occasion of kannada rajyotsava 2020 function held at Ullal.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am