ಬ್ರೇಕಿಂಗ್ ನ್ಯೂಸ್
06-07-23 12:43 pm Udupi Correspondent ಕರಾವಳಿ
ಉಡುಪಿ, ಜುಲೈ 6: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹಲವೆಡೆ ಪ್ರವಾಹ ಉಂಟಾಗಿದೆ. ನಗರದಲ್ಲಿ ಕಲ್ಸಂಕ, ಬೈಲಕೆರೆ, ಬನ್ನಂಜೆ ಗರಡಿ ರಸ್ತೆ, ಕುಂಜಿಬೆಟ್ಟು ಭಾಗದಲ್ಲಿ ನೆರೆ ಸೃಷ್ಟಿಯಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಅಪಾಯದಲ್ಲಿ ಸಿಲುಕಿದ್ದ 15ಕ್ಕೂ ಅಧಿಕ ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ.
ಕೃಷ್ಣಮಠ ಬಳಿ ಬೈಲಕೆರೆ ಪ್ರದೇಶದಲ್ಲಿ ಏಳೆಂಟು ಮನೆಗಳ ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿಕೊಡಲಾಗಿದೆ. ಬನ್ನಂಜೆ-ಗರಡಿ ರಸ್ತೆ ಪರಿಸರದಲ್ಲಿ ಐವತ್ತಕ್ಕೂ ಅಧಿಕ ಮನೆಗಳು ಜಲಾವೃತಗೊಂಡಿದೆ. ಎಂಟತ್ತು ಮನೆಗಳಿಗೆ ನೀರು ನುಗ್ಗಿದ್ದು, ಜನರು ಪ್ರವಾಹ ಭೀತಿಯಲ್ಲಿದ್ದಾರೆ. ಬುಧವಾರ ತಡರಾತ್ರಿ, ಗುರುವಾರ ಮುಂಜಾನೆ ಧಾರಾಕಾರ ಮಳೆ ಸುರಿದಿದ್ದು, ಇಂದ್ರಾಣಿ ನದಿ ಉಕ್ಕಿ ಹರಿಯುತ್ತಿದೆ. ಹಲವೆಡೆ ಮಳೆನೀರಿನಿಂದಾಗಿ ಕಾಲುವೆ ಬ್ಲಾಕ್ ಆಗಿ ಕೃತಕ ನೆರೆ ಸೃಷ್ಟಿಯಾಗಿದೆ. ಕುಕ್ಕಿಕಟ್ಟೆ, ಕೆಮ್ತೂರು ಗ್ರಾಮಾಂತರ ಭಾಗದಲ್ಲಿ ಮಳೆ ನೀರಿನಿಂದ ಕೆಲವು ಮನೆಗಳು ಜಲಾವೃತಗೊಂಡಿದೆ. ಉಡುಪಿ ನಗರದ ತಗ್ಗು ಪ್ರದೇಶ, ಕೃಷಿ ಭೂಮಿ ಸಂಪೂರ್ಣ ಜಲಾವೃತಗೊಂಡಿದೆ.





ನಗರಸಭೆ ಅಧಿಕಾರಿಗಳ ತಂಡ, ಪೌರಕಾರ್ಮಿಕರ ತುರ್ತು ಕಾರ್ಯಚರಣೆ ತಂಡ ನಗರದ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಅಗ್ನಿ ಶಾಮಕ ದಳ ತಂಡ ಬೋಟುಗಳು ಸನ್ನದ್ಧವಾಗಿದೆ ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.
ಉಡುಪಿಯ ಕಿದಿಯೂರಿನ ಬಂಕೇರಕಟ್ಟ ಸೇತುವೆಯ ಮೇಲಿಂದ ನೀರು ಹರಿಯುತ್ತಿದೆ. ಕಿದಿಯೂರು ಮಾರ್ಗವಾಗಿ ಉಡುಪಿ, ಮಲ್ಪೆ ಸಂಪರ್ಕಿಸುವ ಸೇತುವೆ ಇದಾಗಿದ್ದು, ನದಿಯಲ್ಲಿನ ಪ್ಲಾಸ್ಟಿಕ್ ಸೇತುವೆ ಭಾಗದಲ್ಲಿ ರಾಶಿಯಾಗಿದೆ.
Heavy rains in Udupi, many areas drowned, 15 families shifited to different area by Fire Service staffs. Many houses are on the verge of submerging in low lying areas. At Kodankoor in the city, many families are inside the houses that are surrounded by rain water. Fire service personnel
02-04-26 03:56 pm
HK News Staffer
ಮಗನ ರೋಗ ಗುಣಪಡಿಸಲು ಸ್ವಂತ ಮಗಳನ್ನೇ ಕೊಂದ ತಾಯಿ! ಮ...
02-04-26 02:46 pm
ಕೈಚೀಲ ಖರೀದಿಯಲ್ಲಿ ಅವ್ಯವಹಾರ; ಐಎಎಸ್ ಅಧಿಕಾರಿ ರೋಹಿ...
01-04-26 10:51 pm
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm