ಬ್ರೇಕಿಂಗ್ ನ್ಯೂಸ್
30-06-23 03:31 pm Mangalore Correspondent ಕರಾವಳಿ
ಮಂಗಳೂರು, ಜೂನ್ 30: ಕಾಂಗ್ರೆಸ್ ಸರ್ಕಾರ ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆಗಳನ್ನು ಹಿಂಪಡೆದಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಕರಾವಳಿ ಭಾಗದ ವಿವಿಧ ಮಠಗಳ ಸ್ವಾಮೀಜಿಗಳು ಎಚ್ಚರಿಕೆ ನೀಡಿದ್ದಾರೆ.
ನಗರದ ಬಾಳಂ ಭಟ್ ಸಭಾಂಗಣದಲ್ಲಿ ವಿವಿಧ ಮಠಗಳ ಸ್ವಾಮೀಜಿಗಳು ಆರೆಸ್ಸೆಸ್ ಮತ್ತು ವಿಶ್ವ ಹಿಂದು ಪರಿಷತ್ತಿನ ಪ್ರಮುಖರ ಜೊತೆ ಕುಳಿತು ಸಮಾವೇಶ ನಡೆಸಿದ್ದಾರೆ. ಪ್ರಸ್ತಾವಿತ ಮಸೂದೆಗಳನ್ನು ಹಿಂಪಡೆದಲ್ಲಿ ಏನು ಮಾಡಬೇಕು ಅನ್ನುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಭೆಯ ಬಳಿಕ ಸ್ವಾಮೀಜಿಗಳು ಸುದ್ದಿಗೋಷ್ಟಿ ಕರೆದು ಮಾಹಿತಿ ಹಂಚಿಕೊಂಡಿದ್ದಾರೆ.
ಒಡಿಯೂರು ಮಠದ ಗುರುದೇವಾನಂದ ಸ್ವಾಮೀಜಿ ಮಾತನಾಡಿ, ನಾವು ಗೋಹತ್ಯೆ ಮತ್ತು ಮತಾಂತರ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯಬಾರದು ಎಂಬ ಬಗ್ಗೆ ನಿರ್ಣಯ ಮಾಡಿದ್ದೇವೆ. ಈ ಕಾಯ್ದೆಯನ್ನು ವಾಪಸ್ ಪಡೆದಲ್ಲಿ ಸಮಾಜದಲ್ಲಿ ಅಶಾಂತಿ ಮೂಡಬಹುದು. 2020ರ ಗೋಹತ್ಯೆ ನಿಷೇಧ ಕಾಯ್ದೆಯ ನಿಯಮಾವಳಿಗಳಲ್ಲಿ ಯಾವುದೇ ಬದಲಾವಣೆ ಮಾಡಬಾರದು. ಈ ರೀತಿ ಮಾಡಿದರೆ, ಹಿಂದು ಸಮಾಜದ ವಿರುದ್ಧ ನಿರ್ಣಯ ಕೈಗೊಂಡಂತೆ. ನಮ್ಮ ಮನವಿ ಒಪ್ಪದೆ ಕಾಯ್ದೆ ವಾಪಸ್ ಪಡೆದರೆ ಸಾಧು ಸಂತರು ಸೇರಿ ಉಪವಾಸ ಸತ್ಯಾಗ್ರಹ ಮಾಡುವುದಕ್ಕೂ ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ.

ಮಸೂದೆ ವಿಚಾರದಲ್ಲಿ ನಾವು ರಾಜ್ಯದ ಮುಖ್ಯಮಂತ್ರಿ, ಗೃಹ ಸಚಿವರು, ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಕೊಡಲಿದ್ದೇವೆ. ಅಲ್ಲದೆ, ಕೇಂದ್ರ ಗೃಹ ಸಚಿವರು, ಪ್ರಧಾನಿ ಅವರನ್ನೂ ಭೇಟಿ ಮಾಡುತ್ತೇವೆ. ಸದ್ಯಕ್ಕೆ ಸೆಪ್ಟಂಬರ್ ವರೆಗೆ ಚಾತುರ್ಮಾಸ್ಯ ವೃತ ಇರುತ್ತದೆ. ಆನಂತರ, ಈ ಕೆಲಸಕ್ಕೆ ಮುಂದಾಗುತ್ತೇವೆ ಎಂದು ಗುರುಪುರ ಮಠದ ವಜ್ರದೇಹಿ ಸ್ವಾಮೀಜಿ ಹೇಳಿದರು. ಉತ್ತರ ಕರ್ನಾಟಕದ ಲಿಂಗಾಯತ, ಒಕ್ಕಲಿಗರ ಸ್ವಾಮೀಜಿಗಳ ಬೆಂಬಲ ಪಡೆಯುತ್ತೀರಾ ಎಂಬ ಪ್ರಶ್ನೆಗೆ, ಈಗ ಕರಾವಳಿ ಭಾಗದ ಸ್ವಾಮೀಜಿಗಳು ಸೇರಿದ್ದೇವೆ. ಮುಂದಿನ ದಿನಗಳಲ್ಲಿ ಆ ಕುರಿತು ಚಿಂತನೆ ನಡೆಸುತ್ತೇವೆ ಎಂದರು.
ಮಂಗಳೂರಿನ ಪೊಲೀಸ್ ಇಲಾಖೆಯಲ್ಲಿ ಆಂಟಿ ಕಮ್ಯುನಲ್ ವಿಂಗ್ ರಚಿಸಿರುವ ಬಗ್ಗೆ ಆಕ್ಷೇಪಿಸಿದ ಗುರುಪುರ ಸ್ವಾಮೀಜಿ, ಈ ವಿಂಗ್ ನಿಂದ ಲವ್ ಜಿಹಾದ್ ವಿರುದ್ಧ ಕ್ರಮ ಆಗಬಹುದು ಎಂದುಕೊಂಡಿದ್ದೆವು. ಆದರೆ, ಈಗ ಲವ್ ಜಿಹಾದ್ ಪತ್ತೆ ಮಾಡಿದವರ ವಿರುದ್ಧವೇ ಕೇಸು ದಾಖಲಿಸುತ್ತಿದ್ದಾರೆ. ಹಿಂದು ಸಂಘಟನೆಗಳ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ, ಗಡೀಪಾರು ಮಾಡುವ ಕೆಲಸ ಆಗುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಹೀಗಾದಲ್ಲಿ ನಾವು ಸುಮ್ಮನಿರುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದರು. ಸಭೆಯಲ್ಲಿ ಮಾಣಿಲ ಮಠದ ಸ್ವಾಮೀಜಿ, ಕೇಮಾರು ಸ್ವಾಮೀಜಿ ಸೇರಿ 12ಕ್ಕೂ ಹೆಚ್ಚು ಕಡೆಯ ಸ್ವಾಮೀಜಿಗಳು ಇದ್ದರು. ಆರೆಸ್ಸೆಸ್ ಪ್ರಮುಖ ಪ್ರಕಾಶ್ ಪಿ.ಎಸ್, ವಿಹಿಂಪ ಮುಖಂಡ ಎಂ.ಬಿ.ಪುರಾಣಿಕ್, ಶರಣ್ ಪಂಪ್ವೆಲ್ ಸೇರಿ ಪ್ರಮುಖರು ಉಪಸ್ಥಿತರಿದ್ದರು.
Anti conversion law, anti-cow slaughter law bill should not be cancelled by Congress warns various Hindu Swamiji in Mangalore.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 09:03 pm
Mangalore Correspondent
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm