ಬ್ರೇಕಿಂಗ್ ನ್ಯೂಸ್
15-07-23 07:24 pm Mangalore Correspondent ಕರಾವಳಿ
ಮಂಗಳೂರು, ಜುಲೈ 15: ತುಳುನಾಡಿನ ಆರಾಧ್ಯ ದೈವ ಕೊರಗಜ್ಜ ಹಾಗೂ ಬಿಜೆಪಿ ಶಾಸಕ ಭರತ್ ಶೆಟ್ಟಿ ಬಗ್ಗೆ ಅವಹೇಳನಕಾರಿ ಬರಹಗಳನ್ನು ಬರೆದು ಹಿಂದುಗಳ ಭಾವನೆಗೆ ಧಕ್ಕೆ ತರುವುದು ಮತ್ತು ಕೋಮು ಪ್ರಚೋದನೆ ಮಾಡುವ ದುಷ್ಕೃತ್ಯಗಳು ಜಾಲತಾಣದಲ್ಲಿ ಕಂಡುಬರುತ್ತಿವೆ. ಇನ್ಸ್ಟಾ ಗ್ರಾಮ್ ನಲ್ಲಿ ಬ್ಯಾರಿ ಕಿಂಗ್ ಹಾಗು ಇನ್ನಿತರ ಖಾತೆಗಳಲ್ಲಿ ಈ ರೀತಿಯ ಪೋಸ್ಟ್ ಹರಿಯಬಿಡುತ್ತಿದ್ದು ಇವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಮಂಗಳೂರು ಉತ್ತರ ಕ್ಷೇತ್ರದ ಯುವಮೋರ್ಚಾ ಮಂಡಲ ವತಿಯಿಂದ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಗೆ ದೂರು ನೀಡಲಾಗಿದೆ.
ಈ ಕುರಿತು ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಉತ್ತರ ಕ್ಷೇತ್ರದ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ, ಹಿಂದುಗಳ ಭಾವನೆಗೆ ಧಕ್ಕೆ ತರುವ ರೀತಿ ಅಥವಾ ನಮ್ಮ ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕುವುದನ್ನು ಯಾವುದೇ ಕಾರಣಕ್ಕೂ ಸಹಿಸಲಾಗದು. ಇದರ ಹಿಂದಿರುವ ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಬೇಕು. ಇಂತಹ ಪೋಸ್ಟ್ ಗಳನ್ನು ಷೇರ್ ಮಾಡುವವರ ವಿರುದ್ಧ ಸೈಬರ್ ಕ್ರೈಂ ಕಾನೂನಿನ ಅನ್ವಯ ಕೇಸು ದಾಖಲಿಸಬೇಕು. ಕೋಮುಗಲಭೆಗೆ ಪ್ರಚೋದನೆ ನೀಡಿ, ಸಮಾಜದಲ್ಲಿ ಶಾಂತಿ ಕದಡುವ ಉದ್ದೇಶ ಇದರ ಹಿಂದಿದೆ. ಪೊಲೀಸ್ ಇಲಾಖೆ ಎಚ್ಚತ್ತು ಕ್ರಮ ಕೈಗೊಳ್ಳದೇ ಇದ್ದರೆ ಎಲ್ಲ ಪೊಲೀಸ್ ಠಾಣೆಗಳ ಮುಂದೆಯೂ ಪ್ರತಿಭಟನೆ ನಡೆಸಬೇಕಾದೀತು ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಬ್ಯಾರಿ ಕಿಂಗ್ ಹೆಸರಿನಲ್ಲಿ ತನ್ನ ವಿರುದ್ಧ ಮಾನಹಾನಿ ಪೋಸ್ಟ್ ಹಾಕುತ್ತಿರುವ ಬಗ್ಗೆ ಶಾಸಕ ಡಾಕ್ಟರ್ ಭರತ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದು ತೆರೆಮರೆಯಲ್ಲಿ ಕುಳಿತು ಕೆಲಸ ಮಾಡುವ ಕಾಣದ ಕೈಗಳ ದುಷ್ಕ್ರತ್ಯಗಳನ್ನು ಹೇಗೆ ನಿಲ್ಲಿಸಬೇಕು ಎಂಬುದು ತನಗೆ ತಿಳಿದಿದೆ ಎಂದು ಹೇಳಿದ್ದಾರೆ.
Facebook named after Beary King post deformative post against MLA Bharath Shetty, complaint filed by BJP Yuvamorcha in Mangalore.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm