ಬ್ರೇಕಿಂಗ್ ನ್ಯೂಸ್
23-06-23 09:30 pm Mangalore Correspondent ಕರಾವಳಿ
ಮಂಗಳೂರು, ಜೂನ್ 23: ನಾಗರ ಹಾವಿನ ಹೊಟ್ಟೆಯೊಳಗೆ ಸೇರಿದ್ದ ಪ್ಲಾಸ್ಟಿಕ್ ಡಬ್ಬ ಒಂದನ್ನು ಮಂಗಳೂರಿನ ಪಶು ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಯಶಸ್ವಿಯಾಗಿ ಹೊರ ತೆಗೆದಿದ್ದಾರೆ.
ಬಂಟ್ವಾಳದ ವಗ್ಗದ ಸಾಲುಮರ ತಿಮ್ಮಕ್ಕ ಉದ್ಯಾನವನದ ಸಮೀಪದಲ್ಲಿ ಬಿಲವೊಂದರಲ್ಲಿ ಸಿಲುಕಿದ್ದ ನಾಗರಹಾವಿನ ಬಗ್ಗೆ ಸ್ಥಳೀಯ ಗ್ರಾಪಂ ಉಪಾಧ್ಯಕ್ಷೆ ವಸಂತಿ ಅವರು ಹಾವು ಹಿಡಿಯುವ ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಿದ್ದರು. ಮೂರು ದಿನಗಳಿಂದ ಅದನ್ನು ಗಮನಿಸುತ್ತಿದ್ದ ವಸಂತಿ ಮನೆಯವರು ಕೊನೆಗೆ ಅದರ ರಕ್ಷಣೆಗೆ ಮುಂದಾಗಿದ್ದರು.
ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಹಾವನ್ನು ಬಿಲದಿಂದ ಹೊರ ತೆಗೆದು ರಕ್ಷಿಸಿದ್ದಾರೆ. ಈ ವೇಳೆ ಅದರ ತಲೆಯ ಭಾಗದಲ್ಲಿ ಗಾಯಗಳಾಗಿದ್ದರಿಂದ ಚಿಕಿತ್ಸೆಗಾಗಿ ಮಂಗಳೂರಿನ ಪಶುವೈದ್ಯ ಡಾ.ಯಶಸ್ವಿ ನಾರಾವಿ ಅವರಲ್ಲಿಗೆ ತಂದಿದ್ದರು.
ಗಾಯಕ್ಕೆ ಚಿಕಿತ್ಸೆ ಒದಗಿಸಿದ ವೈದ್ಯರು ಹಾವಿನ ಹೊಟ್ಟೆ ಉಬ್ಬೇರಿದ್ದನ್ನು ಗಮನಿಸಿ ಎಕ್ಸ್ ರೇ ಮಾಡಿದ್ದರು. ಆಗ ಹಾವಿನ ಉದರದೊಳಗೆ ಪ್ಲಾಸ್ಟಿಕ್ ವಸ್ತು ಇರುವುದು ಗಮನಕ್ಕೆ ಬಂದಿತ್ತು. ಹಾಗಾಗಿ ಹಾವಿಗೆ ಶಸ್ತ್ರಚಿಕಿತ್ಸೆ ನಡೆಸಿ ಉದರದಲ್ಲಿದ್ದ ಸುಣ್ಣದ ಪ್ಲಾಸ್ಟಿಕ್ ಡಬ್ಬವನ್ನು ಹೊರತೆಗೆದಿದ್ದಾರೆ.
ವೈದ್ಯರ ಪ್ರಕಾರ 'ಸುಮಾರು ಐದು ಅಡಿ ಉದ್ದದ ಹೆಣ್ಣು ನಾಗರಹಾವು ಇದಾಗಿತ್ತು. 10 ವರ್ಷ ಪ್ರಾಯ ಆಗಿರಬಹುದು. ಹಾವು ಮೊಟ್ಟೆ ನುಂಗುವ ವೇಳೆ ಸುಣ್ಣದ ಡಬ್ಬವನ್ನು ಒಟ್ಟಿಗೆ ನುಂಗಿದ್ದಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಶಸ್ತ್ರಚಿಕಿತ್ಸೆಯ ಬಳಿಕ 15 ದಿನಗಳ ಕಾಲ ಶುಶ್ರೂಷೆ ಒದಗಿಸಿ ಯಾವುದೇ ತೊಂದರೆ ಇಲ್ಲವೆಂದು ಕಂಡ ಬಳಿಕ ಸ್ನೇಕ್ ಕಿರಣ್ ಅರಣ್ಯ ಇಲಾಖೆಯ ಮಾರ್ಗದರ್ಶನದಂತೆ ಮತ್ತೆ ಹಾವನ್ನು ರಕ್ಷಿತಾರಣ್ಯಕ್ಕೆ ಬಿಟ್ಟಿದ್ದಾರೆ.
Plastic Box Swallowed by snake Naja Naja Removed through Surgery by 4 Vets doctors in Mangalore.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am