ಬ್ರೇಕಿಂಗ್ ನ್ಯೂಸ್
03-11-20 02:19 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 03: ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನಕ್ಕೆ ಹೋದ ಅನುಭವ ಆಗುತ್ತದೆ ಎಂದು ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದ ಆರೆಸ್ಸೆಸ್ ಮುಖಂಡ ಪ್ರಭಾಕರ ಭಟ್, ತಮ್ಮ ಹೇಳಿಕೆಗೆ ಬದ್ಧನಿದ್ದೇನೆ ಎಂದು ಪ್ರತಿಕ್ರಿಯಿಸಿದ್ದಾರೆ.
ನನ್ನ ಹೇಳಿಕೆ ನೂರಕ್ಕೆ ನೂರು ಸತ್ಯ. ಎಲ್ಲರೂ ಬಾಯಿ ಮಾತಿನಲ್ಲಿ ಹೇಳುವುದನ್ನು ನಾನು ಭಾಷಣದಲ್ಲಿ ಹೇಳಿದ್ದೇನೆ. ಹಿಂದು ಸಮಾಜವನ್ನು ಎಚ್ಚರಿಸಲು ಈ ಹೇಳಿಕೆ ನೀಡಿದ್ದೇನೆಯೇ ಹೊರತು ಬೇರೇನೂ ಉದ್ದೇಶವಿಲ್ಲ. ಉಳ್ಳಾಲ ಭಾಗದಲ್ಲಿ ಕಳೆದ 20 ವರ್ಷಗಳಿಂದ ಒಂದೇ ವರ್ಗದವರು ಶಾಸಕರಾಗಿ ಬರುತ್ತಿದ್ದಾರೆ. ತಾಕತ್ತಿದ್ದರೆ ಕಾಂಗ್ರೆಸಿನವರು ಹಿಂದು ವ್ಯಕ್ತಿಯನ್ನು ಅಲ್ಲಿ ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಲಿ. ಆಮೇಲೆ ನನ್ನ ಹೇಳಿಕೆ ಬಗ್ಗೆ ವಿಮರ್ಶೆ ಮಾಡುತ್ತೇನೆ ಎಂದು ಕಲ್ಲಡ್ಕ ಸವಾಲು ಹಾಕಿದ್ದಾರೆ.
ಪಾಕಿಸ್ತಾನ ಉದಯವಾಗುವುದಕ್ಕಿಂತ ಮೊದಲಿನ ಸ್ಥಿತಿ ಈಗ ಉಳ್ಳಾಲದಲ್ಲಿದೆ. ಕೇರಳದ ಮಲಪ್ಪುರಂ ಜಿಲ್ಲೆ ನಮ್ಮ ದೇಶದ ಒಳಗಿದ್ದರೂ ಅದು ಈಗ ನಮ್ಮ ಕೈಯಲ್ಲಿಲ್ಲ. ಇದೇ ರೀತಿ ಮುಂದಿನ 15 ವರ್ಷದಲ್ಲಿ ಉಳ್ಳಾಲದ ಸ್ಥಿತಿಯಾಗುತ್ತದೆ. ಅದರಲ್ಲಿ ಎರಡು ಮಾತಿಲ್ಲ ಎಂದು ಖಡಕ್ಕಾಗಿಯೇ ಕಲ್ಲಡ್ಕ ಪ್ರಭಾಕರ ಭಟ್ ತನ್ನ ಮಾತಿನ ಬಗ್ಗೆ ಬದ್ಧತೆ ಪ್ರದರ್ಶಿಸಿದ್ದಾರೆ.
ಎರಡು ದಿನಗಳ ಹಿಂದೆ ತಲಪಾಡಿ ಬಳಿಯ ಕಿನ್ಯದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಲ್ಲಡ್ಕ ಭಟ್, ಹಿಂದು ಜನಸಂಖ್ಯೆ ಕಡಿಮೆಯಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸುತ್ತಾ ಪಾಕಿಸ್ತಾನ ಉಗಮದ ಬಗ್ಗೆ ಹೇಳಿದ್ದರು. ಅವರ ವರ್ಗ ಹೆಚ್ಚಾದಾಗ ಪಾಕ್ ಉದಯವಾಗಿತ್ತು. ಈಗ ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನಕ್ಕೆ ಹೋದಂತಾಗುತ್ತದೆ ಎಂದು ಹೇಳಿದ್ದರು.
Stirring yet another controversty, RSS leader Kalladka Bhat said that the Muslim-dominated Ullal constituency has become 'like Pakistan'. If not Give rise to a Hindu leader as a MLA from ullal he said.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am