ಬ್ರೇಕಿಂಗ್ ನ್ಯೂಸ್
06-07-23 04:53 pm Mangalore Correspondent ಕರಾವಳಿ
ಮಂಗಳೂರು , ಜುಲೈ 6: ಕರಾವಳಿಯಲ್ಲಿ ಭಾರೀ ಗಾಳಿ, ಮಳೆ ನಾಲ್ಕನೇ ದಿನವೂ ಮುಂದುವರೆದಿದೆ. ಮೂಡುಬಿದ್ರೆ ಬಳಿಯ ನೆಲ್ಲಿಕಾರಿನ ಮಾಂಟ್ರಾಡಿ ಎಂಬಲ್ಲಿ ವ್ಯಕ್ತಿಯೊಬ್ಬರು ಗುರುವಾರ ಬೆಳಗ್ಗೆ ಕೆರೆಗೆ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ನೆಲ್ಲಿಕಾರು ಗ್ರಾಮ ಪಂಚಾಯಿತಿ ಕಚೇರಿ ಬಳಿಯ ನಿವಾಸಿ ನಿರಂಜನ್ (42) ಮೃತಪಟ್ಡವರು. ವಿಕಲ ಚೇತನರಾಗಿದ್ದ ಅವರು ಅವಿವಾಹಿತರಾಗಿದ್ದರು. ನಿನ್ನೆ ಸಂಜೆಯಿಂದ ಕಾಣೆಯಾಗಿದ್ದ ಬಗ್ಗೆ ಮನೆಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಇಂದು ಬೆಳಗ್ಗೆ ತೋಟದ ಕೆರೆಗೆ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಿರಂಜನ್ ತಂದೆ, ತಾಯಿ ತೀರಿಕೊಂಡಿದ್ದು ಸೋದರರು ಕೊರೊನಾ ಸಂದರ್ಭದಲ್ಲಿ ಸಾವಿಗೀಡಾಗಿದ್ದರು. ಆನಂತರ, ಭಾವನ ಅಂಗಡಿಯಲ್ಲಿ ಕೆಲಸ ಮಾಡುತ್ತ ಅವರ ಮನೆಯಲ್ಲೇ ವಾಸವಿದ್ದರು.

ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಬೈಲಾರೆ ಎಂಬಲ್ಲಿ ಭಾರೀ ಮಳೆಯ ಕಾರಣ ಮೂರು ಮನೆಗಳು ಜಲಾವೃತಗೊಂಡಿದೆ. ಕಲ್ಯಾಣಿ ಪೂಜಾರ್ತಿ, ಲಲಿತಾ ಪೂಜಾರ್ತಿ ಹಾಗೂ ಉದಯ ಎಂಬವರ ಮನೆಗಳಿಗೆ ನೀರು ನುಗ್ಗಿದ್ದು ಅಪಾರ ಹಾನಿ ಸಂಭವಿಸಿದೆ.
ಬಂಟ್ವಾಳದ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ಮನೆ ಮುಂಭಾಗ ನಿಲ್ಲಿಸಿದ್ದ ಓಮ್ನಿ ಕಾರಿನ ಮೇಲೆ ಮರ ಬಿದ್ದು ವಾಹನ ಸಂಪೂರ್ಣ ಜಖಂಗೊಂಡಿದೆ. ಕೊಡಾಜೆ ನಿವಾಸಿ ಇಸ್ಮಾಯಿಲ್ ಎಂಬವರು ತನ್ನ ಓಮ್ನಿ ಕಾರನ್ನು ಮನೆಯ ಸಮೀಪ ನಿಲ್ಲಿಸಿದ್ದರು. ಮಳೆ ಗಾಳಿಗೆ ಮಾವಿನ ಮರ ಓಮ್ನಿ ಕಾರಿನ ಮೇಲೆ ಉರುಳಿ ಬಿದ್ದಿದೆ. ಇದರಿಂದ ಕಾರು ಸಂಪೂರ್ಣ ಜಖಂಗೊಂಡಿದೆ.
Moodbidri heavy rains, Man dies after falling into lake. Three houses filled with rain water.
27-09-26 03:21 pm
HK News Desk
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
30-09-26 10:49 am
HK News Staffer
ಡ್ರಗ್ಸ್ ಕಳ್ಳಸಾಗಣೆ ಆರೋಪ, ಸೌದಿಯಲ್ಲಿ ಕೇರಳದ ಯುವಕನ...
29-09-26 08:11 pm
ಸೌಜನ್ಯಾ ಮರು ತನಿಖೆಯೂ, ತಮಿಳುನಾಡಿನಲ್ಲಿ ಗ್ರಾನೈಟ್...
26-09-26 07:01 pm
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
29-09-26 01:25 pm
HK News Staffer
ಬಿ.ಸಿ.ರೋಡ್ ಸಭೆಯಲ್ಲಿ ಕರಾವಳಿ ಶಾಸಕರು, ಸಂಸದರ ಬಗ್ಗ...
29-09-26 11:41 am
ಕಂಬಳ ಲೋಕದ ದಿಗ್ಗಜ ‘ನಂದಳಿಕೆ ಪಾಂಡು’ ಇನ್ನಿಲ್ಲ: 20...
29-09-26 10:45 am
ದೇಶದಲ್ಲಿ 13 ಕೋಟಿ ಮತ ಡಿಲೀಟ್ ಆಗಿದ್ದು ಹೇಗೆ ? ಆಳು...
28-09-26 11:08 pm
ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಕರಾವಳಿಗೇನು ಕೊಟ್ಟಿ...
28-09-26 09:33 pm
30-09-26 10:33 am
HK News Staffer
Udupi Body found, Accused: ಕೊಲೆ ಯತ್ನ ಪ್ರಕರಣದ...
30-09-26 10:04 am
ಮಾಂಸದ ಅಂಗಡಿಯಲ್ಲೇ ಡ್ರಗ್ಸ್ ದಂಧೆ ; ಇಬ್ಬರು ಯುವಕರು...
30-09-26 10:03 am
ಸ್ವರ್ಣಾ ನದಿಯಲ್ಲಿ ದುರಂತ ; ಹಿರ್ಗಾನ ಬಳಿ ಈಜಲು ತೆರ...
29-09-26 09:26 pm
Mangalore Accident: ನ್ಯಾಯಾಧೀಶರ ಕಾರಿಗೆ ಗೂಡ್ಸ್...
29-09-26 08:14 pm