ಬ್ರೇಕಿಂಗ್ ನ್ಯೂಸ್
07-07-23 08:44 pm Mangalore Correspondent ಕರಾವಳಿ
ಮಂಗಳೂರು, ಜುಲೈ 7: ಅನುದಾನಿತ ಶಾಲೆಯ ನಿವೃತ್ತ ಶಿಕ್ಷಕಿಯೊಬ್ಬರಿಗೆ ಪಿಂಚಣಿ ಹಣ ಪಡೆಯಲು ಅಗತ್ಯ ದಾಖಲೆ ನೀಡಬೇಕಿದ್ದರೆ ಐದು ಲಕ್ಷ ರೂ. ನೀಡಬೇಕೆಂದು ಸತಾಯಿಸಿ ಲಂಚದ ಹಣಕ್ಕೆ ಕೈಯೊಡ್ಡಿದ ಶಾಲಾ ಸಂಚಾಲಕಿಯನ್ನು ರೆಡ್ ಹ್ಯಾಂಡ್ ಆಗಿಯೇ ಮಂಗಳೂರು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಹೊರವಲಯದ ಬಜ್ಪೆ ಸುಂಕದಕಟ್ಟೆ ನಿರಂಜನ ಸ್ವಾಮಿ ಸರ್ಕಾರಿ ಅನುದಾನಿತ ಶಾಲೆಯ ಸಂಚಾಲಕಿ ಜ್ಯೋತಿ ಎನ್. ಪೂಜಾರಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದವರು. ಸುಂಕದಕಟ್ಟೆಯ ಶ್ರೀ ನಿರಂಜನ ಸ್ವಾಮಿ ಶಿಕ್ಷಣ ಪ್ರತಿಷ್ಠಾನಕ್ಕೆ ಸೇರಿದ ಶ್ರೀ ನಿರಂಜನ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಹಾಗು ಮುಖ್ಯ ಶಿಕ್ಷಕಿಯಾಗಿ 42 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶೋಭಾರಾಣಿ, ಇದೇ ಜುಲೈ 31 ರಂದು ವಯೋನಿವೃತ್ತಿ ಹೊಂದಲಿದ್ದು, ನಿವೃತ್ತಿ ಕಾಲದ ಪಿಂಚಣಿ ಉಪದಾನ ಪತ್ರಗಳಿಗೆ ಸಹಿ ಹಾಕಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸುವಂತೆ ಕಳೆದ ಮೇ 25ರಂದು ಶಾಲೆಯ ಮ್ಯಾನೇಜ್ಮೆಂಟ್ ಸಂಚಾಲಕಿ ಜ್ಯೋತಿ ಎನ್. ಪೂಜಾರಿ ಅವರಲ್ಲಿ ವಿನಂತಿಸಿದ್ದರು.
ಆದರೆ, ಶಾಲಾ ಸಂಚಾಲಕಿ ಪಿಂಚಣಿ ಉಪದಾನ ಪತ್ರಗಳನ್ನು ಸಹಿ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸದೇ, ಸ್ವೀಕೃತಿ ಪತ್ರವನ್ನು ನೀಡದೇ ಫಿರ್ಯಾದಿದಾರರಿಗೆ ಸತಾಯಿಸಿದ್ದರು. ಪಿಂಚಣಿ ಪತ್ರಗಳಿಗೆ ಸಹಿ ಹಾಕಿ ಕಳುಹಿಸಬೇಕಿದ್ದರೆ ರೂ. 20 ಲಕ್ಷ ಹಣ ಕೊಡಬೇಕೆಂದು ಬೇಡಿಕೆ ಇಟ್ಟಿದ್ದರು. ಶಿಕ್ಷಕಿ ಶೋಭಾರಾಣಿ ಮತ್ತೊಮ್ಮೆ ಸಂಚಾಲಕಿ ಜ್ಯೋತಿ ಅವರನ್ನು ಭೇಟಿ ಮಾಡಿ ಕೋರಿಕೆ ಸಲ್ಲಿಸಿದರೂ, ಪಿಂಚಣಿ ದಾಖಲೆ ಪತ್ರಗಳಿಗೆ ಸಹಿ ಮಾಡದೆ ರೂ.5 ಲಕ್ಷ ಕೊಡಲೇಬೇಕು ಎಂದು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಬೇಸತ್ತ ಶಿಕ್ಷಕಿ ಮಂಗಳೂರಿನ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅಧಿಕಾರಿಗಳ ಸೂಚನೆಯಂತೆ ಇಂದು ಶಿಕ್ಷಕಿ ಶೋಭಾರಾಣಿ, 5 ಲಕ್ಷ ಮೊತ್ತವನ್ನು ಶಾಲಾ ಸಂಚಾಲಕಿಗೆ ನೀಡುತ್ತಿರುವಾಗಲೇ ಲೋಕಾಯುಕ್ತ ದಾಳಿ ನಡೆಸಿದೆ. ಆರೋಪಿ ಜ್ಯೋತಿ ಪೂಜಾರಿ ಅವರನ್ನು ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಲೋಕಾಯುಕ್ತ ಎಸ್ಪಿ ಸಿಎ ಸೈಮನ್ ನೇತೃತ್ವದಲ್ಲಿ ಡಿವೈಎಸ್ಪಿ ಕಲಾವತಿ, ಚೆಲುವರಾಜು, ಇನ್ಸ್ ಪೆಕ್ಟರ್ ವಿನಾಯಕ ಬಿಲ್ಲವ ಆರೋಪಿಯನ್ನು ಟ್ರ್ಯಾಪ್ ಮಾಡಿ ಬಂಧಿಸಿದ್ದಾರೆ.
Mangalore Government school coordinator arrested by Lokayukta over bribe of 5 lakhs to deliver pension documents. The arrested has been identified as Jyothi Poojari who works at Bajpe Sukadakatte school.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm