ಬ್ರೇಕಿಂಗ್ ನ್ಯೂಸ್
22-07-23 07:34 pm Mangalore Correspondent ಕರಾವಳಿ
ಉಳ್ಳಾಲ, ಜು.22: ಇಂದು ಮಧ್ಯಾಹ್ನ ಬೀಸಿದ ಭಾರೀ ಬಿರುಗಾಳಿಗೆ ತೊಕ್ಕೊಟ್ಟು ಫ್ಲೈ ಓವರ್ ಬಳಿಯ ವಾಣಿಜ್ಯ ಕಟ್ಟಡವೊಂದರ ಮೂರನೇ ಮಹಡಿಯಲ್ಲಿ ಅಳವಡಿಸಿದ್ದ ಬೃಹತ್ ಹೋರ್ಡಿಂಗ್ ಮುರಿದು ಬಿದ್ದ ಪರಿಣಾಮ ಪಾದಚಾರಿ ವೃದ್ಧರೋರ್ವರು ಗಾಯಗೊಂಡಿದ್ದು, ತೊಕ್ಕೊಟ್ಟಿನಲ್ಲಿ ಕೆಲಹೊತ್ತು ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಶನಿವಾರ ಮಧ್ಯಾಹ್ನ ಬೀಸಿದ ಬಿರುಗಾಳಿಗೆ ತೊಕ್ಕೊಟ್ಟಿನ ಗಂಗಾ ಕಾಂಪ್ಲೆಕ್ಸ್ ನ ಮೂರನೇ ಮಹಡಿಯಲ್ಲಿ ಅಳವಡಿಸಲಾಗಿದ್ದ ಬೃಹತ್ ಹೋರ್ಡಿಂಗ್ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಹೋರ್ಡಿಂಗ್ ಕೆಳಗೆ ಬೀಳದೆ ಕಟ್ಟಡದಲ್ಲೇ ಜೋತು ಬಿದ್ದ ಪರಿಣಾಮ ಯಾವುದೇ ದೊಡ್ಡ ಹಾನಿ ಉಂಟಾಗಿಲ್ಲ. ತೊಕ್ಕೊಟ್ಟು ಒಳಪೇಟೆ ಸಂಪರ್ಕ ರಸ್ತೆಯ ಬದಿಯಲ್ಲಿ ಇರುವ ಕಾಂಪ್ಲೆಕ್ಸ್ ನಲ್ಲಿ ಘಟನೆ ಸಂಭವಿಸಿದೆ. ನಿತ್ಯವೂ ಈ ಭಾಗದಲ್ಲಿ ಜನ ಸಂಚರಿಸುತ್ತಿದ್ದು ಹೋರ್ಡಿಂಗ್ ನೆಲಕ್ಕೆ ಬೀಳದ ಕಾರಣ ಸಂಭಾವ್ಯ ಅನಾಹುತ ತಪ್ಪಿದೆ.



ತೊಕ್ಕೊಟ್ಟು ಒಳಪೇಟೆಯಿಂದ ಹೆದ್ದಾರಿಗೆ ಬರುತ್ತಿದ್ದ ವೃದ್ಧರೋರ್ವರ ಮೈಗೆ ಹೋರ್ಡಿಂಗ್ನ ಕಬ್ಬಿಣದ ಸಲಾಕೆ ಬಿದ್ದು ಗಾಯವಾಗಿದ್ದು ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಟಿ ಜಿಟಿ ಸುರಿಯುತ್ತಿರುವ ಮಳೆಯ ನಡುವೆ ಕ್ರೇನ್ ಮುಖಾಂತರ ಹೋರ್ಡಿಂಗನ್ನ ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದ್ದು ವಾಹನ ಸಂಚಾರದಲ್ಲಿ ವ್ಯತ್ಯಯ ಆಗಿದೆ. ಉಳ್ಳಾಲ ಮತ್ತು ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Heavy winds and rain in Mangalore, huge hoarding falls, traffic blocked at Thokottu.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 11:50 am
HK News Desk
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
14-11-25 03:34 pm
Mangalore Correspondent
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
14-11-25 11:16 am
Mangalore Correspondent
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm