ಬ್ರೇಕಿಂಗ್ ನ್ಯೂಸ್
06-07-23 10:28 am Mangalore Correspondent ಕರಾವಳಿ
ಉಳ್ಳಾಲ, ಜು.6: ಕಳೆದ ಮೂರು ದಿನಗಳಿಂದ ನಿರಂತರ ಸುರಿಯುತ್ತಿರುವ ಗಾಳಿ, ಮಳೆಗೆ ತಲಪಾಡಿ ದೇವಿನಗರದ ಶಾರದಾ ವಿದ್ಯಾಲಯದ ಆರು ಅಂತಸ್ತಿನ ಕಟ್ಟಡದ ಮೇಲೆ ಅಳವಡಿಸಲಾಗಿದ್ದ ಭಾರೀ ಗಾತ್ರದ ಶೀಟ್ ಮೇಲ್ಛಾವಣಿ ಹಾರಿ ಕೆಳಗೆ ಬಿದ್ದಿದ್ದು ಶಾಲೆಗೆ ರಜೆ ಇದ್ದ ಕಾರಣ ಸಂಭವನೀಯ ಅನಾಹುತ ತಪ್ಪಿದೆ.
ಬುಧವಾರ ಬೆಳಗ್ಗೆ 9 ಗಂಟೆ ವೇಳೆಗೆ ಘಟನೆ ನಡೆದಿದೆ. ದೇವಿನಗರದ ಶಾರದಾ ವಿದ್ಯಾಲಯದ ಕ್ಯಾಂಪಸ್ ಒಳಗಿನ ಆರು ಅಂತಸ್ತಿನ ಶಾಲಾ ಕಟ್ಟಡದ ಮೇಲೆ ಇತ್ತೀಚೆಗೆ ಅಳವಡಿಸಲಾಗಿದ್ದ ಭಾರೀ ಗಾತ್ರದ ಶೀಟ್ ಛಾವಣಿ ಉರುಳಿ ಕೆಳಗೆ ಬಿದ್ದಿದೆ. ಶೀಟ್ ಅಳವಡಿಸಲು ಹಾಕಲಾಗಿದ್ದ ಭಾರೀ ಗಾತ್ರದ ಕಬ್ಬಿಣದ ಸಲಾಕೆಗಳು ಮುರಿದು ಕೆಳಗೆ ಬಿದ್ದಿದ್ದು ಅನೇಕ ವಾಹನಗಳು ಜಖಂಗೊಂಡಿವೆ.




ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಿಂದ ಜಿಲ್ಲಾಡಳಿತವು ಶಾಲಾ, ಕಾಲೇಜುಗಳಿಗೆ ರಜೆ ನೀಡಿದ್ದರಿಂದ ನಿನ್ನೆ ವಿದ್ಯಾರ್ಥಿಗಳು ಶಾಲೆಗೆ ಬಂದಿರಲಿಲ್ಲ. ಹಾಗಾಗಿ ಸಂಭವನೀಯ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಶಾಲಾಡಳಿತವು ಕ್ರೇನ್ ಮುಖೇನ ಧರೆಗುರುಳಿರುವ ಶೀಟ್, ಕಬ್ಬಿಣದ ಸಲಾಕೆಗಳನ್ನು ತರಾತುರಿಯಲ್ಲಿ ತೆರವುಗೊಳಿಸುವ ಕಾರ್ಯ ನಡೆಸುತ್ತಿದೆ.
ಧರ್ಮ, ಸಂಸ್ಕೃತಿಯ ಶಿಕ್ಷಣದ ನೆಪದಲ್ಲಿ ಎಲ್.ಕೆ.ಜಿ ಮಕ್ಕಳಿಂದಲೇ ಲಕ್ಷಗಟ್ಟಲೆ ಶುಲ್ಕ ಪೀಕಿಸುತ್ತಿರುವ ಶಾರದಾ ವಿದ್ಯಾಲಯದ ಇಂತಹ ಬೇಜವ್ದಾರಿತನಕ್ಕೆ ವಿದ್ಯಾರ್ಥಿಗಳ ಪೋಷಕರೇ ಗರಂ ಆಗಿದ್ದಾರೆ. ಜಿಲ್ಲಾಡಳಿತವು ಶಾಲಾಡಳಿತದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
Heavy rain in Mangalore, Massive Roofing sheet collpases from 6th floor at Talapady Sharada Vidyalaya school. As the schools and colleges have been declared holiday no casualties have been reported.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:08 am
HK News Staffer
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm